ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vishwavani Editorial: ಭಾರತದ ಹೆಮ್ಮೆಯ ಕ್ಷಣ

1984ರಲ್ಲಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ಇತಿಹಾಸ ನಿರ್ಮಿಸಿದ ನಾಲ್ಕು ದಶಕಗಳ ನಂತರ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹೋಗುತ್ತಿರುವ ಭಾರತದ ಎರಡನೇ ಗಗನ ಯಾತ್ರಿ. ಇಸ್ರೋ ಗಗನಯಾತ್ರಿ ಆಗಿರುವ ಶುಕ್ಲಾ ಅವರೊಂದಿಗೆ ಅಮೆರಿಕ, ಹಂಗರಿ ಮತ್ತು ಪೋಲೆಂಡ್‌ನ ಗಗನಯಾತ್ರಿಗಳೂ ಅಂತರಿಕ್ಷಕ್ಕೆ ಹಾರಿದ್ದಾರೆ. ಆಕ್ಸಿಯಮ್ ಮಿಷನ್‌ನ ವಿಶೇಷತೆ ಏನೆಂದರೆ ಗಗನ ಯಾತ್ರಿಗಳು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದು ಅಧ್ಯಯನ ಗಳನ್ನು ನಡೆಸಲಿದ್ದಾರೆ.

ಭಾರತದ ಹೆಮ್ಮೆಯ ಕ್ಷಣ

Profile Ashok Nayak Jun 26, 2025 10:53 AM

ಭಾರತದ ಬಾಹ್ಯಾಕಾಶ ಯಾನದಲ್ಲಿ ಒಂದು ದೊಡ್ಡ ಮತ್ತು ಐತಿಹಾಸಿಕ ಕ್ಷಣ ಕೊನೆಗೂ ನೆರವೇರಿದೆ. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದಾರೆ. ಇಸ್ರೋ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು ಹೊತ್ತ ಆಕ್ಸಿಯಮ್-4 ಮಿಷನ್ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಬುಧವಾರದಂದು ಪ್ರಯಾಣ ಬೆಳೆಸಿದೆ.

ತಾಂತ್ರಿಕ ತೊಂದರೆಗಳ ಕಾರಣಕ್ಕೆ ಹಲವು ಬಾರಿ ಆಕ್ಸಿಯಮ್-4 ಮಿಷನ್ ಉಡಾವಣೆ ಮುಂದೂಡ ಲಾಗಿತ್ತು. ಎಲ್ಲಾ ತಾಂತ್ರಿಕ ದೋಷಗಳನ್ನು ಸರಿಪಡಿಸಿದ ಬಳಿಕ ಕಾರ್ಯಾಚರಣೆಗೆ ಸಿದ್ಧಪಡಿಸ ಲಾಗಿತ್ತು. ಬುಧವಾರ ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್‌ಎಕ್ಸ್ ಫಾಲ್ಕನ್-9 ನೌಕೆಯು ತನ್ನ ಪ್ರಯಾಣ ಬೆಳೆಸಿದೆ ಎಂದು ನಾಸಾ ಮತ್ತು ಸ್ಪೇಸ್ ಎಕ್ಸ್ ಅಧಿಕೃತ ಎಕ್ಸ್ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿವೆ.

ಇದನ್ನೂ ಓದಿ: Vishwavani Editorial: ದೀಪದ ಕೆಳಗೇ ಕತ್ತಲು...

1984ರಲ್ಲಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ಇತಿಹಾಸ ನಿರ್ಮಿಸಿದ ನಾಲ್ಕು ದಶಕಗಳ ನಂತರ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಹೋಗುತ್ತಿರುವ ಭಾರತದ ಎರಡನೇ ಗಗನ ಯಾತ್ರಿ. ಇಸ್ರೋ ಗಗನಯಾತ್ರಿ ಆಗಿರುವ ಶುಕ್ಲಾ ಅವರೊಂದಿಗೆ ಅಮೆರಿಕ, ಹಂಗರಿ ಮತ್ತು ಪೋಲೆಂಡ್‌ನ ಗಗನಯಾತ್ರಿಗಳೂ ಅಂತರಿಕ್ಷಕ್ಕೆ ಹಾರಿದ್ದಾರೆ. ಆಕ್ಸಿಯಮ್ ಮಿಷನ್‌ನ ವಿಶೇಷತೆ ಏನೆಂದರೆ ಗಗನ ಯಾತ್ರಿಗಳು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದು ಅಧ್ಯಯನಗಳನ್ನು ನಡೆಸಲಿದ್ದಾರೆ. ಶುಕ್ಲಾ ಅವರು 7 ಪ್ರಯೋಗಗಳನ್ನು ಅಲ್ಲಿ ನಡೆಸ ಲಿದ್ದಾರೆ. ‘ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಇದು ನನ್ನ ಪ್ರಯಾಣದ ಆರಂಭವಲ್ಲ, ಭಾರತದ ಮಾನವ ಸಹಿತ ಬಾಹ್ಯಾಕಾಶಯಾನದ ಆರಂಭವಿದು.

ನೀವೆಲ್ಲರೂ ಈ ಪ್ರಯಾಣದ ಭಾಗವಾಗಿರಬೇಕೆಂದು ನಾನು ಬಯಸುತ್ತೇನೆ. ಜೈ ಹಿಂದ್, ಜೈ ಭಾರತ್’ ಎಂದು ಶುಕ್ಲಾ ಹೇಳಿದ್ದಾರೆ. ಶುಭಾಂಶು ಶುಕ್ಲಾ 1.4 ಶತಕೋಟಿ ಭಾರತೀಯರ ಭರವಸೆಯನ್ನು ಹೊತ್ತುಕೊಂಡು ಬಾಹ್ಯಾಕಾಶಕ್ಕೆ ಹಾರಿದ್ದಾರೆ, ಹಾಗಾಗಿ ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.