ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup squad: ಏಷ್ಯಾಕಪ್‌ಗೆ ಭಾರತ ಪ್ಲೇಯಿಂಗ್ ಇಲೆವೆನ್ ಅಂತಿಮ; ಹೀಗಿದೆ ತಂಡ

ಎಲ್ಲರ ಕಣ್ಣುಗಳು ನಾಳೆ ನಡೆಯುವ ಸಭೆಯ ಮೇಲೆ ನೆಟ್ಟಿವೆ. ಏಕೆಂದರೆ ಮುಂದಿನ ವರ್ಷದ ಟಿ20 ವಿಶ್ವಕಪ್‌ಗೆ ಸಿದ್ಧತೆಗಾಗಿ ಈ ತಂಡ ಪ್ರಮುಖ ಪಾತ್ರವಹಿಸಲಿದೆ. 2025 ರ ಐಪಿಎಲ್ ನಂತರ ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾದ ಸೂರ್ಯಕುಮಾರ್ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್‌ ಆಗಿದ್ದಾರೆ ಎಂದು ವರದಿಯಾಗಿದೆ.

ಏಷ್ಯಾಕಪ್‌ಗೆ ಭಾರತ ಪ್ಲೇಯಿಂಗ್ ಇಲೆವೆನ್ ಅಂತಿಮ; ಹೀಗಿದೆ ತಂಡ

Abhilash BC Abhilash BC Aug 18, 2025 12:33 PM

ಮುಂಬಯಿ: ಏಷ್ಯಾಕಪ್‌ ಭಾರತ ತಂಡದ ಆಯ್ಕೆ(Asia Cup squads)ಗೆ ಕ್ಷಣಗಣನೆ ಶುರುವಾಗಿದೆ. ಅಜಿತ್ ಅಗರ್ಕರ್(Ajit Agarkar) ನೇತೃತ್ವದ ಭಾರತೀಯ ಆಯ್ಕೆ ಸಮಿತಿಯು, ಸೆಪ್ಟೆಂಬರ್ 9 ರಂದು ಯುಎಇಯಲ್ಲಿ ಪ್ರಾರಂಭವಾಗುವ ಏಷ್ಯಾ ಕಪ್ ಟಿ20 ಗಾಗಿ ತಂಡವನ್ನು ಆಯ್ಕೆ ಮಾಡಲು ಆಗಸ್ಟ್ 19 ರ ಮಂಗಳವಾರ ಮುಂಬೈನಲ್ಲಿ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav)ಮತ್ತು ತಂಡದ ಆಡಳಿತದೊಂದಿಗೆ ಸಭೆ ಸೇರಲಿದೆ.

ಎಲ್ಲರ ಕಣ್ಣುಗಳು ಈ ಸಭೆಯ ಮೇಲೆ ನೆಟ್ಟಿವೆ. ಏಕೆಂದರೆ ಮುಂದಿನ ವರ್ಷದ ಟಿ20 ವಿಶ್ವಕಪ್‌ಗೆ ಸಿದ್ಧತೆಗಾಗಿ ಈ ತಂಡ ಪ್ರಮುಖ ಪಾತ್ರವಹಿಸಲಿದೆ. 2025 ರ ಐಪಿಎಲ್ ನಂತರ ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾದ ಸೂರ್ಯಕುಮಾರ್ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್‌ ಆಗಿದ್ದಾರೆ ಎಂದು ವರದಿಯಾಗಿದೆ. ಅವರು ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪ್ರಮುಖ ಪಂದ್ಯಾವಳಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ.

ಏತನ್ಮಧ್ಯೆ, 2025 ರ ಐಪಿಎಲ್‌ನಲ್ಲಿ ಸ್ಫೋಟಕ ಬ್ಯಾಟಿಂಗ್‌ ಮೂಲಕ ಭಾರೀ ಸಂಚಲನ ಮೂಡಿಸಿದ್ದ 14 ವರ್ಷದ ವೈಭವ್ ಸೂರ್ಯವಂಶಿಗೆ ಏಷ್ಯಾ ಕಪ್ ತಂಡದಲ್ಲಿ ಸ್ಥಾನ ನೀಡುವಂತೆ ಮಾಜಿ ನಾಯಕ ಮತ್ತು ಮುಖ್ಯ ಆಯ್ಕೆದಾರ ಕ್ರಿಸ್ ಶ್ರೀಕಾಂತ್ ಒತ್ತಾಯಿಸಿದ್ದಾರೆ. ಆದರೆ ಹಿರಿಯ ಆಟಗಾರರು ಇರುವಾಗ ಇವರಿಗೆ ಅವಕಾಶ ಸಿಗುವುದು ಅನುಮಾನ. ತೀವ್ರ ಪೈಪೋಟಿಯಿಂದಾಗಿ ರಿಂಕು ಸಿಂಗ್ ಮತ್ತು ರಿಯಾನ್ ಪರಾಗ್ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ Asia Cup 2025: ಭಾರತ ತಂಡದ ಆಯ್ಕೆಗೆ ಜಸ್‌ಪ್ರೀತ್‌ ಬುಮ್ರಾ ಲಭ್ಯ! ವರದಿ

ಮೊದಲ ಆಯ್ಕೆಯ XI

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.

ಬೆಂಚ್ (5 ಆಟಗಾರರು)

ಯಶಸ್ವಿ ಜೈಸ್ವಾಲ್, ಜಿತೇಶ್ ಶರ್ಮಾ, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ.

ಅವಕಾಶ ಕಳೆದುಕೊಳ್ಳುವ ಸಾಧ್ಯತೆ ಇರುವ ಆಟಗಾರರು

ರಿಂಕು ಸಿಂಗ್, ಶುಭಮನ್ ಗಿಲ್, ಮೊಹಮ್ಮದ್ ಸಿರಾಜ್, ರವಿ ಬಿಷ್ಣೋಯ್, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ವೈಭವ್ ಸೂರ್ಯವಂಶಿ, ಶಿವಂ ದುಬೆ.