ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಎಪ್ರಿಲ್ 19, 2026: ವೃಷಭ ರಾಶಿಗೆ ಶುಕ್ರನ ಪ್ರವೇಶದಿಂದ ಇವರಿಗೆ ಯಶಸ್ಸು!

Horoscope Today April 19: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲಪಕ್ಷದ, ದ್ವಿತೀಯ ತಿಥಿ, ಎಪ್ರಿಲ್ 19 ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

ಈ ರಾಶಿಗೆ ಇಂದು ಕನಸುಗಳು ಈಡೇರುವ ದಿನ!

ಇಂಟರ್ ನೆಟ್ ಚಿತ್ರ -

Profile
Pushpa Kumari Apr 19, 2026 6:00 AM

ಬೆಂಗಳೂರು: ಇಂದು ಪರಾಭವ ನಾಮ ಸಂವತ್ಸರದ ಉತ್ತರಾಯಣ,ವಸಂತ ಋತು, ವೈಶಾಖ ಮಾಸೆ, ದ್ವೀತಿಯ ತಿಥಿ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಇಂದು ವೃಷಭ ರಾಶಿಗೆ ಶುಕ್ರ ಪ್ರವೇಶ ಮಾಡುತ್ತಿದ್ದಾನೆ. ಹೀಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುತ್ತದೆ‌. ಮೇಷ ರಾಶಿಗೆ ಉತ್ತಮವಾದ ದಿನವಾಗಿದ್ದು ಧನ ಆಗಮನದ ಸೂಚನೆಗಳು ಇವೆ. ಮನೆಯಲ್ಲಿ ಖುಷಿ ನೆಮ್ಮದಿ ಹರಿದು ಬರಲಿದ್ದು ಸಂತಸದ ವಾತಾವರಣ ಇರುತ್ತದೆ.

ವೃಷಭ ರಾಶಿ: ವೃಷಭ ರಾಶಿ ಅವರಿಗೆ ಶತ್ರುಗಳು ಹಿಮ್ಮೆಟ್ಟಬಹುದು. ಎಲ್ಲ ಕೆಲಸ ಕಾರ್ಯದಲ್ಲಿ ಜಯವನ್ನು ನೀವು ಕಾಣಬಹುದು. ಇಂದು ಹೊಸ ಸ್ನೇಹಿತರ ಪರಿಚಯ ನಿಮಗೆ ಆಗಬಹುದು.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಕಷ್ಟಕರವಾದ ದಿನವಾಗಿದೆ. ಮಿತ್ರತ್ವದಲ್ಲಿ ಹೆಚ್ಚಿನ ಒಡಕು ಕಾಣುವ ಸಾಧ್ಯತೆಗಳು ಹೆಚ್ಚಿದೆ.ಇತರರಿಗೆ ನೋವು ಉಂಟಾಗದಂತೆ ನಡೆದುಕೊಳ್ಳಿ. ಅದೇ ರೀತಿ ಮಾತಿನ ಮೇಲೆಯೂ ನಿಗಾ ವಹಿಸಿ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಇಷ್ಟಾರ್ಥ ಸಿದ್ದಿಯಾಗಲಿದ್ದು ಮಿತ್ರರಿಂದ ಲಾಭವಾಗುವ ದಿನವಾಗುತ್ತದೆ. ಮನಸ್ಸಿಗೆ ಅತೀ ಹೆಚ್ಚಿನ ನೆಮ್ಮದಿಯೂ ಪ್ರಾಪ್ತಿಯಾಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಹೆಂಗಸರಿಂದ ಕಾರ್ಯಕ್ಷೇತ್ರದಲ್ಲಿ ತೊಂದರೆ ಉಂಟಾಗಬಹುದು. ಹಾಗಾಗಿ ಅತೀ ಜಾಗರೂಕತೆಯಿಂದ ನೀವು ಎಲ್ಲವವನ್ನು ನಿಭಾಯಿಸಬೇಕಾಗುತ್ತದೆ.

Vastu Tips: ವಾಸ್ತು ಶಾಸ್ತ್ರ ಹೇಳುವ ರಹಸ್ಯ ಇದು; ಮನೆಯ ಸಂಪತ್ತು ಹೆಚ್ಚಾಗಲು ಈ ದೇವರ ಫೋಟೋಗಳನ್ನ ಇಡಿ

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಭಾಗ್ಯೋದಯವಾದ ದಿನವಾಗಿದೆ. ಅತೀ ಹೆಚ್ಚಿನ ಶುಭ ಸಮಾರಂಭಗಳಲ್ಲಿ ನೀವು ಪಾಲ್ಗೊಳ್ಳಬಹುದು. ಅತೀ ಹೆಚ್ಚಿನ ನೆಮ್ಮದಿ ಕೂಡ ಪ್ರಾಪ್ತಿಯಾಗುತ್ತದೆ.

ತುಲಾ ರಾಶಿ: ತುಲಾ ರಾಶಿಯವರಿಗೆ ಅತೀ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇರಲಿದ್ದು ಹಿಂದೆ ಇದ್ದ ಸಮಸ್ಯೆ ಗಳಿಗೆ ಪರಿಹಾರ ಸಿಗುವ ದಿನವಾಗುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಕಷ್ಟಕರವಾದ ಗೋಚರ ಇರುತ್ತದೆ. ಮಿತ್ರತ್ವದಲ್ಲಿ ಒಡಕು ಹಾಗೂ ಹೆಂಗಸರಿಂದ ತೊಂದರೆಯಾಗಲಿದೆ. ಹೀಗಾಗಿ ಗೌರವದಿಂದ ನಡೆಸಿಕೊಳ್ಳುವುದು ಅವಶ್ಯಕ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಕಷ್ಟಕರವಾದ ದಿನವಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ. ಇಂದು ಕಲಹ ಉಂಟಾಗುವ ಸಾಧ್ಯತೆ ಕೂಡ ಇರುತ್ತದೆ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ‌. ಹಣಕಾಸಿನ ವಿಚಾರದಲ್ಲೂ ನಿಮಗೆ ಲಾಭ ಸಿಗುವ ದಿನವಾಗಿದೆ.

ಕುಂಭರಾಶಿ: ಈ ರಾಶಿಯವರಿಗೆ ಅತೀ ಉತ್ತಮವಾಗಿದೆ.‌ ದಾಂಪತ್ಯದಲ್ಲಿ ನೆಮ್ಮದಿ ಇರುತ್ತದೆ. ಆಸ್ತಿ ಪಾಸ್ತಿ ವಿಚಾರದಲ್ಲಿ ಲಾಭ ಉಂಟಾಗುತ್ತದೆ.

ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ‌‌. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು ಪ್ರಮೋಷನ್ ಸಿಗುವ ಸಾಧ್ಯತೆ ಹೆಚ್ಚಿದೆ.