ಸಂಜು ಸ್ಯಾಮ್ಸನ್ ಔಟ್? ಏಷ್ಯಾ ಕಪ್‌ಗೆ ಭಾರತದ ಬಲಿಷ್ಠ ಪ್ಲೇಯಿಂಗ್ XI ಆರಿಸಿದ ಇರ್ಫಾನ್ ಪಠಾಣ್!
ಬಹುನಿರೀಕ್ಷಿತ 2025ರ ಏಷ್ಯಾ ಕಪ್ ಟೂರ್ನಿಯ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಇದೀಗ ಭಾರತ ತಂಡದ ಪ್ಲೇಯಿಂಗ್ XI ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದೀಗ ಟೀಮ್ ಇಂಡಿಯಾ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್‌ಮ, ಅವರು ಭಾರತ ತಂಡದ ಪ್ಲೇಯಿಂಗ್ XI ಅನ್ನು ಪ್ರಕಟಿಸಿದ್ದಾರೆ. ಆದರೆ, ಅವರು ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟಿದ್ದಾರೆ.

ಏಷ್ಯಾ ಕಪ್‌ಗೆ ಭಾರತದ ಪ್ಲೇಯಿಂಗ್ XI ಆರಿಸಿದ ಇರ್ಫಾನ್ ಪಠಾಣ್. -

ನವದೆಹಲಿ: ಬಹುನಿರೀಕ್ಷಿತ 2025ರ ಏಷ್ಯಾ ಕಪ್ (Asia Cup 2025) ಟೂರ್ನಿಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಹಾಗಾಗಿ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ಸಜ್ಜಾಗುತ್ತಿದೆ. ಹಾಲಿ ಚಾಂಪಿಯನ್ ಆಗಿ ಟೀಮ್ ಇಂಡಿಯಾ ಈ ಟೂರ್ನಿಗೆ ಪ್ರವೇಶ ಮಾಡಲಿದೆ. ಸೆಪ್ಟಂಬರ್ 9 ರಂದೇ ಏಷ್ಯಾ ಕಪ್ ಟೂರ್ನಿ ಆರಂಭವಾಗಲಿದೆ. ಆದರೆ, ಸೆ 10 ರಂದು ಯುಎಇ ವಿರುದ್ದ ಆಡುವ ಮೂಲಕ ಟೀಮ್ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದೀಗ ಭಾರತ ತಂಡದ ಪ್ಲೇಯಿಂಗ್ XI ಬಗ್ಗೆ ಸಾಕಷ್ಟು , ಚರ್ಚೆಗಳು ನಡೆಯುತ್ತಿವೆ. ಅದರಂತೆ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ (Irfan Pathan), ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡದ ಪ್ಲೇಯಿಂಗ್ XI (India's Playing Xi) ಅನ್ನು ಆರಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧ ಟಿ20ಐ ಸರಣಿಯಲ್ಲಿ ಆಡಿದ್ದ ಬಹುತೇಕ ಅದೇ ಆಟಗಾರರನ್ನು ಏಷ್ಯಾ ಕಪ್ ಟೂರ್ನಿಗೆ ಉಳಿಸಿಕೊಳ್ಳಲಾಗಿದೆ. ಆದರೆ, 2024ರ ಜುಲೈನಿಂದ ಭಾರತ ಟಿ20ಐ ತಂಡದಿಂದ ಹೊರಗೆ ಉಳಿದಿದ್ದ ಶುಭಮನ್ ಗಿಲ್ ಅವರನ್ನು ಏಷ್ಯಾ ಕಪ್ ಟೂರ್ನಿಗೆ ಆಯ್ಕೆ ಮಾಡಲಾಗಿದೆ ಹಾಗೂ ಅವರಿಗೆ ಉಪ ನಾಯಕತ್ವವನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶುಭಮನ್ ಗಿಲ್ ಪ್ಲೇಯಿಂಗ್ XIನಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ಹಾಗಾಗಿ ಪ್ಲೇಯಿಂಗ್ XIನಲ್ಲಿ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಗುವುದು ಅನುಮಾನ.
Asia Cup 2025: ಏಷ್ಯಾಕಪ್ ಟಿ20ಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ
ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಇರ್ಫಾನ್ ಪಠಾಣ್, ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡದ ಬಲಿಷ್ಠ ಪ್ಲೇಯಿಂಗ್ XI ಅನ್ನು ಆರಿಸಿದ್ದಾರೆ. ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಅಭಿಷೇಕ್ ಶರ್ಮಾ ಹಾಗೂ ಶುಭಮನ್ ಗಿಲ್ ಅವರನ್ನು ಪಠಾಣ್ ಆರಿಸಿದ್ದಾರೆ. ಆದರೆ, ಕಳೆದ ಕೆಲ ಸರಣಿಗಳಲ್ಲಿ ಆರಂಭಿಕ ಸ್ಥಾನದಲ್ಲಿ ಮಿಂಚಿದ್ದ ಸಂಜು ಸ್ಯಾಮ್ಸನ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಲು ಮಾಜಿ ಆಲ್‌ರೌಂಡರ್ ಅವಕಾಶವನ್ನು ನೀಡಿದ್ದಾರೆ.
2025ರ ಏಷ್ಯಾ ಕಪ್‌ಗೆ ಇರ್ಫಾನ್ ಪಠಾಣ್ ಆರಿಸಿದ ಭಾರತದ ಬಲಿಷ್ಠ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ
Asia Cup 2025: ಏಷ್ಯಾ ಕಪ್: ಯಂಗ್ ಇಂಡಿಯಾ ಫೇವರಿಟ್
ಸಂಜು ಸ್ಯಾಮ್ಸನ್‌ಗೆ ಚಾನ್ಸ್ ಸಿಗುತ್ತಾ?
ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಗುವುದು ಅನುಮಾನ ಎಂದು ಹೇಳಬಹುದು. ಏಕೆಂದರೆ, ಗಿಲ್ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಆಡಿದರೆ, ಸಂಜು ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ನೀಡುವುದು ಅನುಮಾನ. ಮಧ್ಯಮ ಕ್ರಮಾಂಕದಲ್ಲಿ ಜಿತೇಶ್ ಶರ್ಮಾ ಅದ್ಭುತ ದಾಖಲೆಯನ್ನು ಹೊಂದಿದ್ದಾರೆ. ಅವರು ಮ್ಯಾಚ್ ಫಿನಿಷಿಂಗ್ ಸಾಮರ್ಥ್ಯವನ್ನು ಹೊಂದಿದ್ದಾರೆ. ಕಳೆದ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು.
ಭಾರತ ತಂಡದ ವೇಗದ ಬೌಲಿಂಗ್ ವಿಭಾಗವನ್ನು ಜಸ್‌ಪ್ರೀತ್ ಬುಮ್ರಾ ಮುನ್ನಡೆಸಬಹುದು, ಆದರೆ, ಈ ಟೂರ್ನಿಯಲ್ಲಿ ಎಲ್ಲಾ ಪಂದ್ಯಗಳನ್ನು ಆಡುವುದು ಅನುಮಾನ. ಸೆಪ್ಟಂಬರ್ 10 ರಂದು ಯುಎಇ ವಿರುದ್ದ ಬುಮ್ರಾ ಆಡುವ ಬದಲು, 14 ರಂದು ಸಾಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಅವರು ಕಣಕ್ಕೆ ಇಳಿಯಲಿದ್ದಾರೆ.