IND vs SA: ಅಭಿಷೇಕ್ ಶರ್ಮಾ ಔಟ್? ಸೂಪರ್-8ರ ಪದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಸಾಧ್ಯತೆ!
India's Predicted Playing XI: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಣ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8ರ ಪಂದ್ಯ ಫೆಬ್ರವರಿ 22 ರಂದು ಭಾನುವಾರ ನಡೆಯಲಿದೆ. ಈ ಪಂದ್ಯಕ್ಕೆ ಭಾರತ ತಂಡದ ಪ್ಲೇಯಿಂಗ್ XI ಹೇಗಿರಲಿದೆ ಎಂದು ಇಲ್ಲಿ ವಿವರಿಸಲಾಗಿದೆ.
ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI -
ಅಹಮದಾಬಾದ್: ಎ ಗುಂಪಿನಲ್ಲಿ ಆಡಿದ ನಾಲ್ಕೂ ಪಂದ್ಯಗಳನ್ನು ಗೆಲ್ಲುವ ಮೂಲಕ 2026ರ ಐಸಿಸಿ ಟಿ20 ವಿಶ್ವಕಪ್ (ICC T20 World Cup 2026) ಟೂರ್ನಿಯ ಸೂಪರ್-8ಕ್ಕೆ ಪ್ರವೇಶ ಮಾಡಿರುವ ಭಾರತ ತಂಡ, ಫೆಬ್ರವರಿ 22 ರಂದು ಭಾನುವಾರ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಅಂತಿಮ 8ರ ಪಂದ್ಯದಲ್ಲಿ (IND vs SA) ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಈ ಪಂದ್ಯದ ನಿಮಿತ್ತ ಭಾರತ ತಂಡ ಸಜ್ಜಾಗುತ್ತಿದೆ. ಈ ಪಂದ್ಯದ ನಿಮಿತ್ತ ಭಾರತ ತಂಡದ ಪ್ಲೇಯಿಂಗ್ XI (India's Playing XI) ಯಾವ ರೀತಿ ಇರಬಹುದು ಎಂದು ಇಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ.
ಭಾರತ ತಂಡ ಎ ಗುಂಪಿನಲ್ಲಿ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದಿತ್ತು. ಮೊದಲನೇ ಪಂದ್ಯದಲ್ಲಿ ಯುಎಸ್‌ಎ, ಎರಡನೇ ಪಂದ್ಯದಲ್ಲಿ ನಮೀಬಿಯಾ, ಮೂರನೇ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನಾಲ್ಕು ಹಾಗೂ ಅಂತಿಮ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡವನ್ನು ಮಣಿಸಿತ್ತು. ಆ ಮೂಲಕ ಸೂಪರ್-8ಕ್ಕೆ ಪ್ರವೇಶ ಮಾಡಿದೆ. ಇದೀಗ ಭಾರತ ತಂಡ ಸೂಪರ್-8ರ ಮೊದಲನೇ ಗುಂಪಿನಲ್ಲಿ ಸ್ಥಾನವನ್ನು ಪಡೆದಿದೆ. ಈ ಸುತ್ತಿನಲ್ಲಿ ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆ ತಂಡಗಳನ್ನು ಟೀಮ್ ಇಂಡಿಯಾ ಎದುರಿಸಲಿದೆ.
IND vs SA: ಭಾರತ ತಂಡವನ್ನು ಗೆಲ್ಲಿಸಬಲ್ಲ ಇಬ್ಬರು ಬೌಲರ್‌ಗಳನ್ನು ಆರಿಸಿದ ಶಾನ್ ಪೊಲಾಕ್!
ಭಾರತ ತಂಡಕ್ಕೆ ಅಭಿಷೇಕ್ ಶರ್ಮಾ ಟೆನ್ಷನ್
ಆದರೆ, ಈ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಒಂದು ತಲೆ ನೋವು ಶುರುವಾಗಿದೆ. ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಅವರು ಈ ಟೂರ್ನಿಯಲ್ಲಿ ಇನ್ನೂ ಖಾತೆ ತೆರೆದಿಲ್ಲ ಅವರು ಆಡಿದ ಮೂರೂ ಪಂದ್ಯಗಳಲ್ಲಿ ಡಕ್‌ಔಟ್ ಆಗಿದ್ದಾರೆ. ಇದರ ನಡುವೆ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದೀಗ ಸಂಪೂರ್ಣ ಫಿಟ್ ಆಗಿ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಆಡಿದ್ದರು, ಆದರೆ, ಎಡಗೈ ಬ್ಯಾಟ್ಸ್‌ಮನ್ ಶೂನ್ಯಕ್ಕೆ ಔಟ್ ಆಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆಡಿಸುವ ಬಗ್ಗೆ ಇನ್ನೂ ಯಾವುದೇ ಖಚಿತತೆ ಇಲ್ಲ.
