About Us Advertise with us Be a Reporter E-Paper

Breaking Newsದೇಶ
Trending

ಎಸ್‍ಸಿ, ಎಸ್‍ಟಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬಂದ್

ಭೋಪಾಲ್: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಲ್ಲಿ ತಿದ್ದುಪಡಿ ತರುವ ಕೇಂದ್ರ ಸರಕಾರದ ಕ್ರಮವನ್ನು ವಿರೋಧಿಸಿ ದಲಿತ ಸಂಘಟನಗೆಳು ಬಂದ್‍ಗೆ ಕರೆ ನೀಡಿವೆ.

ಅಖಿಲ ಭಾರತ ಅಂಬೇಡ್ಕರ್ ಮಹಾಸಭಾ ನೇತೃತ್ವದಲ್ಲಿ ಬಂದ್‍ಗೆ ಕರೆ ನೀಡಲಾಗಿದ್ದು, ವಿವಿಧ ದಲಿತ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿವೆ. ಮಧ್ಯಪ್ರದೇಶ ಹಾಗೂ ಬಿಹಾರದಲ್ಲಿ ಬಂದ್ ಬಿಸಿ ಹೆಚ್ಚಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಳೆದ ಮಾರ್ಚ್ ನಲ್ಲಿ ಸುಪ್ರೀಂ ಕೋರ್ಟ್ ಎಸ್‍ಸಿ, ಎಸ್ಟಿ ಕಾಯ್ದೆಯಲ್ಲಿ ತಿದ್ದುಪಡಿ ತರುವಂತೆ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿತ್ತು. ಹೀಗಾಗಿ ಉತ್ತರಭಾರತದಾದ್ಯಂತ ವ್ಯಾಪಕ ಪ್ರತಿಭಟನೆ ನಡೆದಿತ್ತು.

Tags

Related Articles

Leave a Reply

Your email address will not be published. Required fields are marked *

Language
Close