About Us Advertise with us Be a Reporter E-Paper

ಪ್ರಚಲಿತರಾಜ್ಯ

ಉಚಿತ ಬಸ್ ಪಾಸ್ ಆಗ್ರಹಿಸಿ ಶಾಲಾ-ಕಾಲೇಜು ಬಂದ್

ಬೆಂಗಳೂರು:ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ ಮತ್ತು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ಜಂಟಿಯಾಗಿ ಜುಲೈ 21 ರಂದು ಶಾಲಾ-ಕಾಲೇಜು ಬಂದ್ ಮಾಡಲು ನಿರ್ಧರಿಸಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸ್ಟೂಡೆಂಟ್ ಆರ್ಗನೈಸೇಷನ್‌ನ ರಾಷ್ಟ್ರೀಯ ಉಪಾಧ್ಯಕ್ಷ ವಿ.ಎನ್.ರಾಜಶೇಖರ್ ಮಾತನಾಡಿ, ವಿದ್ಯಾರ್ಥಿಗಳ ಹೋರಾಟದ ಪಲವಾಗಿ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ವಿತರಣೆ ಮಾಡಲಾಗುವುದು ಎಂದು ಹಿಂದಿನ ಕಾಂಗ್ರೆಸ್ ಘೋಷಿಸಿತ್ತು. ಆದರೆ, ಸಮ್ಮಿಶ್ರ ಸರಕಾರವು ಇದುವರೆಗೆ ಯಾವುದೇ ಸರಿಯಾದ ನಿರ್ಣಯ ತೆಗೆದುಕೊಂಡಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಆಘಾತವಾಗಿದೆ ಎಂದು ಹೇಳಿದರು.

ರೈತ, ಬಡವರ ಪರ ಎಂದು ಹೇಳಿಕೊಳ್ಳುವ ಸಮ್ಮಿಶ್ರ ಸರಕಾರ ರೈತ ಮತ್ತು ಬಡವರ ಮಕ್ಕಳಿಗೆ ಅನ್ಯಾಯ ಮಾಡಲು ಮುಂದಾಗಿದೆ. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಾರಿಗೆ ಸಚಿವರು ಸೇರಿದಂತೆ ಇಲಾಖೆಯ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಬಂದ್‌ಗೆ ಕರೆ ನೀಡಿದ್ದು, ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Language
Close