ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಿನ ಭವಿಷ್ಯ, ಮೇ 1, 2026: ಬುಧ ಮೇಷ ರಾಶಿಗೆ ಪ್ರವೇಶ: ಈ ರಾಶಿಗೆ ಸಮಸ್ಯೆಗಳು ಎದುರಾಗುವ ಸಾಧ್ಯತೆ

Horoscope Today May 1: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲಪಕ್ಷದ ಮೇ 1 ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ..

ಈ ರಾಶಿಗೆ ಇಂದು ಕ್ಲಿಷ್ಟಕರವಾದ ದಿನ, ಭಗವಂತನ ಆರಾಧನೆ ಅಗತ್ಯ!

ಇಂಟರ್ ನೆಟ್ ಚಿತ್ರ -

Profile
Pushpa Kumari May 1, 2026 7:11 AM

ಬೆಂಗಳೂರು: ಇಂದು ಪರಾಭವ ನಾಮ ಸಂವತ್ಸರದ ಉತ್ತರಾಯಣ,ವಸಂತ ಋತು, ವೈಶಾಖ ಮಾಸದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದಂತೆ ನಿಮ್ಮ ಭವಿಷ್ಯ ಹೇಗಿದೆ ಎಂದು ತಿಳಿಯಿರಿ.

ಮೇಷ ರಾಶಿ: ಇಂದು ಬುಧ ಮೇಷ ರಾಶಿಯನ್ನು ಪ್ರವೇಶ ಮಾಡುತ್ತಿದ್ದಾನೆ. ಹೀಗಾಗಿ ಹೆಚ್ಚಿನವರಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ನಿಮ್ಮ ಮಾತಿನಲ್ಲಿ ಅಡಚಣೆ, ತೊಂದರೆ ಉಂಟುಮಾಡುವ ಸಾಧ್ಯತೆಗಳು ಹೆಚ್ಚು ಇದೆ.

ವೃಷಭ ರಾಶಿ: ವೃಷಭ ರಾಶಿ ಅವರಿಗೆ ಇಂದು ಮಾತಿನಿಂದ ಸಂಬಂಧ ಕಳೆದು ಕೊಳ್ಳುವ ಸಾಧ್ಯತೆಗಳು ಹೆಚ್ಚು ಇರುತ್ತದೆ. ಹಾಗಾಗಿ ಹೆಚ್ಚಿನ ನಿಗಾ ವಹಿಸಿ ಮಾತನಾಡುವುದು ಸೂಕ್ತ ವಾಗಿರುತ್ತದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿ ಇರುವವರಿಗೆ ಅತೀ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಎಲ್ಲದರಲ್ಲೂ ಗೆಲವು ಸಾಧಿಸುತ್ತೀರಿ. ಮಾತಿನಿಂದ ಎಲ್ಲವನ್ನು ನೀವಿಂದು ಗೆಲ್ಲುತ್ತೀರಿ.

ಕಟಕ ರಾಶಿ: ಕಟಕ ರಾಶಿ ಅವರಿಗೆ ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚು ಯಶಸ್ಸು ಸಿಗುತ್ತದೆ. ಕಾರ್ಯಕ್ಷೇತ್ರದಲ್ಲಿ ದೊಡ್ಡದಾದ ತಿರುವನ್ನು ನೀವು ನೋಡಬಹುದು. ಅದೇ ರೀತಿ ಎಲ್ಲರಿಂದಲೂ ನಿಮಗೆ ಗೌರವ ಪ್ರಾಪ್ತಿಯಾಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಸ್ವಲ್ಪ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ. ಯಾರು ಕೂಡ ಇಂದು ನಿಮ್ಮ ಪರವಾಗಿ ಮಾತನಾಡುವುದಿಲ್ಲ. ಕೆಲವೊಂದು ಸಂಬಂಧದದಲ್ಲಿ ಬಿರುಕು ಉಂಟಾಗುವ ಸಾಧ್ಯತೆ ಕೂಡ ಇರಬಹುದು‌.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಅತ್ಯುತ್ತಮವಾದ ಗೋಚರ ಇರುತ್ತದೆ. ಮನಸ್ಸಿಗೆ ನೆಮ್ಮದಿ ಇದ್ದು ಮಾತಿನಲ್ಲಿ ಯಶಸ್ಸು ಗಳಿಸುತ್ತೀರಿ. ಹಿಂದೆ ಇದ್ದ ನೋವೆಲ್ಲ ಮಾಯವಾಗುವ ದಿನ ಆಗುತ್ತದೆ.

