ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಭಿಷೇಕ್‌ ಶರ್ಮಾ ಸ್ಪೋಟಕ ಶತಕ, ಮೂರನೇ ಪಂದ್ಯ ಗೆದ್ದು ಟಿ20ಐ ಸರಣಿಯನ್ನು ವಶಪಡಿಸಿಕೊಂಡ ಭಾರತ!

ಅಭಿಷೇಕ್‌ ಶರ್ಮಾ ಅವರ ನಾಲ್ಕನೇ ಶತಕದ ಬಲದಿಂದ ಭಾರತ ತಂಡ ಮೂರನೇ ಪಂದ್ಯದಲ್ಲಿ 6 ವಿಕೆಟ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಇನ್ನೂ ಎರಡು ಪಂದ್ಯ ಬಾಕಿ ಇರುವಾಗಲೇ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಟೀಮ್‌ ಇಂಡಿಯಾ ಟಿ20ಐ ಸರಣಿಯನ್ನು ವಶಪಡಿಸಿಕೊಂಡಿತು. 38 ಎಸೆತಗಳಲ್ಲಿ 113 ರನ್‌ ಬಾರಿಸಿದ ಅಭಿಷೇಕ್‌ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

3ನೇ ಪಂದ್ಯ ಗೆದ್ದು ಟಿ20ಐ ಸರಣಿಯನ್ನು ವಶಪಡಿಸಿಕೊಂಡ ಭಾರತ!

ಭರ್ಜರಿ ಶತಕ ಸಿಡಿಸಿ ಭಾರತ ತಂಡವನ್ನು ಗೆಲ್ಲಿಸಿದ ಅಭಿಷೇಕ್‌ ಶರ್ಮಾ. -

Profile
Ramesh Kote Oct 27, 2026 3:52 PM

ವೆಲ್ಲಿಂಗ್ಟನ್‌: ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20ಐ ಪಂದ್ಯದಲ್ಲಿ (IND vs NZ) ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಷೇಕ್ ಶರ್ಮಾ (Abhsishek Sharma) ಶತಕ ಸಿಡಿಸಿ ಭಾರತ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ. ವೆಲ್ಲಿಂಗ್ಟನ್‌ನಲ್ಲಿ ಅಕ್ಟೋಬರ್‌ 27 ರಂದು ಮಂಗಳವಾರ ನಡೆದಿದ್ದ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ್ದ 199 ರನ್‌ಗಳ ಗುರಿಯನ್ನು ಭಾರತ ಕೇವಲ 13.2 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು ತಲುಪಿತು. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 3-0ರ ಅಜೇಯ ಮುನ್ನಡೆ ಸಾಧಿಸಿದೆ. ಆ ಮೂಲಕ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಾಗಲೇ ಟೀಮ್‌ ಇಂಡಿಯಾ ಟಿ20ಐ ಸರಣಿಯನ್ನು ವಶಪಡಿಸಿಕೊಂಡಿದೆ.

ಇಲ್ಲಿನ ಹೆನ್ರಿ ಸ್ಟೇಡಿಯಂನಲ್ಲಿ ಗುರಿಯನ್ನು ಹಿಂಬಾಲಿಸಿದ ಭಾರತದ ಪರ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ನ್ಯೂಜಿಲೆಂಡ್ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಕೇವಲ 38 ಎಸೆತಗಳನ್ನು ಎದುರಿಸಿದ ಅವರು, 113 ರನ್ ಗಳಿಸಿದರು. ಇದು ಅಭಿಷೇಕ್‌ ಪಾಲಿಗೆ ನಾಲ್ಕನೇ ಟಿ20ಐ ಶತಕವಾಗಿದೆ. ಇವರು ತಮ್ಮ ಇನಿಂಗ್ಸ್‌ನಲ್ಲಿ ಬರೋಬ್ಬರಿ 11 ಸಿಕ್ಸರ್‌ ಹಾಗೂ 9 ಬೌಂಡರಿ ಹಾಗೂ ಸಿಕ್ಸರ್‌ಗಳನ್ನು ಸುರಿಸಿದರು. ಆರಂಭದಿಂದಲೇ ಆಕ್ರಮಣಕಾರಿ ಆಟವಾಡಿದ ಅಭಿಷೇಕ್, ಭಾರತ ತಂಡದ ರನ್ ಚೇಸ್‌ಗೆ ಭರ್ಜರಿ ವೇಗ ನೀಡಿದರು.

IND vs NZ 3rd T20I: ಪವರ್‌ಪ್ಲೇನಲ್ಲಿ 118 ರನ್‌ ಬಾರಿಸಿ ವಿಶ್ವ ದಾಖಲೆ ಬರೆದ ಟೀಮ್‌ ಇಂಡಿಯಾ!

