ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಮೇ 18, 2026: ಎಚ್ಚರ! ಇಂದು ವ್ಯವಹಾರದಲ್ಲಿ ಭಾರಿ ನಷ್ಟವಾಗುವ ಸಾಧ್ಯತೆ

Horoscope Today May 18th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಷಪಕ್ಷ, ದ್ವೀತಿಯ ತಿಥಿ, ರೋಹಿಣಿ ನಕ್ಷತ್ರದ ಮೇ 18ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

ಈ ರಾಶಿಯವರಿಗೆ ಇಂದು ಕಷ್ಟದ ದಿನ

ಇಂಟರ್‌ನೆಟ್ ಚಿತ್ರ -

Profile
Pushpa Kumari May 18, 2026 6:00 AM

ಬೆಂಗಳೂರು, ಮೇ 18: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ದ್ವಿತೀಯ ತಿಥಿ, ರೋಹಿಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮೇಷ ರಾಶಿ: ರೋಹಿಣಿ ನಕ್ಷತ್ರದಲ್ಲಿ ಚಂದ್ರ ಉಚ್ಚನಾಗಿದ್ದಾನೆ. ಹೀಗಾಗಿ ಹೆಚ್ಚಿನವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಸಂಸಾರದ ವಿಚಾರದಲ್ಲಿ ಹೆಚ್ಚಿನ ತೊಂದರೆ ಕಾಡುವ ಸಾಧ್ಯತೆ ಇದೆ‌. ಮನೆಯ ಜವಾಬ್ದಾರಿಯ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಾಗುತ್ತದೆ.

ವೃಷಭ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಹಿಂದಿನ ಎರಡು ಮೂರು ದಿನದಲ್ಲಿ ಇದ್ದ ತೊಂದರೆ ಎಲ್ಲವೂ ಬಗೆಹರಿಯುತ್ತದೆ. ಈ ಹಿಂದೆ ಉಂಟಾದ ಮನಸ್ತಾಪ ಬಗೆಹರಿಯಲಿದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಇಂದು ಮಿತ್ರರಿಂದ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಕೆಲವರ ಮಾತಿನಿಂದ ನಿಮಗೆ ಹೆಚ್ಚು ಬೇಸರ ಉಂಟಾಗಲಿದೆ. ಮಿತ್ರತ್ವದಲ್ಲಿ ಹೆಚ್ಚಿನ ಒಡಕು ಕಾಣುವ ಸಾಧ್ಯತೆ ಇದೆ.

ಕಟಕ ರಾಶಿ: ಕಟಕ ರಾಶಿಯವರಿಗೆ ಭಾವುಕತೆ ಕಾಡುವ ಸಾಧ್ಯತೆ ಇದೆ. ಅದೇ ರೀತಿ ಗುಂಪು ಕೆಲಸದಿಂದ ಧನಾಗಮನವಾಗಲಿದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಇತರರಿಂದ ಅತೀ ಹೆಚ್ಚಿನ ಸಹಕಾರ ದೊರೆಯಲಿದೆ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದು ಅದೃಷ್ಟದ ದಿನವಾಗಲಿದೆ. ಆದರೆ ಎಲ್ಲರ ಜತೆಗೆ ವಿನಯದಿಂದ ನೀವು ನಡೆದುಕೊಳ್ಳಬೇಕು.

ತುಲಾ ರಾಶಿ: ತುಲಾ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಆದರೆ ಮನಸ್ಸಿಗೆ ಭಾವುಕತೆ ಕಾಡಬಹುದು. ಪ್ರೀತಿ ಪ್ರೇಮ ವಿಚಾರದಲ್ಲಿ ಇಂದು ಬೇಸರ ಉಂಟಾಗುವ ಸಾಧ್ಯತೆ ಇದೆ.

ವಾಸ್ತು ದೋಷ , ಆರೋಗ್ಯ: ಯಾವ ದಿಕ್ಕು ಯಾವ ಅನಾರೋಗ್ಯ ಸಮಸ್ಯೆಗೆ ಕಾರಣ?

ವೃಶ್ಚಿಕ ರಾಶಿ: ಈ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಪಾರ್ಟನರ್‌ ಶಿಪ್ ವ್ಯವಹಾರದಲ್ಲೂ ಲಾಭ ತರುವ ದಿನವಾಗಲಿದೆ. ಅದೇ ರೀತಿ ಆತ್ಮವಿಶ್ವಾಸ ಹೆಚ್ಚಾಗಲಿದ್ದು ಇತರರ ಸಹಕಾರ ಪ್ರಾಪ್ತಿಯಾಗುತ್ತದೆ.

ಧನಸ್ಸು ರಾಶಿ: ಧನಸ್ಸು ರಾಶಿಯವರಿಗೆ ಕಷ್ಟದ ದಿನವಾಗಲಿದೆ. ಸಾಮಾಜಿಕ ಚಟುವಟಿಕೆಯಲ್ಲಿ ಇಂದು ಸ್ವಲ್ಪ ತೊಂದರೆ ಕಾಡುವ ಸಾಧ್ಯತೆ ಇದೆ. ಅದೇ ರೀತಿ ಇಂದು ಶತ್ರುಗಳನ್ನು ನೀವು ಹಿಮ್ಮೆಟ್ಟಿಸಬಹುದು.

ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟದ ದಿನವಾಗಲಿದೆ. ವ್ಯವಹಾರದಲ್ಲಿ ನಷ್ಟ ಉಂಟಾಗಬಹುದು‌. ಅದೇ ರೀತಿ ಮಕ್ಕಳ ವಿಚಾರವಾಗಿ ಸಮಾಧಾನದಿಂದ ವರ್ತಿಸಬೇಕು.

ಕುಂಭರಾಶಿ: ಈ ರಾಶಿಯವರಿಗೆ ಇಂದು ಕಷ್ಟದ ದಿನವಾಗಲಿದೆ. ಹಣಕಾಸಿನ ವಿಚಾರವಾಗಿ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಮೀನ ರಾಶಿ: ಮೀನ ರಾಶಿಯವರಿಗೆ ಉತ್ತಮ ದಿನವಾಗಲಿದೆ. ಕೆಲಸ ಕಾರ್ಯದಲ್ಲಿ ಯಶಸ್ಸು ಸಿಗಲಿದ್ದು, ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಲಾಭದ ದಿನವಾಗಲಿದೆ.