About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

13 ಜಿಲ್ಲೆೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ: ಶಿವಶಂಖರರೆಡ್ಡಿ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆೆಗಳಲ್ಲಿ ಉಂಟಾಗಿರುವ ಅನಾವೃಷ್ಟಿಯಿಂದ ಸುಮಾರು 2.16 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದೆ ಎಂದು ಕೃಷಿ ಸಚಿವ ಶಿವಶಂಕರರೆಡ್ಡಿ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 13 ಜಿಲ್ಲೆೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಈ ಪರಿಣಾಮ ಈ ಭಾಗಗಳಲ್ಲಿ ಇನ್ನೂ ಬಿತ್ತನೆ ಕಾರ್ಯ ಆರಂಭವಾಗಿಲ್ಲ. ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಬಾಗಲಕೋಟೆ ಚಿತ್ರದುರ್ಗ, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಧಾರವಾಡ ಜಿಲ್ಲೆೆಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಪೂರ್ಣ ನೆಲಕಚ್ಚಿವೆ ಎಂದರು.

ಕೊಪ್ಪಳ, ಬಳ್ಳಾರಿ ಜಿಲ್ಲೆೆಗಳ ಪ್ರಮುಖ ಬೆಳೆಗಳಾದ ಜೋಳ, ಸಜ್ಜೆೆ, ಹತ್ತಿ ಬೆಳೆಗಳು ಸಂಪೂರ್ಣ ನಷ್ಟವಾಗಿವೆ. ಇದರ ಜತೆಗೆ ಭತ್ತ, ಉದ್ದು, ಹೆಸರು, ಕಬ್ಬು, ಶೇಂಗಾ ಬೆಳೆಗಳು ನಿರೀಕ್ಷೆೆ ಮಟ್ಟದಲ್ಲಿ ಬಿತ್ತನೆಯಾಗಿಲ್ಲ ಎಂದು ತಿಳಿಸಿದರು.

ಕರಾವಳಿ, ಮಲೆನಾಡಿನಲ್ಲಿ ಅಧಿಕ: ರಾಜ್ಯದ ವಾಡಿಕೆ ಮಳೆ ಪ್ರಮಾಣ 1156 ಮಿ.ಮೀ. ಆಗಿದ್ದು, ಆಗಸ್ಟ್‌ ವರೆಗೂ 522 ಮಿ.ಮೀ. ಮಳೆಯಾಗಿದೆ. ಜುಲೈನಲ್ಲಿ ಶೇ.10ರಷ್ಟು ಮಳೆ ಕೊರತೆಯಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ 8 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಶೇ.66 ರಷ್ಟು ಬಿತ್ತನೆ ಮಾಡಲಾಗಿದೆ. ಈ ವರ್ಷದಲ್ಲಿ 110 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದಿಸುವ ಗುರಿಯಿದೆ. ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿರುವ ಪ್ರದೇಶಗಳಲ್ಲಿ ಪರ್ಯಾಯ ಬೆಳೆ ಬೆಳೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಡ್ರೋಣ್ ಮೂಲಕ ಸರ್ವೇ

ರಾಜ್ಯದಲ್ಲಿ ರೈತರು ಬೆಳೆದಿರುವ ಬೆಳೆಗಳನ್ನು ಡ್ರೋಣ್ ಮೂಲಕ ಸರ್ವೇ ಮಾಡಲು ಉದ್ದೇಶಿಸಲಾಗಿದೆ. ಇದರಿಂದ ರೈತರು ಯಾವ ಯಾವ ಬೆಳೆ, ಎಷ್ಟು ಪ್ರದೇಶದಲ್ಲಿ ಬೆಳೆದಿದ್ದರೆಂಬ ದತ್ತಾಂಶ ಸಿಗಲಿದೆ. ಇದಕ್ಕಾಗಿ 15ರಿಂದ 20 ಕೋಟಿ ರು. ಖರ್ಚಾಗಲಿದೆ ಎಂದು ಸಚಿವರು ತಿಳಿಸಿದರು.

ರಸಗೊಬ್ಬರ ಕೊರತೆ ಇಲ್ಲ

ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ರಸಗೊಬ್ಬರ ಕೊರತೆಯಾಗಿಲ್ಲ. ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಶೇಖರಣೆ ಮಾಡಲಾಗಿದೆ. ರೈತರು ಈ ಕುರಿತು ಭಯಪಡುವ ಅಗತ್ಯವಿಲ್ಲ ಎಂದು ಸಚಿವ ಶಿವಶಂಕರರೆಡ್ಡಿ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಶೂನ್ಯ ಬಂಡವಾಳ ಕೃಷಿ ಉತ್ತೇಜನಕ್ಕೆೆ ಸದ್ಯದಲ್ಲೇ ಆಂಧ್ರ ಪ್ರದೇಶಕ್ಕೆೆ ಪ್ರವಾಸ ಕೈಗೊಂಡು ಪರಿಸ್ಥಿತಿ ಅವಲೋಕಿಸಲಾಗುವುದು. ಬಯಲು ಸೀಮೆ ಜಿಲ್ಲೆೆಗಳಲ್ಲಿ ಬೆಳೆಯುವ ಸರ್ವೇ ಹಾಗೂ ನೀಲಗಿರಿ ಮರಕ್ಕೆೆ ಪರ್ಯಾಯವಾಗಿ ಎಲಿಫೆಂಟ್ ಬ್ಯಾಬೋ ಬೆಳೆಯುವ ಯೋಜನೆ ರೂಪಿಸಲಾಗಿದೆ. ಮೊದಲಿಗೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆೆಗಳಲ್ಲಿ ಪ್ರಯೋಗಿಕವಾಗಿ ಜಾರಿಗೊಳಿಸಲಾಗುವುದು. ಪ್ರತಿ ಎಕರೆಗೆ ಮೂರು ವರ್ಷಕ್ಕೊಮ್ಮೆ ರೈತರಿಗೆ 4.5 ಲಕ್ಷ ರು. ಆದಾಯ ಸಿಗಲಿದೆ ಎಂದರು.

ರೈತರಿಗೆ ಅಗತ್ಯವಿರುವ ರಸಗೊಬ್ಬರ ಪೂರೈಕೆಯ ಬಳಿಕವೂ 5.31 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ಹಿಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಲಾಗಿದ್ದು, ರೈತರಿಗೆ ಕೊರತೆಯಾಗದಂತೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೃಷಿ ಇಲಾಖೆಯಲ್ಲಿ ಖಾಲಿಯಿರುವ 153 ಸಹಾಯಕ ಕೃಷಿ ಅಧಿಕಾರಿಗಳ ನೇಮಕಕ್ಕೆೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ 588 ಅಧಿಕಾರಿ ಮತ್ತು ಸಿಬ್ಬಂದಿ ನೇಮಕ ಪ್ರಕ್ರಿಿಯೆ ಮುಗಿದಿದ್ದು , 15 ದಿನದಲ್ಲಿ ನೇಮಕ ಆದೇಶ ಹೊರಡಿಸಲಾಗುವುದು.
-ಶಿವಶಂಕರ ರೆಡ್ಡಿ, ಕೃಷಿ ಸಚಿವ

Tags

Related Articles

Leave a Reply

Your email address will not be published. Required fields are marked *

Language
Close