ಮತ್ತೊಂದೆಡೆ ಯುವ ಆಟಗಾರ ವೈಭವ್ ಸೂರ್ಯವಂಶಿ ಕೂಡ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 19 ಎಸೆತಗಳಲ್ಲಿ 45 ರನ್ ಗಳಿಸಿದ ಅವರು ನ್ಯೂಜಿಲೆಂಡ್ ಬೌಲರ್‌ಗಳನ್ನು ಕಂಗೆಡಿಸಿದರು. ಈ ಇಬ್ಬರು ಬ್ಯಾಟರ್‌ಗಳು ಸೇರಿ ಕೇವಲ 43 ಎಸೆತಗಳಲ್ಲಿ 133 ರನ್‌ಗಳ ಜೊತೆಯಾಟವಾಡಿ ಭಾರತದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು.



ನ್ಯೂಜಿಲೆಂಡ್ 198 ರನ್‌ಗಳ ಮೊತ್ತ

ಇದಕ್ಕೂ ಮುನ್ನ ಟಾಸ್ ಗೆದ್ದ ಭಾರತ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್‌ ಮಾಡುವಂತಾದ ನ್ಯೂಜಿಲೆಂಡ್ ನಿಗದಿತ 20 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು. ನ್ಯೂಜಿಲೆಂಡ್ ಪರ ಡ್ಯಾರಿಲ್ ಮಿಚೆಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿ 52 ಎಸೆತಗಳಲ್ಲಿ ಅಜೇಯ 89 ರನ್ ಗಳಿಸಿದರು. ಫಿನ್ ಅಲೆನ್ 25 ಎಸೆತಗಳಲ್ಲಿ 40 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಬೆವನ್ ಜೇಕಬ್ಸ್ ಕೂಡ ಅಜೇಯ 39 ರನ್ ಗಳಿಸಿ ತಂಡದ ಮೊತ್ತ 198ಕ್ಕೆ ತಲುಪಲು ನೆರವಾದರು. ಭಾರತದ ಪರ ಅರ್ಷದೀಪ್ ಸಿಂಗ್, ಅಕ್ಷರ್ ಪಟೇಲ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ತಲಾ ಒಂದು ವಿಕೆಟ್ ಪಡೆದರು.



ಐದು ಓವರ್‌ಗಳಲ್ಲೇ 100 ರನ್: ಭಾರತದ ವಿಶ್ವ ದಾಖಲೆ

ಅಭಿಷೇಕ್ ಶರ್ಮಾ ಮತ್ತು ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ಭಾರತ ಕೇವಲ ಐದು ಓವರ್‌ಗಳಲ್ಲಿ 100 ರನ್ ಪೂರೈಸಿತು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 100 ರನ್ ಗಳಿಸಿದ ತಂಡ ಎಂಬ ದಾಖಲೆಯನ್ನು ಭಾರತ ತನ್ನದಾಗಿಸಿಕೊಂಡಿತು.

ಇದೇ ವೇಳೆ ಮೊದಲ ಆರು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 118 ರನ್ ಗಳಿಸಿದ ಭಾರತ, ಪುರುಷರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನ ಪವರ್‌ಪ್ಲೇನಲ್ಲಿ ಅತ್ಯಧಿಕ ಮೊತ್ತ ದಾಖಲಿಸಿತು. ಈ ಹಿಂದೆ ರೊಮೇನಿಯಾ ತಂಡ ಸರ್ಬಿಯಾ ವಿರುದ್ಧ ಗಳಿಸಿದ್ದ 116 ರನ್‌ಗಳ ದಾಖಲೆಯನ್ನು ಭಾರತ ಮುರಿಯಿತು.

ಅತಿ ಹೆಚ್ಚು ಟಿ20 ವಿಕೆಟ್‌ ದಾಖಲೆ ಸರಿಗಟ್ಟಿದ ಅರ್ಷ್‌ದೀಪ್ ಸಿಂಗ್

ಭಾರತಕ್ಕೆ ಸರಣಿ ಗೆಲುವು

ನ್ಯೂಜಿಲೆಂಡ್ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲೂ ಗೆಲುವು ಸಾಧಿಸಿದ್ದ ಭಾರತ, ಮೂರನೇ ಪಂದ್ಯದಲ್ಲೂ ತನ್ನ ಪ್ರಾಬಲ್ಯ ಮುಂದುವರಿಸಿತು. ಮೂರನೇ ಟಿ20 ಪಂದ್ಯವನ್ನು ಆರು ವಿಕೆಟ್‌ಗಳಿಂದ ಗೆದ್ದ ಭಾರತ, ಐದು ಪಂದ್ಯಗಳ ಸರಣಿಯನ್ನು ಇನ್ನೂ ಎರಡು ಪಂದ್ಯಗಳು ಬಾಕಿ ಇರವಾಗಲೇ 3-0ರ ಅಂತರದಲ್ಲಿ ವಶಪಡಿಸಿಕೊಂಡಿತು. ಆರಂಭಿಕ ಮೂರೂ ಪಂದ್ಯಗಳಲ್ಲಿ ಕೇವಲ ಒಂದೇ ಪಂದ್ಯವನ್ನು ಗೆಲ್ಲಲು ಸಾಧ್ಯವಾಗದೆ ಕಿವೀಸ್‌ ಹ್ಯಾಟ್ರಿಕ್‌ ಸೋಲು ಅನುಭವಿಸಿ ಸರಣಿಯನ್ನು ಕೈಚೆಲ್ಲಿಕೊಂಡಿದೆ.