ರಮಾನಾಥ್ ರೈ ಕ್ಷಮೆ ಯಾಚಿಸಲು ಶೆಟ್ಟರ್ ಪಟ್ಟು

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ವಿರುದ್ದ ಪ್ರಕರಣ ದಾಖಲಿಸಿ ಎಂದು ಸಚಿವ ರಮಾನಾಥ್ ರೈ ಅವರ ಹೇಳಿಕೆಗೆ ವ್ಯಾಪಕ ಆಕ್ರೋಶಕ್ಕೆ ಒಳಗಾಗಿದೆ.  ಸೋಮವಾರ ಆಡಳಿತ ಹಾಗೂ ಪ್ರತಿಪಕ್ಷಗಳ ಶಾಸಕರ ಮಧ್ಯೆ ಮಾತಿನ ಚಕಾಮಕಿ ನಡೆದಿದೆ.

ವಿಧಾನ ಪರಿಷತ್ ಇಂದಿನ ಕಲಾಪ ಆರಂಭವಾಗುತ್ತಿದ್ದಂತೆ, ವಿಧಾನ ಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ಸಚಿವ ರಮಾನಾಥ್ ರೈ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಸುಳ್ಳು ಪ್ರಕರಣವನ್ನು ಹಾಕಿ ಎನ್ನುವುದು ಸರಿಯಲ್ಲ ಎಂದು ಹೇಳಿದರು.

ಆಹಾರ ಸಚಿವ ಯು.ಟಿ.ಖಾದರ್ ಮಾತನಾಡಿ, ಸಚಿವ ರೈ ಹೆದರಿಕೊಂಡು ಕೂರುವವರಲ್ಲ, ಸಚಿವ ರೈಗೆ ಮುಂಬೈನಿಂದ ಬೆದರಿಕೆ ಕರೆ ವಿಚಾರ. ಆಧಾರ ವಿಲ್ಲದೆ ಏನೂ ಮಾತಾಡುವವರಲ್ಲ ಎಂದು ರೈ ಪರ ವಾದಿಸಿದರು. ಆದರೆ ಪಟ್ಟು ಬಿಡದ ಜಗದೀಶ್ ಶೆಟ್ಟರ್, ರೈ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಪ್ರಭಾಕರ್ ಭಟ್ ಒಬ್ಬ ಪುಕ್ಕಲ ಪ್ರಚೋದನಕಾರಿ, ಭಾಷಣ ಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಬಂಧಿಸಿ ಎಂದು ಅರಣ್ಯ ಸಚಿವ ರಮಾನಾಥ್ ರೈ, ಎಸ್‌ಪೆ ತಾಕೀತು ಮಾಡಿರುವ ವಿಡಿಯೋ ಬಹಿರಂಗವಾಗಿದೆ. ಸಂಪುಟದಿಂದ ರೈ ಅವರನ್ನು ವಜಾಗೊಳಿಸುವಂತೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

ರಮಾನಾಥ್ ರೈ ಡಿಕ್ಟೆಟರ್ ಆಗುವುದು ಬೇಡ, ಯಾರನ್ನ ಬಂಧಿಸಬೇಕು ಎಂಬುದು ಪೊಲೀಸರಿಗೆ ಗೊತ್ತಿದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದರು. ಪ್ರಭಾಕರ್ ಭಟ್ಟರನ್ನು ಬಂಧಿಸಿ, ಉಳಿದ ವಿಚಾರ ನಾನು ನೋಡಿಕೊಳ್ಳುತ್ತೇನೆ ಎಂಬ ಹೇಳಿಕೆ ವ್ಯಾಪಕ ಖಂಡನೆಗೆ ಕಾರಣವಾಗಿದೆ.

One thought on “ರಮಾನಾಥ್ ರೈ ಕ್ಷಮೆ ಯಾಚಿಸಲು ಶೆಟ್ಟರ್ ಪಟ್ಟು

Leave a Reply

Your email address will not be published. Required fields are marked *

two + 18 =

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

 

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

Back To Top