IPL 2025: ಟೂರ್ನಿಯ ಪ್ಲೇಆಫ್ಸ್ ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದ ಬಿಸಿಸಿಐ!
IPL 2025 Playoffs schedule: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ಲೇಆಫ್ಸ್ ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ( ಬಿಸಿಸಿಐ) ಪ್ರಕಟಿಸಿದೆ. ಬಹು ನಿರೀಕ್ಷಿತ ಐಪಿಎಲ್ ಫೈನಲ್ ಪಂದ್ಯ ಜೂನ್ 3 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

2025ರ ಐಪಿಎಲ್ ಪ್ಲೇಆಫ್ಸ್ ವೇಳಾಪಟ್ಟಿ.

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI)ಯು 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಪ್ಲೇಆಫ್ಸ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 70 ಲೀಗ್ ಪಂದ್ಯಗಳ ನಂತರ ಮೊದಲನೇ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಈಗ ನ್ಯೂ ಚಂಡೀಗಢದ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಲ್ಲಿ ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳು ನಡೆಯಲಿವೆ. ನಂತರ ವಿಶ್ವದ ಅತ್ಯಂತ ದೊಡ್ಡ ಕ್ರೀಡಾಂಗಣ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಎರಡನೇ ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯ ನಡೆಯಲಿದೆ.
ಬೆಂಗಳೂರಿನಲ್ಲಿ ಭಾರಿ ಮಳೆಯ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಣ ಪಂದ್ಯವನ್ನು ಲಖನೌಗೆ ಸ್ಥಳಾಂತರಿಸಲಾಗಿದೆ. ಇನ್ನುಳಿದ ಪಂದ್ಯಗಳಿಗೆ ಒಂದು ಗಂಟೆ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. 2025ರ ಐಪಿಎಲ್ ಪ್ಲೇಆಫ್ಸ್ ವೇಳಾಪಟ್ಟಿಯನ್ನು ಮಂಗಳವಾರ ಬಿಸಿಸಿಐ ಪ್ರಕಟಿಸಿದೆ. ಲೀಗ್ ಹಂತದ 70 ಪಂದ್ಯಗಳ ನಂತರ ಪ್ಲೇಆಫ್ಸ್ ಪಂದ್ಯಗಳು ಜರುಗಲಿವೆ. ಮೊದಲನೇ ಕ್ವಾಲಿಫೈಯರ್ ಪಂದ್ಯವು ಮೇ 29 ರಂದು ನವ ಚಂಡೀಗಢದ ಪಿಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಪಾಯಿಂಟ್ಸ್ ಜರುಗಲಿದೆ.
IPL 2025: ನಾಯಕನಾಗಿ ರಿಷಭ್ ಪಂತ್ ವೈಫಲ್ಯಕ್ಕೆ ಕಾರಣ ತಿಳಿಸಿದ ಮೊಹಮ್ಮದ್ ಕೈಫ್!
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಜೂನ್ ಒಂದರಂದು ಎರಡನೇ ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯ ಜೂನ್ 3 ರಂದು ನಡೆಯಲಿದೆ. ಮೊದಲನೇ ಕ್ವಾಲಿಫೈಯರ್‌ನಲ್ಲಿ ಸೋತ ತಂಡ ಹಾಗೂ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ ಎರಡನೇ ಕ್ವಾಲಿಫೈಯರ್‌ನಲ್ಲಿ ಕಾದಾಟ ನಡೆಸಲಿವೆ. ಜೂನ್ 3 ರಂದು ಫೈನಲ್ ಪಂದ್ಯ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.
🚨 News 🚨
— IndianPremierLeague (@IPL) May 20, 2025
Schedule for TATA IPL 2025 Playoffs announced.
Additionally, Match no. 65 between #RCB and #SRH shifted to Lucknow from Bengaluru.
🔽 Details | #TATAIPL
ಐಪಿಎಲ್ ಆಡಳಿತ ಮಂಡಳಿ ನಿರ್ಧಾರ
ಈ ಹಿಂದೆ ಹೈದರಾಬಾದ್ ಮತ್ತು ಕೋಲ್ಕತ್ತಾದಲ್ಲಿ ಪ್ಲೇಆಫ್ಸ್ ಪಂದ್ಯಗಳನ್ನು ನಿಗದಿ ಮಾಡಲಾಗಿತ್ತು. ಆದರೆ ಟೂರ್ನಿಯನ್ನು ಒಂದು ವಾರ ಸ್ಥಗಿತಗೊಳಿಸಲಾಗಿತ್ತು. ಹವಾಮಾನ ಮತ್ತು ಇತರ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಐಪಿಎಲ್ ಆಡಳಿತ ಮಂಡಳಿಯು ನೂತನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಣ ಪಂದ್ಯವನ್ನು ಮೇ 23 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಆದರೆ ಈ ಪಂದ್ಯವನ್ನು ಲಖನೌಗೆ ಸ್ಥಳಾಂತರಿಸಲಾಗಿದೆ. ಬೆಂಗಳೂರಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
IPL 2025: 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್ ಶರ್ಮಾ!
ಪಂದ್ಯಗಳ ಸಮಯದಲ್ಲೂ ಬದಲಾವಣೆ ಮಾಡಲಾಗಿದೆ. ಲೀಗ್ ಹಂತದ ಉಳಿದ ಪಂದ್ಯಗಳಲ್ಲಿ ಒಂದು ಗಂಟೆ ಹೆಚ್ಚುವರಿ ಸಮಯ ನೀಡಲಾಗಿದೆ. ಈ ನಿಯಮ ಮೇ 20 ರಿಂದ ಜಾರಿಗೆ ಬಂದಿದೆ. ಇದರಿಂದಾಗಿ ಇದೀಗ ಪಂದ್ಯಗಳು ಇನ್ನಷ್ಟು ರೋಮಾಂಚನಕಾರಿಯಾಗಿರುತ್ತವೆ. ಹವಾಮಾನವನ್ನು ಗಮನದಲ್ಲಿಟ್ಟುಕೊಂಡು ಪ್ಲೇಆಫ್ಸ್ ಹೊಸ ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಬಿಸಿಸಿಐ ಪಂದ್ಯಗಳನ್ನು ಯಾವುದೇ ಅಡೆತಡೆಯಿಲ್ಲದೆ ನಡೆಸಬೇಕೆಂದು ಬಯಸುತ್ತಿದೆ. ಆದ್ದರಿಂದ, ಅವರು ಎಚ್ಚರಿಕೆಯಿಂದ ಪರಿಗಣಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.