ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪೃಥ್ವಿ ಶಾ ಜೊತೆ ನಿಶ್ಚಿತಾರ್ಥ ಬ್ರೇಕ್‌-ಅಪ್‌ ಮಾಡಿಕೊಂಡ ಬಗ್ಗೆ ಆಕೃತಿ ಅಗರ್ವಾಲ್‌ ಸ್ಪಷ್ಟನೆ!

ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ ಅವರ ಜತೆಗೆ ಆಕೃತಿ ಅಗರ್ವಾಲ್‌ ಅವರು ತಮ್ಮ ನಿಶ್ಚಿತಾರ್ಥವನ್ನು ಮುರಿದುಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಆಕೃತಿ ಅವರೇ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪ್ರಕಟಿಸಿದ್ದಾರೆ. ಕಳೆದ ಆರು ತಿಂಗಳ ಹಿಂದ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಇಬ್ಬರೂ ಪರಸ್ಪರ ಒಪ್ಪಿಗೆಯ ಮೂಲಕ ಈ ನಿರ್ಧಾರಕ್ಕೆ ಬಂದಿದ್ದಾರೆ.

ಪೃಥ್ವಿ ಶಾ ಜತೆ ಆಕೃತಿ ಅಗರ್ವಾಲ್‌ ಬ್ರೇಕ್‌-ಅಪ್‌ ನಿಜಾನಾ? ಸಾಕ್ಷಿ ಇಲ್ಲಿದೆ

ಪೃಥ್ವಿ ಶಾ ಜೊತೆ ನಿಶ್ಚಿತಾರ್ಥ ಮುರಿದುಕೊಂಡ ಆಕೃತಿ ಅಗರ್ವಾಲ್‌. -

Profile
Ramesh Kote Sep 17, 2026 5:12 PM

ನವದೆಹಲಿ: ತಮ್ಮ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಕಠಿಣ ದಿನಗಳನ್ನು ಎದುರಿಸುತ್ತಿರುವ ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ (Prithvi Shaw) ಇದೀಗ ತಮ್ಮ ವೈಯಕ್ತಿಕ ಜೀವನದಲ್ಲಿಯೂ ದೊಡ್ಡ ಹಿನ್ನಡೆಯನ್ನು ಅನುಭವಿಸಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಆಕೃತಿ ಅಗರ್ವಾಲ್‌ (Akruti Agarwal) ಅವರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಅವರ ನಿಶ್ಚಿತಾರ್ಥ ಮುರಿದು ಬಿದ್ದಿದೆ. ಈ ಬಗ್ಗೆ ಆಕೃತಿ ಅಗರ್ವಾಲ್‌ ಅವರೇ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ಇಬ್ಬರೂ ಸೇರಿ ಇದಕ್ಕೆ ಒಪ್ಪಿಕೊಂಡ ಬಳಿಕ ಬೇರೆ-ಬೇರಿಯಾಗಿದ್ದೇವೆಂದು ಆಕೃತಿ ಹೇಳಿಕೊಂಡಿದ್ದಾರೆ.