ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gautam Gambhir: ಗಂಭೀರ್‌ಗೆ ಕೊಲೆ ಬೆದರಿಕೆ ಹಾಕಿದ 21 ವರ್ಷದ ವಿದ್ಯಾರ್ಥಿ ಬಂಧನ

ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಜಿಗ್ನೇಶ್‌ ಸಿನ್ಹ ಪರ್ಮಾರ್, ಆತನಿಗೆ ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂದು ಕುಟುಂಬ ಹೇಳಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕೇಂದ್ರ) ಎಂ. ಹರ್ಷವರ್ಧನ್ ತಿಳಿಸಿದ್ದಾರೆ. ಇದೇ ವೇಳೆ ಗಂಭೀರ್ ಅವರಿಗೆ ಈಗಾಗಲೇ ಪೊಲೀಸ್ ಭದ್ರತೆ ಇದೆ. ಹೀಗಾಗಿ ಅವರಿಗೆ ನೀಡಲಾದ ವಿಶೇಷ ಭದ್ರತೆ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಿಲ್ಲ ಎಂದು ಡಿಸಿಪಿ ಹೇಳಿದ್ದಾರೆ.

ಗಂಭೀರ್‌ಗೆ ಕೊಲೆ ಬೆದರಿಕೆ ಹಾಕಿದ 21 ವರ್ಷದ ವಿದ್ಯಾರ್ಥಿ ಬಂಧನ

Profile Abhilash BC Apr 27, 2025 9:24 AM

ನವದೆಹಲಿ: ಎರಡು ದಿನಗಳ ಹಿಂದಷ್ಟೇ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್(Gautam Gambhir) ಅವರಿಗೆ ಇ–ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ(Gautam Gambhir death threat) ಪ್ರಕರಣದಲ್ಲಿ ಇದೀಗ ದೆಹಲಿ ಪೊಲೀಸರು 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಆದರೆ ಬಂಧಿತನಿಗೆ ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂದು ಹೇಳಲಾಗಿದೆ. ಕಳೆದ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ನಡೆದ ಬೆನ್ನಲ್ಲೇ ಗಂಭೀರ್‌ಗೆ ಹತ್ಯೆಗೈಯುವುದಾಗಿ ಐಸಿಸ್ ಕಾಶ್ಮೀರ ಎಂದು ಹೇಳಿಕೊಂಡು ಇ-ಮೇಲ್‌ ಸಂದೇಶದ ಮೂಲಕ ಕೊಲೆ ಬೆದರಿಕೆ ಬಂದಿತ್ತು. ಈ ಕುರಿತು ಗಂಭೀರ್‌ ರಾಜಿಂದರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

2021 ರಲ್ಲಿ ಐಸಿಸ್‌ನಿಂದ ಇದೇ ರೀತಿಯ ಬೆದರಿಕೆ ಬಂದಿತ್ತು. ಹೀಗಾಗಿ ಮತ್ತೊಮ್ಮೆ ಅವರಿಗೆ ಉಗ್ರ ಸಂಘಟನೆಯಿಂದಲೇ ಕೊಲೆ ಬೆದರಿಕೆ ಬಂದಿರಬಹುದೆಂದು ಹೇಳಲಾಗಿತ್ತು. ಆದರೆ ಇದೀಗ ಆರೋಪಿಯನ್ನು ಗುಜರಾತ್ ಮೂಲದ ಜಿಗ್ನೇಶ್‌ ಸಿನ್ಹ ಪರ್ಮಾರ್ ಎಂದು ಗುರುತಿಸಲಾಗಿದೆ.

ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಜಿಗ್ನೇಶ್‌ ಸಿನ್ಹ ಪರ್ಮಾರ್, ಆತನಿಗೆ ಮಾನಸಿಕ ಆರೋಗ್ಯ ಸಮಸ್ಯೆ ಇದೆ ಎಂದು ಕುಟುಂಬ ಹೇಳಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕೇಂದ್ರ) ಎಂ. ಹರ್ಷವರ್ಧನ್ ತಿಳಿಸಿದ್ದಾರೆ.

ಇದನ್ನೂ ಓದಿ IPL 2025: ಹರಾಜಿನ ಎಡವಟ್ಟು ತಂಡದ ವೈಫಲ್ಯಕ್ಕೆ ಕಾರಣ ಎಂದ ಸಿಎಸ್​ಕೆ ಕೋಚ್​

ಗಂಭೀರ್ ಅವರಿಗೆ ಈಗಾಗಲೇ ಪೊಲೀಸ್ ಭದ್ರತೆ ಇದೆ. ಹೀಗಾಗಿ ಅವರಿಗೆ ನೀಡಲಾದ ವಿಶೇಷ ಭದ್ರತೆ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಿಲ್ಲ ಎಂದು ಡಿಸಿಪಿ ಹೇಳಿದ್ದಾರೆ. ಈ ಹಿಂದೆ ಗಂಭೀರ್‌ಗೆ ಜೀವ ಬೆದರಿಕೆ ಬಂದ ವೇಳೆ ಅವರಿಗೆ ಭದ್ರತೆ ಹೆಚ್ಚಿಸಲಾಗಿತ್ತು.

25 ಭಾರತೀಯರು ಹಾಗೂ ಓರ್ವ ನೇಪಾಳಿ ಸೇರಿ 26 ಜನರ ಬಲಿ ಪಡೆದ ಜಮ್ಮು-ಕಾಶ್ಮೀರದ ಪಹಲ್ಗಾಂ ಉಗ್ರ ದಾಳಿಯನ್ನು ಖಂಡಿಸಿ ಗಂಭೀರ್‌ ಟ್ವೀಟ್‌ ಮಾಡಿದ್ದರು. 'ಅಮಾಯಕ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರು ಬೆಲೆ ತೆರುತ್ತಾರೆ. ಭಾರತ ಪ್ರತಿ ದಾಳಿ ಮಾಡಲಿದೆ' ಎಂದು ಗಂಭೀರ್ ಪೋಸ್ಟ್ ಮಾಡಿದ್ದರು.