ದಿನ ಭವಿಷ್ಯ, ಜೂನ್ 12, 2026: ಈ ರಾಶಿಯವರಿಗೆ ಆದಾಯ ಇಂದು ಹೆಚ್ಚಾಗುವ ದಿನ!
Horoscope Today June 12th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಭರಣಿ ನಕ್ಷತ್ರದ, ಜೂನ್ 12ನೇ ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..
ಇಂಟರ್ ನೆಟ್ ಚಿತ್ರ -
ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ, ಭರಣಿ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.
ಮೇಷ ರಾಶಿ: ಈ ರಾಶಿಗೆ ಅತೀ ಉತ್ತಮವಾದ ದಿನ ಇಂದು ಆಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಹೆಚ್ಚಿನ ಮಿತ್ರರು ನಿಮಗೆ ಬೆಂಬಲ ನೀಡುತ್ತಾರೆ. ಕಾರ್ಯಕ್ಷೇತ್ರದಲ್ಲಿ ಕೂಡ ಹೆಚ್ಚಿನ ಯಶಸ್ಸು ಕಾಣುತ್ತೀರಿ
ವೃಷಭ ರಾಶಿ: ಈ ರಾಶಿಯವರಿಗೆ ಸ್ವಲ್ಪ ಕಷ್ಟಕರವಾದ ದಿನವಾಗಿದೆ. ಮಿತ್ರರಿಂದ ಮನಸ್ಸಿಗೆ ತೊಂದರೆಗಳು ಉಂಟಾಗಬಹುದು. ಯಾರು ಮಿತ್ರರು ಯಾರು ಶತ್ರುಗಳು ಎನ್ನುವ ಗೊಂದಲ ನಿಮಗೆ ಬರಬಹುದು.
ಮಿಥುನ ರಾಶಿ: ಈ ರಾಶಿಗೆ ಇಂದು ಅತ್ಯುತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ದಿಯಾಗಲಿದೆ. ಮಿತ್ರರಿಂದ ಧನ ಆಗಮನದ ಸೂಚನೆಗಳು ಕೂಡ ಇವೆ.
ಕಟಕ ರಾಶಿ: ಕಟಕ ರಾಶಿ ಅವರಿಗೆ ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚು ಯಶಸ್ಸು ಸಿಗಲಿದ್ದು ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಹೆಂಗಸರಿಂದ ನಿಮಗೆ ಇಂದು ಒಳಿತಾಗುತ್ತದೆ.
ಸಿಂಹ ರಾಶಿ: ಸಿಂಹ ರಾಶಿಯವರಿಗೆ ಉತ್ತಮವಾದ ದಿನವಾಗಿದ್ದು ಭಾಗ್ಯೋದಯವಾಗುತ್ತದೆ. ಮನಸ್ಸಿಗೆ ನೆಮ್ಮದಿ ಇದ್ದು ನಿಮ್ಮ ಪ್ರತಿಷ್ಠೆ ಜಾಸ್ತಿಯಾಗುತ್ತದೆ.
Vastu Tips: ಅಡುಗೆ ಮನೆಯ ಈ ವಾಸ್ತು ದೋಷ ಕುಟುಂಬ ಕಲಹಕ್ಕೆ ಕಾರಣವಾಗಬಹುದು ಎಚ್ಚರ!
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರಗಳು ಬೇಡ. ಹೆಂಗಸರ ಮೂಲದಿಂದ ನಿಮಗೆ ತೊಂದರೆಗಳು ಎದುರಾಗಬಹುದು
ತುಲಾ ರಾಶಿ: ತುಲಾ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ದಾಂಪತ್ಯದಲ್ಲಿ ಖುಷಿ ಸಿಗುತ್ತದೆ. ಅದೇ ರೀತಿ ಪಾರ್ಟ್ನರ್ಸ್ ಶಿಪ್ ವ್ಯವಹಾರದಲ್ಲೂ ಯಶಸ್ಸು ಸಿಗುತ್ತದೆ
ವೃಶ್ಚಿಕ ರಾಶಿ: ಈ ರಾಶಿಗೆ ಕಾರ್ಯಕ್ಷೇತ್ರದಲ್ಲಿ ಅತೀ ಹೆಚ್ಚಿನ ಯಶಸ್ಸು ಸಿಗುತ್ತದೆ. ಕ್ರೀಡೆ, ಜಿಮ್ ,ಫಿಟ್ನೆಸ್ ವ್ಯವಹಾರ ಮಾಡೋರಿಗೆ ಲಾಭದಾಯಕ ದಿನವಾಗಿದೆ.
ಧನಸ್ಸು ರಾಶಿ: ಧನಸ್ಸು ರಾಶಿಗೆ ಕಷ್ಟಕರವಾದ ದಿನವಾಗಿದೆ. ಮುಖ್ಯವಾದ ಯಾವುದೇ ನಿರ್ಧಾರ ಬೇಡ, ಹಣಕಾಸಿನ ವಿಚಾರವಾಗಿ ನಿಮಗೆ ತೊಂದರೆಗಳು ಉಂಟಾಗುವ ಸಾಧ್ಯತೆ ಇದೆ.
ಮಕರ ರಾಶಿ: ಮಕರ ರಾಶಿಯವರಿಗೆ ಕಷ್ಟಕರವಾದ ದಿನವಾಗಿದೆ. ಮನೆಯಲ್ಲಿ ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬಹುದು. ಕೋರ್ಟ್, ಕಛೇರಿ ವ್ಯವಹಾರದಲ್ಲೂ ತೊಂದರೆ
ಕುಂಭರಾಶಿ: ಈ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಸಹೋದರ ಹಾಗೂ ಸಹೋದರಿ ಯರಿಂದ ನೆಮ್ಮದಿ ಸಿಗುತ್ತದೆ. ಕೆಲಸ ಕಾರ್ಯದಲ್ಲೂ ಯಶಸ್ಸು ಸಿಗುತ್ತದೆ.
ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಲಾಭವನ್ನು ಕಾಣುತ್ತೀರಿ. ಕೆಲಸ ಕಾರ್ಯದಲ್ಲೂ ಇಂದು ನಿಮಗೆ ಜಯ ಪ್ರಾಪ್ತಿ.