ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Archana Kottige: ನಟಿ ಅರ್ಚನಾ ಜತೆ ಕ್ರಿಕೆಟಿಗ ಶರತ್​ ವಿವಾಹ

ಅರ್ಚನಾ ಅವರು ಉಷಾ ಗೋವಿಂದರಾಜು ನಿರ್ಮಾಣದ “ಎಲ್ರ ಕಾಲೆಳಿಯತ್ತೆ ಕಾಲ” ಸಿನಿಮಾದಲ್ಲಿ ಚಂದನ್ ಶೆಟ್ಟಿ ಜೊತೆಗೆ ನಾಯಕಿ ಅರ್ಚನಾ ಕೊಟ್ಟಿಗೆ ಅಭಿನಯಿಸಿದ್ದಾರೆ. ಒಂದು ಅಲಂಕಾರ ವಿದ್ಯಾರ್ಥಿ ಹಾಗೂ ಶಬರಿ ಸಿನಿಮಾದಲ್ಲಿ ನಟಿಸಿದ್ದಾರೆ. ಅಷ್ಟೇ ಅಲ್ಲದೆ ಇತ್ತೀಚೆಗೆ ಬಿಡುಗಡೆಗೊಂಡ ಹೊಂದಿಸಿ ಬರೆಯಿರಿ ಚಿತ್ರದಲ್ಲಿಯೂ ನಟಿಸಿದ್ದಾರೆ.

ನಟಿ ಅರ್ಚನಾ ಜತೆ ಕ್ರಿಕೆಟಿಗ ಶರತ್​ ವಿವಾಹ

Profile Abhilash BC Apr 24, 2025 7:10 AM

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್​ ತಂಡದ ವಿಕೆಟ್​ ಕೀಪರ್​-ಬ್ಯಾಟರ್​ ಶರತ್​ ಬಿಆರ್(Sharath BR,)​ ಮತ್ತು ಸ್ಯಾಂಡಲ್​ವುಡ್​ ನಟಿ ಅರ್ಚನಾ ಕೊಟ್ಟಿಗೆ(Archana Kottige) ಬುಧವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಳೆದ 8 ವರ್ಷಗಳಿಂದಲೂ ಸ್ನೇಹಿತರಾಗಿದ್ದ ಇಬ್ಬರು, ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ಕ್ರಿಕೆಟಿಗರಾದ ದೇವದತ್​ ಪಡಿಕ್ಕಲ್​, ಪ್ರಸಿದ್ಧ ಕೃಷ್ಣ, ವೈಶಾಕ್​ ವಿಜಯ್​ಕುಮಾರ್​, ಮನೋಜ್​ ಭಾಂಡಗೆ ಮತ್ತಿತರರು ಸಮಾರಂಭಕ್ಕೆ ಹಾಜರಾಗಿ ನವದಂಪತಿಗೆ ಶುಭ ಹಾರೈಸಿದರು. ಶರತ್ ಕಳೆದ ವರ್ಷ ಐಪಿಎಲ್​ನಲ್ಲಿ ಗುಜರಾತ್​ ಟೈಟಾನ್ಸ್​ ಪರ ಆಡಿದ್ದರು.

ಸ್ಯಾಂಡಲ್‌ವುಡ್‌ ನಟಿ ಅರ್ಚನಾ ಕೊಟ್ಟಿಗೆ ಈಗಾಗಲೇ ಹಲವು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾದಲ್ಲಿ ಚಿಕ್ಕ ಪಾತ್ರದ ಮೂಲಕ ಅರ್ಚನಾ ಕೊಟ್ಟಿಗೆ ಪ್ರೇಕ್ಷಕರ ಗಮನ ಸೆಳೆದಿದ್ದರು.

ಅರ್ಚನಾ ಅವರು ಉಷಾ ಗೋವಿಂದರಾಜು ನಿರ್ಮಾಣದ “ಎಲ್ರ ಕಾಲೆಳಿಯತ್ತೆ ಕಾಲ” ಸಿನಿಮಾದಲ್ಲಿ ಚಂದನ್ ಶೆಟ್ಟಿ ಜೊತೆಗೆ ನಾಯಕಿ ಅರ್ಚನಾ ಕೊಟ್ಟಿಗೆ ಅಭಿನಯಿಸಿದ್ದಾರೆ. ಒಂದು ಅಲಂಕಾರ ವಿದ್ಯಾರ್ಥಿ ಹಾಗೂ ಶಬರಿ ಸಿನಿಮಾದಲ್ಲಿ ನಟಿಸಿದ್ದಾರೆ. ಅಷ್ಟೇ ಅಲ್ಲದೆ ಇತ್ತೀಚೆಗೆ ಬಿಡುಗಡೆಗೊಂಡ ಹೊಂದಿಸಿ ಬರೆಯಿರಿ ಚಿತ್ರದಲ್ಲಿಯೂ ನಟಿಸಿದ್ದಾರೆ.

ಇದನ್ನೂ ಓದಿ IPL 2025 Points Table: ಭಾರೀ ಜಿಗಿತ ಕಂಡ ಮುಂಬೈ; ಆರ್‌ಸಿಬಿಗೆ ಒಂದು ಸ್ಥಾನ ನಷ್ಟ

ಶರತ್‌ ಅವರು 2018ರಲ್ಲಿ ಕೋಲ್ಕತ್ತಾದಲ್ಲಿ ಜಾರ್ಖಂಡ್‌ ವಿರುದ್ಧ ಕರ್ನಾಟಕ ಪರ ಟ್ವೆಂಟಿ20 ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಶರತ್‌ ಬಲಗೈ ಬ್ಯಾಟ್ಸ್‌ಮನ್‌ ಆಗಿದ್ದು, ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಸಾಕಷ್ಟು ಅನುಭವವನ್ನು ಹೊಂದಿದ್ದಾರೆ.