About Us Advertise with us Be a Reporter E-Paper

Breaking Newsದೇಶಪ್ರಚಲಿತ

ಶಾಪಿಂಗ್‍ಗೆ ಕರೆದೊಯ್ಯಲು ಸಾಧ್ಯವಿಲ್ಲ ಎಂದಿದ್ದಕ್ಕೆ ಗೆಳೆಯನನ್ನೇ ಕೊಂದ

ದೆಹಲಿ: ಶಾಪಿಂಗ್‍ಗೆ ಕರೆದೊಯ್ಯಲು ಸಾಧ್ಯವಿಲ್ಲ ಎಂದಿದ್ದಕ್ಕೆ ಕೋಪಗೊಂಡ ಗೆಳೆಯನನ್ನೇ ಹತ್ಯೆಗೈದಿರುವ ಘಟನೆ ದೆಹಲಿಯ ಜಹಾಂಗೀರ್ ಪುರದಲ್ಲಿ ನಡೆದಿದೆ.

ದೀಪಕ್ ಅಲಿಯಾಸ್ ಬಲ್ಲಿ(19) ಮೃತ ಯುವಕ. ಆರೋಪಿಯನ್ನು 19 ವರ್ಷದ ಯೋಗೇಶ್ ಎಂದು ಗುರುತಿಸಲಾಗಿದೆ. ಶಾಪಿಂಗ್‍ಗೆ ಕರೆದೊಯ್ಯುವಂತೆ ಯೋಗೇಶ್, ದೀಪಕ್‍ಗೆ ತಿಳಿಸಿದ್ದಾನೆ. ಈ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದಿತ್ತು. ಇದರಿಂದ ಕೋಪಗೊಂಡ ಯೋಗೇಶ್ ದೀಪಕ್‍ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ದೀಪಕ್ ನನ್ನು ಬಾಬು ಜಗಜೀವನ್ ರಾಮ್ ಮೆಮೋರಿಯಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿ ಯೋಗೇಶ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close