IND vs WI: 2,000 ರನ್ ಪೂರ್ಣಗೊಳಿಸಿ ಸೂರ್ಯಕುಮಾರ್ ಯಾದವ್ ದಾಖಲೆ ಮುರಿದ ಅಭಿಷೇಕ್ ಶರ್ಮಾ!
ವೆಸ್ಟ್ ಇಂಡೀಸ್ ವಿರುದ್ದದ ಮೂರನೇ ಟಿ20ಐ ಪಂದ್ಯದಲ್ಲಿ ಸ್ಪೋಟಕ ಬ್ಯಾಟ್ ಮಾಡಿದ ಅಭಿಷೇಕ್ ಶರ್ಮಾ ಅರ್ಧಶತಕ ಬಾರಿಸಿದರು. ಇದರ ಜೊತೆಗೆ ತಮ್ಮ ಟಿ20ಐ ವೃತ್ತಿ ಜೀವನದಲ್ಲಿ 2000 ರನ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ ವೇಗವಾಗಿ 2000 ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಸೂರ್ಯಕುಮಾರ್ ಯಾದವ್ ದಾಖಲೆಯನ್ನು ಮುರಿದಿದ್ದಾರೆ.
ಸೂರ್ಯಕುಮಾರ್ ಯಾದವ್ ದಾಖಲೆ ಮುರಿದ ಅಭಿಷೇಕ್ ಶರ್ಮಾ. -
ಇಂದೋರ್: ಇಲ್ಲಿನ ಹೋಳ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆದಿದ್ದ ಮೂರನೇ ಟಿ20ಐ ಪಂದ್ಯದಲ್ಲಿ (IND vs WI) ಭಾರತ ತಂಡದ ಆರಂಭಿಕ ಅಭಿಷೇಕ್ ಶರ್ಮಾ (Abhishek Sharma) ಸ್ಪೋಟಕ ಅರ್ಧಶತಕ ಬಾರಿಸಿದರು. ಆ ಮೂಲಕ ಟೀಮ್ ಇಂಡಿಯಾದ ಗೆಲುವಿಗೆ ನೆರವು ನೀಡಿದರು. ತಮ್ಮ ಅರ್ಧಶತಕದ ಮೂಲಕ ಎಡಗೈ ಬ್ಯಾಟ್ಸ್‌ಮನ್ ಭಾರತ ತಂಡದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಹಿಂದಿಕ್ಕಿದ್ದಾರೆ.
ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸಿದರು. ಕಳೆದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ಸಂಜು ಈ ಪಂದ್ಯದಲ್ಲಿ ವೇಗ ಔಟ್ ಆದರು. ಆದರೆ, ಒಂದು ತುದಿಯಲ್ಲಿ ದೀರ್ಘಾವಧಿ ಬ್ಯಾಟ್ ಮಾಡಿದ ಅಭಿಷೇಕ್ ಶರ್ಮಾ 30 ಎಸೆತಗಳಲ್ಲಿ 69 ರನ್‌ಗಳನ್ನು ಬಾರಿಸಿದರು. ಆ ಮೂಲಕ ಭಾರತ ತಂಡಕ್ಕೆ ಭರ್ಜರಿ ಆರಂಭವನ್ನು ತಂದುಕೊಟ್ಟಿದ್ದರು.
ಅರ್ಧಶತಕದ ಜೊತೆಗೆ ಅಭಿಷೇಕ್ ಶರ್ಮಾ ತಮ್ಮ ಟಿ20ಐ ವೃತ್ತಿ ಜೀವನದಲ್ಲಿ 2000 ರನ್‌ಗಳನ್ನು ಪೂರ್ಣಗೊಳಿಸಿದರು. ಅಲ್ಲದೆ ಟಿ20ಐ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 2000 ರನ್‌ಗಳನ್ನು ಪೂರ್ಣಗೊಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಅಭಿ ಹಿಂದಿಕ್ಕಿದ್ದಾರೆ. 2000 ರನ್‌ಗಳನ್ನು ಪೂರ್ಣಗೊಳಿಸಲು ಅಭಿಷೇಕ್ ಶರ್ಮಾ, 1,024 ಎಸೆತಗಳನ್ನು ತೆಗೆದುಕೊಂಡಿದ್ದರೆ, ಸೂರ್ಯಕುಮಾರ್ ಈ ಮೈಲುಗಲ್ಲು ತಲುಪಲು 1,164 ಎಸೆತಗಳನ್ನು ತೆಗೆದುಕೊಂಡಿದ್ದಾರೆ.
