ಗಂಭೀರ್ ಆಪ್ತ 2 ಸಹಾಯಕ ಕೋಚ್‌ಗಳು ವಜಾ ಸಾಧ್ಯತೆ!
ಬೌಲಿಂಗ್ ಕೋಚ್ ಮಾರ್ಕೆಲ್ ಹಾಗೂ ರ್‍ಯಾನ್ ಟೆನ್ ಡೊಶ್ಕಾಟೆಗೂ ಗೇಟ್ ಪಾಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ತಂಡದ ಆಯ್ಕೆ, ಆಟಗಾರರ ಕಾರ್ಯದೊತ್ತಡ, ಪಿಚ್‌ಗೆ ತಕ್ಕ ಆಡುವ 11ರ ಬಳಗ ಆಯ್ಕೆ, ತಂಡದ ಸಮತೋಲನ ಕಾಯ್ದುಕೊಳ್ಳುವ ವಿಚಾರದಲ್ಲಿ ಕೋಚ್‌ಗಳ ಕಾರ್ಯವೈಖರಿಗೆ ಬಿಸಿಸಿಐ ಅತೃಪ್ತಿ ಹೊಂದಿದೆ ಎಂದು ಹೇಳಲಾಗುತ್ತಿದೆ.


ನವದೆಹಲಿ: ಭಾರತದ ಕೋಚ್ ಗೌತಮ್ ಗಂಭೀರ್‌ರ(Gautam Gambhir) ಕೋಚಿಂಗ್ ವಿಧಾನದ ಬಗ್ಗೆ ಮಾಜಿ ಕ್ರಿಕೆಟಿಗರಾದ ಸುನಿಲ್ ಗವಾಸ್ಕರ್, ರಿಕಿ ಪಾಂಟಿಂಗ್ ಸೇರಿ ಹಲವರು ಭಾರೀ ಟೀಕೆ ವ್ಯಕ್ತಪಡಿಸಿದ್ದಾರೆ. ಇದರ ಬೆನಲ್ಲೇ ಗಂಭೀರ್‌ರ ಮನವಿಯಂತೆ ಸಹಾಯಕ ಕೋಚ್‌ಗಳಾಗಿ ನೇಮಿಸಲ್ಪಟ್ಟಿದ್ದ ಮಾರ್ನೆ ಮಾರ್ಕೆಲ್(ಬೌಲಿಂಗ್ ಕೋಚ್) ಹಾಗೂ ರ್‍ಯಾನ್ ಟೆನ್ ಡೊಶ್ಕಾಟೆ ಶೀಘ್ರದಲ್ಲೇ ತಮ್ಮ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಳೆದ ವರ್ಷ ಜುಲೈನಲ್ಲಿ ಗಂಭೀರ್ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಜತೆ ಐಪಿಎಲ್ ತಂಡಗಳಲ್ಲಿ ಕಾರ್ಯನಿರ್ವಹಿಸಿದ್ದ ಅಭಿಷೇಕ್ ನಾಯರ್, ಮಾರ್ಕೆಲ್ ಹಾಗೂ ಡೊಶ್ಕಾಟೆರನ್ನು ಗಂಭೀರ್‌ರ ಮನವಿಯಂತೆ ಸಹಾಯಕ ಕೋಚ್‌ಗಳಾಗಿ ನೇಮಿಸಲಾಗಿತ್ತು. ಆದರೆ ತವರಿನಲ್ಲೇ ನ್ಯೂಜಿಲೆಂಡ್ ವಿರುದ್ಧ ವೈಟ್‌ವಾಶ್, ಬಳಿಕ ಆಸ್ಟ್ರೇಲಿಯಾ ಸೋಲಿನಿಂದಾಗಿ ಸಹಾಯಕ ಕೋಚ್‌ಗಳ ಬಗ್ಗೆ ಬಿಸಿಸಿಐ ಅಸಮಾಧಾನ ಹೊಂದಿತ್ತು. ಇದೇ ಕಾರಣಕ್ಕೆ ಸಹಾಯಕ ಕೋಚ್ ಅಭಿಷೇಕ್ ನಾಯರ್‌ರನ್ನು ಹುದ್ದೆಯಿಂದ ವಜಾಗೊಳಿಸಲಾಗಿತ್ತು.
ಇದೀಗ ಬೌಲಿಂಗ್ ಕೋಚ್ ಮಾರ್ಕೆಲ್ ಹಾಗೂ ರ್‍ಯಾನ್ ಟೆನ್ ಡೊಶ್ಕಾಟೆಗೂ ಗೇಟ್ ಪಾಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ತಂಡದ ಆಯ್ಕೆ, ಆಟಗಾರರ ಕಾರ್ಯದೊತ್ತಡ, ಪಿಚ್‌ಗೆ ತಕ್ಕ ಆಡುವ 11ರ ಬಳಗ ಆಯ್ಕೆ, ತಂಡದ ಸಮತೋಲನ ಕಾಯ್ದುಕೊಳ್ಳುವ ವಿಚಾರದಲ್ಲಿ ಕೋಚ್‌ಗಳ ಕಾರ್ಯವೈಖರಿಗೆ ಬಿಸಿಸಿಐ ಅತೃಪ್ತಿ ಹೊಂದಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ IND vs ENG 4th Test: ಟೆಸ್ಟ್‌ನಲ್ಲಿ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ
ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಥಾನಕ್ಕೂ ಕುತ್ತು ತರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ 2023ರ ಜುಲೈನಲ್ಲಿ ಆಯ್ಕೆ ಸಮಿತಿಗೆ ನೇಮಕಗೊಂಡಿದ್ದರು. ಆದರೆ ಕಳೆದೊಂದು ವರ್ಷದಿಂದ ತಂಡದ ಪ್ರದರ್ಶನ ತೀರಾ ಕಳಪೆಯಾಗಿದೆ. ಸಮರ್ಥ ಆಟಗಾರರ ಆಯ್ಕೆಯಲ್ಲಿ ಸಮಿತಿ ಎಡವಿದೆ ಎಂದೇ ವಿಶ್ಲೇಷಿಸಲಾಗುತ್ತಿದ್ದು, ಬಿಸಿಸಿಐ ಕೂಡಾ ಈ ಬಗ್ಗೆ ಅಸಮಾಧಾನ ಹೊಂದಿದೆ ಎನ್ನಲಾಗುತ್ತಿದೆ.