ವಿಶ್ವವಾಣಿ

ಸಹಜ ಸ್ಥಿತಿಗೆ ಮರಳುತ್ತಿದೆ ಕೆಂಪೇಗೌಡ ಬಸ್ ನಿಲ್ದಾಣ

ಬೆಂಗಳೂರು: ಕೆಂಪೇಗೌಡ ಬಸ್ ನಿಲ್ದಾಣ ಮೆಜೆಸ್ಟಿಕ್ ಸಹಜ ಸ್ಥಿತಿಯತ್ತ ಮರಳುತ್ತಿದೆ. ಬಸ್ ನಿಲ್ದಾಣದ ಕಡೆಗೆ ಪ್ರಯಾಣಿಕರ ಆಗಮನ ಹಿನ್ನೆಲೆಯಲ್ಲಿ ನಿಧಾನಕ್ಕೆ ಯಥಾಸ್ಥಿತಿಗೆ ಮರಳುತ್ತಿದೆ.

ಬಿಎಂಟಿಸಿ, ಕೆಎಸ್‍ಆರ್ ಟಿಸಿ ಬಸ್ ಸಂಚಾರ ಆರಂಭಗೊಂಡಿದೆ. ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಬಸ್ ಸಂಚಾರ ಆರಂಭಿಸಿದ್ದಾರೆ. ಪ್ರಯಾಣಿಕರನ್ನು ಕಂಡು ಕೆಎಸ್‍ಆರ್ ಟಿಸಿ ಬಸ್ ಕೂಡ ಸಂಚಾರ ಆರಂಭಿಸಿದೆ. ಕೆಆರ್ ಮಾರುಕಟ್ಟೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭಗೊಂಡಿದೆ. ಕಲಾಸಿಪಾಳ್ಯದಲ್ಲಿರುವ ಖಾಸಗಿ ಬಸ್ ನಿಲ್ದಾಣದಿಂದ ಸಂಚಾರ ಆರಂಭಗೊಂಡಿದೆ. ಅತ್ತಿಬೆಲೆ, ಹೊಸೂರು, ತಮಿಳುನಾಡಿನತ್ತ ಬಸ್ ಸಂಚಾರ ಶುರುವಾಗಿದೆ. ಅಲ್ಲದೆ ಕೆ.ಆರ್.ಮಾರುಕಟ್ಟೆಯಲ್ಲಿ ಒಂದೊಂದೆ ಅಂಗಡಿಗಳನ್ನು ತೆರೆಯಲಾಗುತ್ತಿದೆ.

ಇನ್ನು ಇದಕ್ಕೂ ಮುನ್ನ ಬಿಕೋ ಎನ್ನುತ್ತಿದ್ದ ಮೆಜೆಸ್ಟಿಕ್‍ನಲ್ಲಿ ಶಾಲಾ ಮಕ್ಕಳು ಸ್ಕೇಟಿಂಗ್ ಆಡಿ ಸಂಭ್ರಮಿಸಿದರು.