About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಶೀರೂರು ಶ್ರೀ ಪ್ರಕರಣ: ತನಿಖೆ ತೀವ್ರ

ಉಡುಪಿ: ಶೀರೂರು ಲಕ್ಷ್ಮೀವರತೀರ್ಥ ಸ್ವಾಮೀಜಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ಆಪ್ತೆ ರಮ್ಯಾ ಶೆಟ್ಟಿಯನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಎರಡು ಬಾರಿ ವಶಕ್ಕೆ ಪಡೆದು ವಿಚಾರಣೆಗೆ ಪೊಲೀಸರು, ಸೋಮವಾರ ಮತ್ತೆ ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಮತ್ತೊಮ್ಮೆ ಪೊಲೀಸರು ಆಕೆಯನ್ನು ವಶಕ್ಕೆ ಪಡೆದಿರುವುದು ಭಾರೀ ಸಂಶಯಕ್ಕೆ ಗ್ರಾಸವಾಗಿದೆ.

ಆರೋಪದಿಂದ ಹೊರಬರಲು ತಂತ್ರ!

ಶೀರೂರು ಶ್ರೀಗಳಿಗೆ ಚಿಕಿತ್ಸೆ ನೀಡಿದ ಮಣಿಪಾಲ ವೈದ್ಯರು ಶ್ರೀಗಳ ದೇಹದಲ್ಲಿ ವಿಷದ ಅಂಶ ಪತ್ತೆಯಾಗಿದೆ ಎನ್ನುವುದನನು ಈಗಾಗಲೇ ತಿಳಿಸಿದ್ದಾರೆ. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಮದ್ಯ ಸೇವನೆಯಿಂದ ಶ್ರೀಗಳ ಸಾವು ಸಂಭವಿಸಿದೆ ಎನ್ನುವ ಮಾಹಿತಿ ಬಂದಿದ್ದು, ಇದನ್ನು ಈಗಲೇ ಬಹಿರಂಗ ಪಡಿಸಿದರೇ ಪೊಲೀಸರ ಮೇಲೆಯೇ ಗುಮಾನಿ ಬರಬಹುದು ಎಂಬ ಕಾರಣಕ್ಕಾಗಿ ವರದಿಯ ಮಾಹಿತಿಯನ್ನು ಪೊಲೀಸರು ಬಿಡುಗಡೆ ಮಾಡುತ್ತಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

 

ಶ್ರೀಗಳ ಸಾವಿನಲ್ಲಿ ರಮ್ಯಾ ಕೈವಾಡ?: ಶೀರೂರು ಶ್ರೀಗಳ ಸಾವಿನ ಪ್ರಮುಖ ಕೇಂದ್ರ ಬಿಂದುವಾಗಿರುವ ರಮ್ಯಾ ಶೆಟ್ಟಿಯನ್ನು ಪದೇ ಪದೇ ಪೊಲೀಸರು ವಿಚಾರಣೆಗೆ ಒಳಪಡಿಸುತ್ತಿದ್ದು, ಶ್ರೀಗಳ ಸಾವಿನಲ್ಲಿ ಈಕೆಯ ಕೈವಾಡ ಇದೆಯೇ ಎಂಬ ಅನುಮಾನವೂ ವ್ಯಕ್ತವಾಗುತ್ತಿದೆ.

ಈಗಾಗಲೇ ಮರಣೋತ್ತರ ಪರೀಕ್ಷೆಯ ವರದಿ ವಿಳಂಬ ಮಾಡಿದ ಆರೋಪ ತನಿಖಾ ತಂಡದ ಮೇಲೆ ಅದರ ಮೇಲೆ ಮರಣೋತ್ತರ ಪರೀಕ್ಷೆಯಲ್ಲಿ ಬಂದಿರುವ ವರದಿಯನ್ನು ಬಿಡುಗಡೆ ಮಾಡಿದರೆ, ಪ್ರಕರಣವನ್ನು ಪೊಲೀಸರು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂಬ ಆರೋಪ ಬರಬಹುದು ಎಂಬ ಕಾರಣಕ್ಕಾಗಿ ಎಫ್‌ಎಸ್‌ಎಲ್ ವರದಿ ಬರುವವರೆಗೆ ಮರಣೋತ್ತರ ಪರೀಕ್ಷೆಯ ವರದಿಯನ್ನು ಬಿಡುಗಡೆ ಮಾಡದಿರಲು ತನಿಖಾ ತಂಡ ತೀರ್ಮಾನಿಸಿದೆ ಎನ್ನಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close