About Us Advertise with us Be a Reporter E-Paper

Breaking Newsದೇಶಪ್ರಚಲಿತ

ಸಾಮೂಹಿಕ ಹಲ್ಲೆ: ವರದಿ ಸಲ್ಲಿಸಲು ರಾಜ್ಯಗಳಿಗೆ ಸುಪ್ರೀಂ ಒಂದು ವಾರ ಗಡುವು

ದೆಹಲಿ: ಮುಗ್ಧರ ಮೇಲೆ ನಡೆಯುತ್ತಿರುವ ಗುಂಪು ತಳಿತ ಪ್ರಕರಣಗಳನ್ನು ತಡೆಯಲು ಎಲ್ಲ ರಾಜ್ಯಗಳು ಯಾವೆಲ್ಲಾ ಕ್ರಮಗಳನ್ನು ಕೊಳ್ಳಲಾಗಿದೆ ಎಂಬ ಬಗ್ಗೆ ಮುಂದಿನ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.

ದೇಶದಲ್ಲಿ ಹೆಚ್ಚುತ್ತಿರುವ ಇಂತಹ ಅಮಾನುಷ ಘಟನೆಗಳಿಗೆ ಕಡಿವಾಣ ಹಾಕುವಂತೆ ಕೋರಿ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ ಗಾಂಧಿ ಮತ್ತು ಸಾಮಾಜಿಕ ಹೋರಾಟಗಾರ ತೆಹಸೀನ್ ಪೂನಾವಾಲಾ ಅವರು ಸಲ್ಲಿಸಿದ್ದ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಈ ಸೂಚನೆ ನೀಡಿದೆ.

ದೇಶದಲ್ಲಿ ಮುಗ್ಧ ಮತ್ತು ಅಪಮಾಯಕ ಜನರ ಮೇಲೆ ಹೆಚ್ಚುತ್ತಿರುವ ಹಲ್ಲೆ ಮತ್ತು ಹತೆಯಯಂತಹ ಅಮಾನವೀಯ ಘಟನೆಗಳನನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ನ್ಯಾಯಾಲಯ ಹಲವಾರು ಭಾರಿ ನಿರ್ದೇಶನಗಳನ್ನು ನೀಡಿದ್ದು, ಅದರ ಅನ್ವಯ ಏನೆಲ್ಲಾ ಕ್ರಮಗಳನನು ತೆಗೆದುಕೊಳ್ಳಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ನ್ಯಾಯಮೂರ್ತಿಗಲಾದ ಎ.ಎಂ. ಖಾನ್ವಿಲ್ಕರ್ ಮತ್ತು ಡಿವೈ ಅವರಿದ್ದ ಪೀಠ ಸ್ಪಷ್ಟವಾಗಿ ಹೇಳಿದೆ.

ಇಂತಹ ಹೀನ ಕೃತ್ಯಗಳು ಭವಿಷ್ಯದಲ್ಲಿ ಹೊಸ ಸಂಪ್ರದಾಯ ಹುಟ್ಟು ಹಾಕುವ ಅಪಾಯಗಳಿದ್ದು, ಈ ರೀತಿಯ ಅಪರಾಧಗಳನ್ನು ಎಸಗುವವರನ್ನು ಶಿಕ್ಷಿಸಲು ಕೇಂದ್ರ ಸರಕಾರ ಶೀಘ್ರದಲ್ಲೇ ಪ್ರತ್ಯೇಕ ಕಾನೂನು ರಚಿಸುವ ಅಗತ್ಯವಿದೆ ಎಂದೂ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Tags

Related Articles

Leave a Reply

Your email address will not be published. Required fields are marked *

Language
Close