ಮಾಲಿನ್ಯ ಸಮಸ್ಯೆ; ನವೆಂಬರ್ ಟೆಸ್ಟ್ ಪಂದ್ಯವನ್ನು ದೆಹಲಿಯಿಂದ ಸ್ಥಳಾಂತರಿಸಿದ ಬಿಸಿಸಿಐ
ಭಾರತ ತಂಡವು ನವೆಂಬರ್ 14 ರಿಂದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಬೇಕಿತ್ತು. ಆ ಪಂದ್ಯವು ಈಗ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿದೆ. ನವದೆಹಲಿಯು ಪ್ರವಾಸಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಅಕ್ಟೋಬರ್ನಲ್ಲಿ ಕೋಲ್ಕತ್ತಾದಲ್ಲಿ ನಡೆಯಬೇಕಿದ್ದ ಟೆಸ್ಟ್ ಪಂದ್ಯವನ್ನು ಆಯೋಜಿಸಲಿದೆ.


ನವದೆಹಲಿ: 2025–26ರ ಋತುವಿನ ಪುರುಷ ಮತ್ತು ಮಹಿಳಾ ತಂಡಗಳನ್ನು ಒಳಗೊಂಡ ಅಂತಾರಾಷ್ಟ್ರೀಯ ತವರು ಪಂದ್ಯಗಳಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕೆಲವು ಬದಲಾವಣೆಗಳನ್ನು ಮಾಡಿದೆ. ನವೆಂಬರ್ನಲ್ಲಿ ನವದೆಹಲಿಯಲ್ಲಿ ನಡೆಯಬೇಕಿದ್ದ ಟೆಸ್ಟ್ ಪಂದ್ಯವನ್ನು ಸ್ಥಳಾಂತರಿಸಿ ಪರಿಷ್ಕೃತ ವೇಳಾಪಟ್ಟಿಯನ್ನು(BCCI shifts November Test) ಪ್ರಕಟಿಸಿದೆ. ನವೆಂಬರ್ನಲ್ಲಿ ದೆಹಲಿಯಲ್ಲಿ ನಡೆಯಬೇಕಿದ್ದ ಟೆಸ್ಟ್ ಪಂದ್ಯವನ್ನು ಕೋಲ್ಕತ್ತಾಗೆ ಸ್ಥಳಾಂತರಿಸಲಾಗಿದೆ.
ಭಾರತ ತಂಡವು ನವೆಂಬರ್ 14 ರಿಂದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಬೇಕಿತ್ತು. ಆ ಪಂದ್ಯವು ಈಗ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿದೆ. ನವದೆಹಲಿಯು ಪ್ರವಾಸಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಅಕ್ಟೋಬರ್ನಲ್ಲಿ ಕೋಲ್ಕತ್ತಾದಲ್ಲಿ ನಡೆಯಬೇಕಿದ್ದ ಟೆಸ್ಟ್ ಪಂದ್ಯವನ್ನು ಆಯೋಜಿಸಲಿದೆ.
ಈ ಹಿಂದೆಯೇ ಬಿಸಿಸಿಐ ನವೆಂಬರ್ನಲ್ಲಿ ದೆಲಿಯಲ್ಲಿ ಟೆಸ್ಟ್ ಪಂದ್ಯ ಆಯೋಜನೆ ಮಾಡಿದಾಗ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಪ್ರತಿ ವರ್ಷ ಮಳೆಗಾಲ ಮುಗಿದು ಚಳಿಗಾಲ ಕಾಲಿಡುವಾಗ ದಿಲ್ಲಿಯ ಹವಾಮಾನ ಹದಗೆಡುವುದು ಸಾಮಾನ್ಯ ವಿಷಯ. ಇತ್ತೀಚೆಗಿನ ವರ್ಷಗಳಲ್ಲಿ ವಾಯುಮಾಲಿನ್ಯದ ಪ್ರಮಾಣ ಮಿತಿ ಮೀರುವುದು ಹೆಚ್ಚಳವಾಗಿದೆ. ಹೀಗಿರುವಾಗ ಇದೇ ಸಮಯದಲ್ಲಿ ಇಲ್ಲಿ ಟೆಸ್ಟ್ ಪಂದ್ಯ ಆಯೋಜಿಸಿದ್ದು ಸರಿಯಲ್ಲ ಎಂದು ಕ್ರಿಕೆಟ್ ತಜ್ಞರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಆ ಸಮಯದಲ್ಲಿ, ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಕಳವಳಗಳನ್ನು ತಳ್ಳಿಹಾಕಿದ್ದರು. ದೆಹಲಿಯಲ್ಲಿ ಮಾಲಿನ್ಯವು ವರ್ಷಪೂರ್ತಿ ಸಮಸ್ಯೆಯಲ್ಲ ಎಂದು ಹೇಳಿದ್ದರು. ಇದೀಗ ಎಚ್ಚೆತ್ತುಕೊಂಡಿರುವ ಬಿಸಿಸಿಐ ಪಂದ್ಯವನ್ನು ಸ್ಥಳಾಂತರಿಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.
ಇದನ್ನೂ ಓದಿ IPL 2025 Revenue: ಐಪಿಎಲ್ 2025ರಿಂದ ಬಿಸಿಸಿಐಗೆ ಬಂದ ಆದಾಯ ಎಷ್ಟು?
ಮಹಿಳಾ ಸರಣಿಯ ಪಂದ್ಯಗಳಲ್ಲಿಯೂ ಬದಲಾವಣೆ
ಸೆಪ್ಟೆಂಬರ್ 14 ರಿಂದ 20 ರವರೆಗೆ ನಿಗದಿಯಾಗಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಮೂರು ಪಂದ್ಯಗಳ ಏಕದಿನ ಸರಣಿಯ ಸ್ಥಳಗಳಲ್ಲಿಯೂ ಬಿಸಿಸಿಐ ಬದಲಾವಣೆಗಳನ್ನು ಮಾಡಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಔಟ್ಫೀಲ್ಡ್ ಮತ್ತು ಪಿಚ್ಗಳ ನವೀಕರಣ ನಡೆಯುತ್ತಿರುವುದರಿಂದ ಇಲ್ಲಿ ನಿಗದಿಯಾಗದ್ದ ಮೊದಲ ಎರಡು ಏಕದಿನ ಪಂದ್ಯಗಳನ್ನು ಚಂಡೀಗಢಕ್ಕೆ ಸ್ಥಳಾಂತರಿಸಲಾಗಿದೆ. ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.