ತುಲಾ ರಾಶಿ: ತುಲಾ ಅವರಿಗೆ ಕಷ್ಟಕರವಾದ ದಿನವಾಗಿದೆ. ನಿಮ್ಮ ಮಾತಿನಿಂದ ಎಲ್ಲವನ್ನು ಕಳೆದು ಕೊಳ್ಳುವ ಸಾಧ್ಯತೆ ಇರುತ್ತದೆ. ಬಹಳನೇ ಕಷ್ಟವಾದ ಸಂದರ್ಭವನ್ನು ನೀವು ನೋಡಬೇಕಾಗಿ ಬರಬಹುದು.

Vastu Tips: Vastu Tips: ಈ ವಾಸ್ತು ನಿಯಮಗಳನ್ನು ಪಾಲಿಸಿದ್ರೆ ಮನೆಯಲ್ಲಿ ಅತ್ತೆ-ಸೊಸೆ ಜಗಳವೇ ಇರೊಲ್ಲ!

ವೃಶ್ಚಿಕ ರಾಶಿ: ಈ ರಾಶಿಗೆ ಉತ್ತಮವಾದ ದಿನವಾಗಿದೆ. ಕಾರ್ಯಕ್ಷೇತ್ರ ದಲ್ಲಿ ಅತೀ ಹೆಚ್ಚಿನ ಯಶಸ್ಸು ಸಿಗುತ್ತದೆ. ಶತ್ರುಗಳನ್ನು ನೀವು ಹಿಮ್ಮೆಟ್ಟಬಹುದು.

ಧನಸ್ಸು ರಾಶಿ: ಧನಸ್ಸು ರಾಶಿಗೆ ಕಷ್ಟಕರವಾದ ದಿನವಾಗಿದೆ. ಪ್ರೇಮ, ಪ್ರೀತಿ ಪ್ರಕರಣದಲ್ಲಿ ತೊಂದರೆ ಉಂಟಾಗಬಹುದು. ಹಣಕಾಸಿನ ವಿಚಾರದಲ್ಲೂ ತೊಂದರೆ ಉಂಟಾಗಬಹುದು.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದ್ದು ನೆಮ್ಮದಿಯ ವಾತಾವರಣ ಇರುತ್ತದೆ. ಮನೆಯಲ್ಲೂ ಸಂತೋಷದ ವಾತಾವರಣ ಇರಬಹುದು‌

ಕುಂಭರಾಶಿ: ಈ ರಾಶಿಯವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಸಹೋದರ- ಸಹೋದರಿ ಯರಲ್ಲಿ ಒಡಕು ಉಂಟಾಗಬಹುದು. ಆತ್ಮವಿಶ್ವಾಸ ಕಳೆದು ಕೊಳ್ಳುವ ಸಾಧ್ಯತೆ ಕೂಡ ಇರುತ್ತದೆ. ಭಗವಂತನ ಆರಾಧನೆ ಅವಶ್ಯಕ

ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದ್ದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗುತ್ತದೆ. ಅದೇ ರೀತಿ ಮನೆಯಲ್ಲೂ ಖುಷಿಯಾದ ವಾತಾವರಣ ಇರುತ್ತದೆ. ಧನ ಆಗಮನದ ಸೂಚನೆ ಕೂಡ ಇರುತ್ತದೆ.