ನವರಾತ್ರಿ ಮೊದಲ ದಿನವೇ ಟೀಮ್ ಇಂಡಿಯಾಕ್ಕೆ ಗೆಲುವಿನ ಸಿಂಚನ; ವಿಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ರೋಚಕ ಜಯ
ವೇಗವಾಗಿ 2000 ಟಿ20ಐ ರನ್ ಗಳಿಸಿದ ಬ್ಯಾಟರ್ಸ್
1024 ಎಸೆತಗಳು- ಅಭಿಷೇಕ್ ಶರ್ಮಾ
1164 ಎಸೆತಗಳು - ಸೂರ್ಯಕುಮಾರ್ ಯಾದವ್
1283 ಎಸೆತಗಳಯ - ಆರೋನ್ ಫಿಂಚ್
1304 ಎಸೆತಗಳು - ಗ್ಲೆನ್ ಮ್ಯಾಕ್ಸ್‌ವೆಲ್
Abhishek Sharma entertained Indore with 30-ball 6⃣9⃣ 💥 🔽 WATCH | #TeamIndia | #INDvWI | @mflone_ | @OfficialAbhi04 https://t.co/cSUFiepRtL
— BCCI (@BCCI) October 11, 2026
223 ರನ್ ದಾಖಲಿಸಿದ ಭಾರತ
ಪಂದ್ಯದ ಬಗ್ಗೆ ಮಾತನಾಡುವುದಾದರೆ, ಮೊದಲು ಬ್ಯಾಟ್ ಮಾಡಿದ್ದ ಟೀಮ್ ಇಂಡಿಯಾಗೆ ಉತ್ತಮ ಆರಂಭ ಸಿಗಲಿಲ್ಲ. ಸಂಜು ಸ್ಯಾಮ್ಸನ್ ಕೇವಲ 3 ರನ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಇಶಾನ್ ಕಿಶನ್ 18 ಎಸೆತಗಳಲ್ಲಿ 37 ರನ್ ಚಚ್ಚಿದರು. 69 ರನ್ ಗಳಿಸಿದ ಅಭಿಷೇಕ್ ಶರ್ಮಾ ಭಾರತದ ಪರ ವೈಯಕ್ತಿಕ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ತಿಲಕ್ ವರ್ಮಾ ಹಾಗೂ ನಿತೀಶ್ ಕುಮಾರ್ ರೆಡ್ಡಿ ಕ್ರಮವಾಗಿ 28 ರನ್ ಹಾಗೂ 21 ರನ್ ಗಳಿಸಿದರು. ಕೊನೆಯಲ್ಲಿ ಅಕ್ಷರ್ ಪಟೇಲ್ 20 ರನ್‌ಗಳ ಕೊಡುಗೆಯನ್ನು ನೀಡಿದರು.ಆ ಮೂಲಕ ಭಾರತ 223 ರನ್‌ಗಳನ್ನು ಕಲೆ ಹಾಕಿತ್ತು.
2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಆಡಲೇಬೇಕೆಂದ ರಾಬಿನ್ ಸಿಂಗ್!
ಬಳಿಕ ಗುರಿಯನ್ನು ಹಿಂಬಾಲಿಸಿದ ವೆಸ್ಟ್ ಇಂಡೀಸ್ ತಂಡ ಕೂಡ ಕಠಿಣ ಹೋರಾಟ ನಡೆಸಿತ್ತು. ಆದರೂ 209 ರನ್‌ಗಳಿಗೆ ಸೀಮಿತವಾಗಿ ಕೇವಲ 14 ರನ್‌ಗಳಿಂದ ಸೋಲು ಅನುಭವಿಸಿತ್ತು. ಕಮಿಲ್ ಪೂರನ್, ಶಿಮ್ರಾನ್ ಹೆಟ್ಮಾಯೆರ್ ಅವರು ಕ್ರಮವಾಗಿ 42 ಮತ್ತು 43 ರನ್‌ಗಳನ್ನು ಗಳಿಸಿದ್ದರು .ಶೆರ್ಫೆನ್ ಋದರ್‌ಫೋರ್ಡ್ 32 ರನ್‌ಗೆ ಸೀಮಿತರಾದರೆ, ಕೊನೆಯಲ್ಲಿ ಕಠಿಣ ಹೋರಾಟದ ಬ್ಯಾಟಿಂಗ್ ನಡೆಸಿದ ಶಮರ್ ಸ್ಪಿಂಗರ್ ಕೇವಲ 11 ಎಸೆತಗಳಲ್ಲಿ 35 ರನ್ ಸಿಡಿಸಿ ವಿಂಡೀಸ್ ತಂಡವನ್ನು ಗೆಲ್ಲಿಸಲು ಸಾಕಷ್ಟು ಪ್ರಯತ್ನ ನಡೆಸಿದ್ದರೂ ಅಂತಿಮವಾಗಿ ತಮ್ಮ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಅಂದ ಹಾಗೆ ಮೂರು ಪಂದ್ಯ್ಳ ಅಂತ್ಯಕ್ಕೆ ಟಿ20ಐ ಸರಣಿಯಲ್ಲಿ ಭಾರತ 2-1 ಮುನ್ನಡೆಯನ್ನು ಕಾಯ್ದುಕೊಂಡಿದೆ.