ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಜೂನ್ 20, 2026: ಈ ರಾಶಿಗೆ ಇಂದು ಕೆಲಸ ಕಾರ್ಯದಲ್ಲಿ ಹೆಚ್ಚಿನ ಯಶಸ್ಸು ಪ್ರಾಪ್ತಿ!

Horoscope Today June 20th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಷಷ್ಢಿ ತಿಥಿ, ಮಘಾ ನಕ್ಷತ್ರದ, ಜೂನ್ 20ನೇ ತಾರೀಖಿನ ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಈ ರಾಶಿಯವರಿಗೆ ಇಂದು ಕೆಲಸ ಕಾರ್ಯದಲ್ಲಿ ಅಭಿವೃದ್ಧಿ

ಇಂಟರ್ ನೆಟ್ ಚಿತ್ರ -

Profile
Pushpa Kumari Jun 20, 2026 6:00 AM

ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ, ಮಘಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ: ಇಂದು ವೃಷಭ ರಾಶಿಗೆ ಕುಜ ಪ್ರವೇಶ ಮಾಡುತ್ತಿದ್ದಾನೆ. ಹೀಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಗೆ ಮನೆಯಲ್ಲಿ ಸ್ವಲ್ಪ ಕಿರಿ ಕಿರಿ ಉಂಟಾಗುವ ದಿನ ಆಗಬಹುದು‌. ಮನೆಯ ಜವಾಬ್ದಾರಿ ಹೆಚ್ಚಿರುವುದರಿಂದ ಕಾರ್ಯಕ್ಷೇತ್ರದಲ್ಲಿ ಅಡೆತಡೆ ಎದುರಾಗಬಹುದು.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಹೆಚ್ಚಿನ ಯಶಸ್ಸು ಹಾಗೂ ಹುರುಪು ಬರಬಹುದು. ಆರೋಗ್ಯದ ಬಗ್ಗೆ ಜಾಗೃತಿ ವಹಿಸಿ

ಮಿಥುನ ರಾಶಿ: ಇಂದು ಈ ರಾಶಿಗೆ ಇಂದು ನಿಮ್ಮ ಮುಂಗೋಪ ದಿಂದ ಸಂಬಂಧವನ್ನು ನೀವು ಕಳೆದುಕೊಳ್ಳಬಹುದು. ಕೆಲವು ಪಾರ್ಟ್ನರ್ಸ್ ಶೀಪ್ ವ್ಯವಹಾರದಲ್ಲಿ ಕೂಡ ನಿಮಗೆ ತೊಂದರೆಗಳು ಉಂಟಾಹಬಹುದು.

ಕಟಕ ರಾಶಿ: ಕಟಕ ರಾಶಿ ಅವರಿಗೆ ಇಂದು ಅತೀ ಉತ್ತಮವಾದ ಗೋಚರ ಇರುತ್ತದೆ‌. ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ. ಹಾಗೂ ಗುಂಪು ಕೆಲಸದಿಂದ ಹೆಚ್ಚಿನ ಯಶಸ್ಸು ನಿಮಗೆ ಸಿಗುತ್ತದೆ.

Vastu Tips: ಮನೆಯಲ್ಲಿ ಇರುವೆಗಳು ಕಾಣಿಸಿದರೆ ಏನರ್ಥ? ಕಪ್ಪು-ಕೆಂಪು ಇರುವೆಗಳು ನೀಡುವ ಶುಭ-ಅಶುಭ ಸಂಕೇತಗಳು ಇವು

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಬಹಳಷ್ಟು ಯಶಸ್ಸು ಫಲ ಮಿಮಗೆ ಸಿಗುತ್ತದೆ. ನೀವು ಪಟ್ಟ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಭಾಗ್ಯೋದಯವಾದ ದಿನವಾಗಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಆದರೆ ನಿಮ್ಮ ಮುಂಗೋಪತನ ಕಡಿಮೆ ಮಾಡಿದರೆ ಒಳಿತು.

ತುಲಾ ರಾಶಿ: ತುಲಾ ರಾಶಿ ಅವರಿಗೆ ಕಷ್ಟಕರವಾದ ದಿನವಾಗಿದೆ. ಕಾರ್ಯಕ್ಷೇತ್ರದಲ್ಲಿ ಇಂದು ನಿಮಗೆ ತೊಂದರೆ ಎದುರಾಗಬಹುದು. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಇಂದು ಟೀಕೆಗಳನ್ನು ಕೇಳಬೇಕಾಗಿ ಬರಬಹುದು.

ವೃಶ್ಚಿಕ ರಾಶಿ: ಈ ರಾಶಿಗೆ ಕಷ್ಟಕರವಾದ ದಿನವಾಗಿದೆ. ಪ್ರೇಮ ಪ್ರೀತಿ ಪ್ರಕರಣದಲ್ಲಿ ತೊಂದರೆ ಉಂಟಾಗಬಹುದು. ವೈಯಕ್ತಿಕ ಜೀವನದಲ್ಲಿ ತೊಂದರೆ ಎದುರಾಗಬಹುದು.

ಧನಸ್ಸು ರಾಶಿ: ಧನಸ್ಸು ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಆತ್ಮವಿಶ್ವಾಸ ಇಂದು ಹೆಚ್ಚಾಗಿದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಕ್ರಿಯಾತ್ಮಕ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಹಣಕಾಸಿನ ವಿಚಾರದಲ್ಲೂ ಲಾಭದಾಯಕ ದಿನ ನಿಮ್ಮದು ಆಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಆಸ್ತಿ ಪಾಸ್ತಿ ಕೋರ್ಟ್ ವ್ಯವಹಾರದಲ್ಲಿ ತೊಂದರೆ ಆದರೆ ಆತ್ಮವಿಶ್ವಾಸದಿಂದ ಇದ್ದರೆ ಯಾವುದೇ ಕೆಲಸದಲ್ಲಿ ಯಶಸ್ಸು ಸಿಗಬಹುದು.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮೀಡಿಯಾ, ಮಾರ್ಕೆಟಿಂಗ್ ವ್ಯವಹಾರದಲ್ಲಿ ಯಶಸ್ಸು ಹಾಗೂ ಆತ್ಮವಿಶ್ವಾಸ ಇಂದು ಹೆಚ್ಚಾಗಬಹುದು.