Group stage ✅
— BCCI (@BCCI) February 18, 2026
🆙 next Super 8 👊
Presenting #TeamIndia's next set of fixtures as we move ahead in #T20WorldCup 2026 🗓️#MenInBlue pic.twitter.com/lsuvCwzYOv
ಸಂಜು ಸ್ಯಾಮ್ಸನ್‌ಗೆ ಅವಕಾಶ ಸಾಧ್ಯತೆ
ಒಂದು ವೇಳೆ ಅಭಿಷೇಕ್ ಶರ್ಮ ಅವರಿಗೆ ಮತ್ತೊಂದು ಅವಕಾಶವನ್ನು ನೀಡಲು ಭಾರತದ ಟೀಮ್ ಮ್ಯಾನೇಜ್‌ಮೆಂಟ್ ನಿರಾಕರಿಸಿದರೆ, ಆಗ ಮತ್ತೊಬ್ಬ ಆರಂಭಿಕ ಹಾಗೂ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್‌ಗೆ ಅವಕಾಶವನ್ನು ನೀಡಬಹುದು. ಸಂಜು ಸ್ಯಾಮ್ಸನ್ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಆಡಿದ್ದರು. ಇಲ್ಲಿ ಸ್ಪೋಟಕ ಆರಂಭ ಪಡೆದ ಹೊರತಾಗಿಯೂ ಸಂಜು ದೊಡ್ಡ ಮೊತ್ತವನ್ನು ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಆದರೆ, ದಕ್ಷಿಣ ಆಫ್ರಿಕಾ ವಿರುದ್ಧ ಅವಕಾಶ ಸಿಗಬಹುದೆಂದು ಕೇರಳ ಬ್ಯಾಟ್ಸ್‌ಮನ್ ಎದುರು ನೋಡುತ್ತಿದ್ದಾರೆ.
ಭಾರತ ತಂಡದ ಪರ ಬ್ಯಾಟಿಂಗ್ ವಿಭಾಗದಲ್ಲಿ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ವೇಗಿಗಳಾಗಿದ್ದಾರೆ. ಸ್ಪಿನ್ ವಿಭಾಗದಲ್ಲಿ ವರುಣ್ ಚಕ್ರವರ್ತಿ ಭಾರತ ತಂಡಕ್ಕೆ ಕೀ ಬೌಲರ್ ಆಗಿದ್ದಾರೆ.
T20 World Cup 2026: ಸೆಮಿಫೈನಲ್ಸ್‌ಗೆ ಪ್ರವೇಶಿಸಬಲ್ಲ 4 ತಂಡಗಳನ್ನು ಆರಿಸಿದ ಗ್ಲೆನ್ ಮೆಗ್ರಾಥ್!
ದಕ್ಷಿಣ ಆಫ್ರಿಕಾ ವಿರುದ್ಧದ ಸೂಪರ್-8ರ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI
1.ಅಭಿಷೇಕ್ ಶರ್ಮಾ/ಸಂಜು ಸ್ಯಾಮ್ಸನ್
2.ಇಶಾನ್ ಕಿಶನ್ ( ಆರಂಭಿಕ, ವಿಕೆಟ್ ಕೀಪರ್)
3.ತಿಲಕ್ ವರ್ಮಾ (ಬ್ಯಾಟ್ಸ್‌ಮನ್)
4.ಸೂರ್ಯಕುಮಾರ್ ಯಾದವ್ (ನಾಯಕ, ಬ್ಯಾಟ್ಸ್‌ಮನ್)
5.ಹಾರ್ದಿಕ್ ಪಾಂಡ್ಯ (ಆಲ್‌ರೌಂಡರ್)
6.ಶಿವಂ ದುಬೆ (ಆಲ್‌ರೌಂಡರ್)
7.ರಿಂಕು ಸಿಂಗ್ (ಬ್ಯಾಟ್ಸ್‌ಮನ್)
8.ವಾಷಿಂಗ್ಟನ್ ಸುಂದರ್ (ಆಲ್‌ರೌಂಡರ್)
9.ಅರ್ಷದೀಪ್ ಸಿಂಗ್ (ವೇಗದ ಬೌಲರ್)
10.ಜಸ್‌ಪ್ರೀತ್ ಬುಮ್ರಾ (ವೇಗದ ಬೌಲರ್)
11.ವರುಣ್ ಚಕ್ರವರ್ತಿ (ಸ್ಪಿನ್ನರ್)