About Us Advertise with us Be a Reporter E-Paper

Breaking Newsರಾಜ್ಯ
Trending

ಸತೀಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಜಿ.ಪರಮೇಶ್ವರ್ ತಿರುಗೇಟು

ಬೆಂಗಳೂರು: ಸಮ್ಮಿಶ್ರ ಸರಕಾರ ಇನ್ನೂ ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಿಲ್ಲ ಎಂದು ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. “ಈ ಮಾತು ಅವರ ವೈಯಕ್ತಿಕ ಹೇಳಿಕೆಯಾಗಿದೆ. ಅದಕ್ಕೆಲ್ಲ ಉತ್ತರ ನೀಡಬೇಕಿಲ್ಲ” ಎಂದು ಡಿಸಿಎಂ ಪರಮೇಶ್ವರ್ ಪ್ರತ್ಯುತ್ತರ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ, “ಆರು ತಿಂಗಳಿಂದ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಒಂದು ವೇಳೆ ಟೇಕಾಫ್ ಆಗಿಲ್ಲ ಎಂದು ಅನಿಸಿದರೆ ಅವರು ನಮ್ಮ ಬಳಿ ಬಂದು ಹೇಳಬಹುದು. ಸತೀಶ್ ಜಾರಕಿಹೊಳಿ ಅವರಿಗೆ ಏಕೆ ಹಾಗೇ ಅನ್ನಿಸಿದೆ ಎಂದು ಗೊತ್ತಿಲ್ಲ. ವೈಯಕ್ತಿಕ ಕೆಲಸ ತೊಂದರೆ ಆಗಿದ್ದರೆ ಅಥವಾ ಕ್ಷೇತ್ರದ ಕೆಲಸ ಆಗಿಲ್ಲ ಅಂದರೆ ನಮ್ಮ ಬಳಿ ಬಂದು ಮಾತನಾಡಲಿ” ಎಂದು ತಿಳಿಸಿದರು.

ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು, “ಸಮ್ಮಿಶ್ರ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಿಲ್ಲ, ಕೆಲ ಇಲಾಖೆಗಳು ಮಾತ್ರ ಕೆಲಸ ಮಾಡುತ್ತಿದ್ದು. ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಲು ಮತ್ತಷ್ಟು ಸಮಯ ಬೇಕಿದೆ. ಪಕ್ಷದ ಕೆಲ ಶಾಸಕರಲ್ಲಿ ಅಸಮಾಧಾನವಿದ್ದು, ಎಲ್ಲ ಸರ್ಕಾರದ ವೇಳೆಯಲ್ಲೂ ಶಾಸಕರು ಅಸಮಾಧಾನ ವ್ಯಕ್ತಪಡಿಸುವುದು ಸಾಮಾನ್ಯ. ಸಿದ್ದರಾಮಯ್ಯ ಅವರು ಕೂಡ ಸಿಎಂ ಆಗಿದ್ದಾಗ ಈ ಸಮಸ್ಯೆ ಇತ್ತು. ಆದರೆ ಏನೇ ಸಮಸ್ಯೆಗಳಿದ್ದರೂ ಪಕ್ಷದ ಆಂತರಿಕ ಸಭೆಯಲ್ಲಿ ಬಗೆಹರಿಸಿಕೊಳ್ಳುವುದಾಗಿ” ತಿಳಿಸಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close