IND vs AUS Live Streaming: ಇಂದು ಭಾರತ-ಆಸೀಸ್ ಮೊದಲ ಟಿ20 ಫೈಟ್; ಪಂದ್ಯ ಎಷ್ಟು ಗಂಟೆಗೆ ಆರಂಭ?
ಗಿಲ್ ಮತ್ತು ಅಭಿಷೇಕ್ ಆರಂಭಿಕರಾಗಿ ಇನಿಂಗ್ಸ್ ಆರಂಭಿಸಲಿದಾರೆ. ನಾಯಕ ಸೂರ್ಯಕುಮಾರ್ ಯಾದವ್ ಮೂರನೇ ಕ್ರಮಾಂಕದಲ್ಲಿ ಮತ್ತು ತಿಲಕ್ ವರ್ಮಾ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬರಲಿದ್ದಾರೆ. ಸಂಜು ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಫಿನಿಶರ್ ಪಾತ್ರದಲ್ಲಿ ಸಂಜು ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.
-
Abhilash BC
Oct 29, 2025 8:41 AM
ಕ್ಯಾನ್‌ಬೆರಾ: ವಿಶ್ವದ ನಂ.1 ಹಾಗೂ 2ನೇ ತಂಡಗಳಾಗಿರುವ ಭಾರತ-ಆಸ್ಟ್ರೇಲಿಯ(AUS vs IND 1st T20I) ನಡುವಿನ 5 ಪಂದ್ಯಗಳ ಟಿ-20 ಸರಣಿಯ ಮೊದಲ ಪಂದ್ಯ ಇಂದು(ಬುಧವಾರ) ಮನುಕಾ ಓವೆಲ್‌ನಲ್ಲಿ(Manuka Oval) ನಡೆಯಲಿದೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ಭಾರತ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಪೂರ್ವ ತಯಾರಿಯಾಗಿದೆ. ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1.45ಕ್ಕೆ(IND vs AUS Live Streaming) ಆರಂಭವಾಗಲಿದೆ.
ನಾಯಕ ಸೂರ್ಯಕುಮಾರ್ ಯಾದವ್ ತಮ್ಮ ಬ್ಯಾಟಿಂಗ್ ಲಯ ಕಳೆದುಕೊಂಡಿರುವುದು ಭಾರತಕ್ಕೆ ಚಿಂತೆ ಉಂಟುಮಾಡಿದೆ. ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮ ಅವರು ವಿದೇಶಿ ಪಿಚ್‌ನಲ್ಲಿ ಹೇಗೆ ಆಡಿಯಾರು ಎನ್ನುವುದು ಕೂಡ ಕುತೂಹಲ. ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಜಸ್‌ಪ್ರೀತ್ ಬುಮ್ರಾ ಅವರು ಈ ಸರಣಿಯಲ್ಲಿ ಆಡಲಿದ್ದಾರೆ. ಆದರೆ ಕಾರ್ಯದೊತ್ತಡದ ಕಾರಣ ಎಲ್ಲ ಪಂದ್ಯಗಳಿಗೆ ಲಭ್ಯ ಇರುತ್ತಾರಾ ಎಂದು ಕಾದು ನೋಡಬೇಕಿದೆ.
ಗಿಲ್ ಮತ್ತು ಅಭಿಷೇಕ್ ಆರಂಭಿಕರಾಗಿ ಇನಿಂಗ್ಸ್ ಆರಂಭಿಸಲಿದಾರೆ. ನಾಯಕ ಸೂರ್ಯಕುಮಾರ್ ಯಾದವ್ ಮೂರನೇ ಕ್ರಮಾಂಕದಲ್ಲಿ ಮತ್ತು ತಿಲಕ್ ವರ್ಮಾ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬರಲಿದ್ದಾರೆ. ಸಂಜು ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಫಿನಿಶರ್ ಪಾತ್ರದಲ್ಲಿ ಸಂಜು ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.
ಇದನ್ನೂ ಓದಿ AUS vs IND 1st T20I: ಮೊದಲ ಟಿ20 ಪಂದ್ಯದ ಟೀಮ್ ಕಾಂಬಿನೇಷನ್ ತಿಳಿಸಿದ ಸೂರ್ಯಕುಮಾರ್
ಕಠಿಣ ಪಿಚ್
22 ಟಿ20 ಪಂದ್ಯಗಳಿಗೆ ಆತಿಥ್ಯ ವಹಿಸಿರುವ ಮನುಕಾ ಓವೆಲ್ ಪಿಚ್ ಬ್ಯಾಟಿಂಗ್‌ಗೆ ಸವಾಲಿನ ಪಿಚ್ ಆಗಿದೆ. ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 150 ರನ್ ಆಗಿದೆ. ದಕ್ಷಿಣ ಆಫ್ರಿಕಾ ಮಹಿಳಾ ತಂಡ ಗಳಿಸಿದ 195 ರನ್‌ಗಳು ಇಲ್ಲಿನ ಗರಿಷ್ಠ ಸ್ಕೋರ್ ಆಗಿದೆ.
ಭಾರತ ಸಂಭಾವ್ಯ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ತಿಲಕ್ ವರ್ಮಾ, ಶಿವಂ ದುಬೆ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ರಿಂಕು ಸಿಂಗ್.