About Us Advertise with us Be a Reporter E-Paper

Breaking Newsದೇಶ
Trending

ಸರಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ: ಸುಪ್ರೀಂ ತೀರ್ಪು

ದೆಹಲಿ: ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಬುಧವಾರ ಈ ಕುರಿತು ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ, 2006ರ ಎಂ.ನಾಗರಾಜು ಅವರ ತೀರ್ಪಿನ ಮರು ಪರಿಶೀಲನೆ ಮಾಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಸರ್ಕಾರಿ ಉದ್ಯೋಗದ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಹೇಳಿದೆ.

ಈ ಪ್ರಕರಣದ ವಿಚಾರಣೆಯನ್ನು ಸಪ್ತ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಲು ಸಂವಿಧಾನಿಕ ಪೀಠ ನಿರಾಕರಿಸಿದೆ. ಪ್ರಾತಿನಿಧ್ಯ ಕೊರತೆ ಮತ್ತು ಹಿಂದುಳಿದಿರುವಿಕೆಯ ದತ್ತಾಂಶಗಳ ಆಧಾರದಲ್ಲಿ ಬಡ್ತಿ ಮೀಸಲಾತಿ ನೀಡಬೇಕು ಎಂದು 2006ರ ತೀರ್ಪಿನಲ್ಲಿ ಹೇಳಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಈ ನಿಯಮ ಕೈ ಬಿಡಬೇಕು ಎಂದು ಒತ್ತಾಯಿಸಿತ್ತು.

Tags

Related Articles

Leave a Reply

Your email address will not be published. Required fields are marked *

Language
Close