About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಕಿರುಚಿತ್ರ ತಯಾರಿಕೆ ಕಾರ್ಯಾಗಾರ

ಮೈಸೂರು: ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸಹಯೋಗದೊಂದಿಗೆ ದಸರಾ ಚಲನಚಿತ್ರೋತ್ಸವ ಉಪಸಮಿತಿಯವರು ಕಿರುಚಿತ್ರ ತಯಾರಿಕೆ ಕುರಿತ 2 ದಿನಗಳ ಕಾರ್ಯಾಗಾರವನ್ನು ಅ.13, 14 ರಂದು ಮೈಸೂರು ವಿವಿ ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿದೆ.

ಕನ್ನಡ ಚಲನಚಿತ್ರ ನಿರ್ದೇಶಕರು, ಹೆಸರಾಂತ ಚಲನಚಿತ್ರ ತರಬೇತಿ ಸಂಸ್ಥೆೆಗಳ ಪರಿಣಿತ ಸಂಪನ್ಮೂಲ ವ್ಯಕ್ತಿಗಳು ಕಿರುಚಿತ್ರ ತಯಾರಿಕೆಯ ನಾನಾ ಮಜಲುಗಳ ಕುರಿತಂತೆ ಉಪನ್ಯಾಸ ನೀಡಲಿದ್ದು, ಕೆಲವು ಕಿರುಚಿತ್ರಗಳ ಪ್ರತ್ಯಕ್ಷಿಕೆಯು ಸಹ ಇರುತ್ತದೆ. ಈ ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ದಸರಾ ಚಲನಚಿತ್ರೋತ್ಸವ ಉಪಸಮಿತಿಯಿಂದ ಪ್ರಮಾಣ ಪತ್ರ ನೀಡಲಾಗುವುದು.

ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ವಿಧ್ಯಾರ್ಥಿಗಳು, ಸಾರ್ವಜನಿಕರು ನಿಗಧಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಅ.12 ರೊಳಗೆ ಧನ್ವಂತ್ರಿ ರಸ್ತೆಯಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಿದ್ದು, ಗರಿಷ್ಠ 120 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.

ನೋಂದಣಿ ಶುಲ್ಕ 400 ರು. ಇದ್ದು, ಕಾಲೇಜು ವಿದ್ಯಾರ್ಥಿಗಳಿಗೆ ಶುಲ್ಕ 300 ರು. ನಿಗಧಿಪಡಿಸಲಾಗಿದೆ. ಅರ್ಜಿಯ ಜತೆ ವಿದ್ಯಾರ್ಥಿಗಳು ತಮ್ಮ ಕಾಲೇಜಿನಿಂದ ಪಡೆದ ಗುರುತಿನ ಪತ್ರದ ಪ್ರತಿ ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಸಲ್ಲಿಸುವುದು. ಕಾರ್ಯಾಗಾರಕ್ಕೆೆ ನೋಂದಣಿಯಾದವರಿಗೆ ಚಲನಚಿತ್ರೋತ್ಸವದಲ್ಲಿ ಚಲನಚಿತ್ರ ವೀಕ್ಷಿಸಲು ಪಾಸ್ ನೀಡಲಾಗುತ್ತದೆ.

Tags

Related Articles

Leave a Reply

Your email address will not be published. Required fields are marked *

Language
Close