About Us Advertise with us Be a Reporter E-Paper

Breaking Newsದೇಶಪ್ರಚಲಿತ

ಶಾರದಾ ಚಿಟ್ ಫಂಡ್ ಹಗರಣ: ಚಿದಂಬರಂ ಪತ್ನಿ ನಳಿನಿ ಚಿದಂಬರಂಗೆ ಜಾಮಿನು

ಚೆನ್ನೈ: ಶಾರದಾ ಚಿಟ್ ಫಂಡ್ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರ ಪತ್ನಿ ನಳಿನಿ ಚಿದಂಬರಂ ಅವರಿಗೆ ಮದ್ರಾಸ್ ಹೈಕೋರ್ಟ್ ನಾಲ್ಕ ವಾರಗಳ ಮಧ್ಯಂತರ ಜಾಮಿನು ನೀಡಿದೆ.

ಶಾರದಾ ಚಿಟ್ ಫಂಡ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಆರೋಪಪಟ್ಟಿಯಿಂದ ತಮ್ಮ ಹೆಸರನ್ನು ಕೈ ಕೋರಿ ನಳಿನಿ ಚಿದಂಬರಂ ಹೈಕೋರ್ಟ್ ಮೊರೆ ಹೋಗಿದ್ದರು. ಕೋಲ್ಕತಾದ ವಿಶೇಷ ನ್ಯಾಯಾಲಯದಲ್ಲಿ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿತ್ತು.

ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನಳಿನಿ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ನಿಗಧಿತ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಕೋರ್ಟ್ ಗೆ ಮೊರೆ ಹೋಗುವ ಮುನ್ನಎಗ್ಮೋರ್‌ನ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಮುಚ್ಚಳಿಕೆ ಬರೆದುಕೊಡಬೇಕೆಂದು ಆದೇಶ ನೀಡಿದೆ.

Tags

Related Articles

Leave a Reply

Your email address will not be published. Required fields are marked *

Language
Close