About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ನಡೆದಾಡುವ ದೇವರ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ

ತುಮಕೂರು: ನಡೆದಾಡುವ ದೇವರು, ಸಿದ್ದಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದಿದೆ.

ತಮ್ಮನ್ನು ನೋಡಲು ಬಂದ ಭಕ್ತರನ್ನು ಕಣ್ತೆರೆದು ವೀಕ್ಷಿಸಿದ್ದಾರೆ. ಅಷ್ಟೇ ಅಲ್ಲದೆ ಕಿರಿಯ ಶ್ರೀ ಸಿದ್ದಲಿಂಗಸ್ವಾಮೀಜಿಗಳು ಶ್ರೀಗಳ ಪಾದ ಸ್ಪರ್ಶಿಸಿ ನಮಸ್ಕರಿಸಿದ ವೇಳೆ ಕಣ್ಣು ತೆರೆದು ಮುಗುಳ್ನಕ್ಕಿದ್ದಾರೆ. ಕಿರಿಯ ಶ್ರೀಗಳ ಸಹಾಯದೊಂದಿಗೆ ಇಷ್ಟಲಿಂಗ ಪೂಜೆಯಲ್ಲಿ ನಡೆದಾಡುವ ದೇವರು ಭಾಗಿಯಾಗಿದ್ದು, ಅವರ ಪಕ್ಕದಲ್ಲೇ ಕುಳಿತು ಕಿರಿಯ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.

ಶ್ರೀಗಳ ಆರೋಗ್ಯದಲ್ಲಿ ನಿನ್ನೆಗಿಂತಲೂ ಇಂದು ಚೇತರಿಕೆ ಕಂಡುಬಂದಿದೆ. ಶ್ರೀಗಳು ದಿನದಿಂದ ದಿನಕ್ಕೆ ಉತ್ತಮವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅಲ್ಲದೆ ಎಂದಿನಂತೆ ಇಂದು ಕೂಡ ಶ್ರೀಗಳನ್ನು ನೋಡಲು ಮಠಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಸದ್ಯ ಹಳೇಮಠದಲ್ಲಿ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close