ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup 2025: ಏಷ್ಯಾಕಪ್‌ನಲ್ಲಿ ಅತ್ಯಧಿಕ ಕ್ಯಾಚ್‌ ಹಿಡಿದ ಟಾಪ್‌-5 ಆಟಗಾರರು

ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಹಾಂಗ್ ಕಾಂಗ್ ತಂಡವನ್ನು ಎದುರಿಸಲಿದೆ. 2026 ರಲ್ಲಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ನಾಲ್ಕನೇ ಬಾರಿಗೆ 20 ಓವರ್‌ಗಳ ಮಾದರಿಯಲ್ಲಿ ಸ್ಪರ್ಧೆ ನಡೆಯಲಿದೆ

ಏಷ್ಯಾಕಪ್‌ನಲ್ಲಿ ಅತ್ಯಧಿಕ ಕ್ಯಾಚ್‌ ಹಿಡಿದ ಟಾಪ್‌-5 ಆಟಗಾರರು

-

Abhilash BC Abhilash BC Sep 1, 2025 6:42 PM

ಬೆಂಗಳೂರು: 2025ರ ಏಷ್ಯಾ ಕಪ್(Asia Cup 2025) ಸೆಪ್ಟೆಂಬರ್ 9 ರಂದು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಪಂದ್ಯಾವಳಿ ಆರಂಭವಾಗಲಿದೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಹಾಂಗ್ ಕಾಂಗ್ ತಂಡವನ್ನು ಎದುರಿಸಲಿದೆ. 2026 ರಲ್ಲಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ನಾಲ್ಕನೇ ಬಾರಿಗೆ 20 ಓವರ್‌ಗಳ ಮಾದರಿಯಲ್ಲಿ ಸ್ಪರ್ಧೆ ನಡೆಯಲಿದೆ. ಇದುವರೆಗಿನ ಏಷ್ಯಾ ಕಪ್ ಇತಿಹಾಸದಲ್ಲಿ ಅತ್ಯಧಿಕ ಕ್ಯಾಚ್‌ ಹಿಡಿದ ಆಟಗಾರರ ಪಟ್ಟಿ ಇಲ್ಲಿದೆ.

ಮಹೇಲಾ ಜಯವರ್ಧನೆ

ಶ್ರೀಲಂಕಾದ ಮಾಜಿ ನಾಯಕ ಮತ್ತು ಆಟಗಾರ ಮಹೇಲಾ ಜಯವರ್ಧನೆ ಅವರು ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ ಹಿಡಿದ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ. ಒಟ್ಟು 28 ಪಂದ್ಯಗಳನ್ನು ಆಡಿರುವ ಜಯವರ್ಧನೆ 15 ಕ್ಯಾಚ್‌ಗಳನ್ನು ಹಿಡಿದ್ದಾರೆ.

ಯೂನಿಸ್‌ ಖಾನ್‌

ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಯೂನಿಸ್‌ ಖಾನ್‌ ಅವರು ಏಷ್ಯಾಕಪ್‌ನಲ್ಲಿ 14 ಪಂದ್ಯಗಳನ್ನು ಆಡಿ 14 ಕ್ಯಾಚ್‌ಗಳನ್ನು ಹಿಡಿದು ಕೂಟದಲ್ಲಿ ಅತಿ ಹೆಚ್ಚು ಕ್ಯಾಚ್‌ ಹಿಡಿದ ಆಟಗಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

ಅರವಿಂದ ಡಿ ಸಿಲ್ವಾ

ಶ್ರೀಲಂಕಾದ ಮಾಜಿ ಆಟಗಾರ ಅರವಿಂದ ಡಿ ಸಿಲ್ವಾ ಅವರು ಈ ಯಾದಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಒಟ್ಟು 24 ಪಂದ್ಯಗಳನ್ನು ಆಡಿ 12 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.

ರೋಹಿತ್‌ ಶರ್ಮ

ಭಾರತ ತಂಡದ ಆರಂಭಿಕ ಬ್ಯಾಟರ್‌ ರೋಹಿತ್‌ ಶರ್ಮ ಅವರು 2008-2023ರ ತನಕ ಒಟ್ಟು 28 ಪಂದ್ಯಗಳನ್ನು ಆಡಿ 11 ಕ್ಯಾಚ್‌ಗಳನ್ನು ಹಿಡಿದು ಅತಿ ಹೆಚ್ಚು ಕ್ಯಾಚ್‌ ಹಿಡಿದ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ Asia Cup 2025: ಬಿಸಿಲಿನ ತಾಪ ಹೆಚ್ಚಳ; ಏಷ್ಯಾಕಪ್‌ ಪಂದ್ಯಗಳ ಸಮಯದಲ್ಲಿ ಬದಲಾವಣೆ

ಮುತ್ತಯ್ಯ ಮುರಳೀಧರನ್

ಶ್ರೀಲಂಕಾದ ಮಾಜಿ ಆಟಗಾರ ಮುತ್ತಯ್ಯ ಮುರಳೀಧರನ್ ಅವರು ಏಷ್ಯಾಕಪ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ ಹಿಡಿದ ಆಟಗಾರರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಅವರು 24 ಪಂದ್ಯಗಳನ್ನು ಆಡಿ 10 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.