About Us Advertise with us Be a Reporter E-Paper

Breaking Newsದೇಶಪ್ರಚಲಿತ

ಆದಾಯ ತೆರಿಗೆ ವಂಚನೆ ಪ್ರಕರಣ: ಡಿ. 4 ಕ್ಕೆ ವಿಚಾರಣೆ

ದೆಹಲಿ: ಆದಾಯ ತೆರಿಗೆ ಪಾವತಿ ಪ್ರಕರಣವನ್ನು ವಜಾಗೊಳಿಸಲು ನಿರಾಕರಿಸಿದ್ದ ದೆಹಲಿ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಗಳ ಅಂತಿಮ ವಿಚಾರಣೆಯನ್ನು ಡಿಸೆಂಬರ್ 4ರಂದು ನಡೆಸಲು ಸುಪ್ರೀಂಕೋರ್ಟ್ ತೀರ್ಮಾನಿಸಿದೆ.

2011-12ರಲ್ಲಿ ಇವರಿಬ್ಬರೂ ಆದಾಯ ತೆರಿಗೆಯನ್ನು ವಂಚಿಸಿರುವ ಪ್ರಕರಣ ಇದಾಗಿದ್ದು, ಈ ಪ್ರಕರಣವನ್ನು ವಜಾಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು. ಆದಾಯ ತೆರಿಗೆ ಇಲಾಖೆ ಪರ ವಕೀಲರು ನ್ಯಾಯಾಲಯದಲ್ಲಿ ಹಾಜರಿದ್ದರಿಂದ ಸುಪ್ರೀಂಕೋರ್ಟ್ ಯಾರಿಗೂ ನೋಟಿಸ್ ಜಾರಿಗೊಳಿಸಿಲ್ಲ. ಹೈಕೋರ್ಟ್ ಆದೇಶ ವಿಚಾರಣೆಯಲ್ಲಿ ತನ್ನ ವಾದವನ್ನೂ ಆಲಿಸಬೇಕು ಎಂದು ಆದಾಯ ತೆರಿಗೆ ಇಲಾಖೆ ಕೇವಿಯೆಟ್ ಸಲ್ಲಿಸಿತ್ತು.

ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ ಮತ್ತು ಎಸ್.ಎ. ಅಬ್ದುಲ್ ನಜೀರ್ ಅವರನ್ನೊಳಗೊಂಡ ಪೀಠ ಆದಾಯ ತೆರಿಗೆ ಇಲಾಖೆಯು ಹಾಜರಿರುವುದರಿಂದ ನಾವು ಔಪಚಾರಿಕ ನೋಟಿಸ್ ನೀಡುವ ಅಗತ್ಯವಿಲ್ಲ. ಅಂತಿಮ ವಿಚಾರಣೆಯನ್ನು ಡಿ.4ರಂದು ನಡೆಸಲಾಗುವುದು ಎಂದು ತಿಳಿಸಿತು.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಆಸ್ಕರ್ ಫರ್ನಾಂಡೀಸ್ ಅವರು ಸೆಪ್ಟಂಬರ್ 10 ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದರು. ಆದಾಯ ತೆರಿಗೆ ಪ್ರಕರಣವು ನ್ಯಾಶನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದ್ದು, ಇದೇ ಪ್ರಕರಣದಲ್ಲಿ ಇವರೆಲ್ಲರೂ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close