IND vs AUS: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಒಡಿಐ ವಿದಾಯ ಹೇಳುತ್ತಾರಾ? ರಾಜೀವ್ ಶುಕ್ಲಾ ದೊಡ್ಡ ಹೇಳಿಕೆ!
ಆಸ್ಟ್ರೇಲಿಯಾ ಪ್ರವಾಸದ ವೇಳೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಒಡಿಐ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆಂಬ ವದಂತಿಗಳ ಬಗ್ಗೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಈ ಇಬ್ಬರೂ ಯಾವುದೇ ಕಾರಣಕ್ಕೂ ವಿದಾಯ ಹೇಳುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಆಸ್ಟ್ರೇಲಿಯಾ ಒಡಿಐ ಸರಣಿಯ ವೇಳೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿದಾಯ ಹೇಳುತ್ತಾರಾ? -

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ (IND vs AUS) ವೇಳೆ ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ಅವರು ನಿವೃತ್ತಿ ಘೋಷಿಸಲಿದ್ದಾರೆಂಬ ವದಂತಿಗಳ ಬಗ್ಗೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ (Rajeev Shukla) ಅವರು ಪ್ರತಿಕ್ರಿಯಿಸಿದ್ದಾರೆ. ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳಿಂದ ಭಾರತ ತಂಡಕ್ಕೆ ಲಾಭವಾಗಲಿದೆ. ಹಾಗಾಗಿ ಅವರು ಸದ್ಯಕ್ಕೆ ನಿವೃತ್ತಿ ಪಡೆಯುವುದು ಇಲ್ಲವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಕ್ಟೋಬರ್ 19 ರಂದು ಮೊದಲನೇ ಪಂದ್ಯದ ಮೂಲಕ ಏಕದಿನ ಸರಣಿ ಆರಂಭವಾಗಲಿದೆ. ಇದಾದ ಬಳಿಕ ಐದು ಪಂದ್ಯಗಳ ಟಿ20ಐ ಸರಣಿ ಆರಂಭವಾಗಲಿದೆ.
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರು ಈಗಾಗಲೇ ಟಿ20ಐ ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದೀಗ ಅವರು ಕೇವಲ 50 ಓವರ್‌ಗಳ ಸ್ವರೂಪದಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ. ಆಸೀಸ್ ಪ್ರವಾಸದಲ್ಲಿ ಈ ಇಬ್ಬರೂ ಒಡಿಐ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆಂಬ ವದಂತಿಗಳನ್ನು ಬಿಸಿಸಿಐ ಉಪಾಧ್ಯಕ್ಷ ತಳ್ಳಿ ಹಾಕಿದ್ದಾರೆ. ಈ ಇಬ್ಬರೂ ಪ್ರಸ್ತುತ ತಂಡದಲ್ಲಿದ್ದರೆ, ನಮಗೆ ಲಾಭವಾಗಲಿದೆ. ಹಾಗಾಗಿ ವಿದಾಯ ಹೇಳುವುದು ಅಥವಾ ಬಿಡುವುದು ಆ ಆಟಗಾರರಿಗೆ ಬಿಟ್ಟ ಸಂಗತಿ. ಆದರ, ಈ ಸರಣಿಯೇ ಈ ಇಬ್ಬರಿಗೂ ಕೊನೆ ಎಂದು ಹೇಳುವುದು ತಪ್ಪು ಎಂದಿದ್ದಾರೆ.
IND vs AUS: ಮೊದಲನೇ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ವಿವರ!
ಎಎನ್‌ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ರಾಜೀವ್ ಶುಕ್ಲಾ, "ಇದು ನಮಗೆ (ರೋಹಿತ್ ಮತ್ತು ವಿರಾಟ್ ಏಕದಿನ ತಂಡದಲ್ಲಿರುವುದು) ತುಂಬಾ ಪ್ರಯೋಜನಕಾರಿಯಾಗಿದೆ. ಏಕೆಂದರೆ ಅವರಿಬ್ಬರೂ ಉತ್ತಮ ಬ್ಯಾಟ್ಸ್‌ಮನ್‌ಗಳು ಮತ್ತು ಅವರಿಬ್ಬರ ಉಪಸ್ಥಿತಿಯಲ್ಲಿ ನಾವು ಆಸ್ಟ್ರೇಲಿಯಾವನ್ನು ಸೋಲಿಸುವಲ್ಲಿ ಯಶಸ್ವಿಯಾಗುತ್ತೇವೆ ಎಂದು ನಾನು ಭಾವಿಸುತ್ತೇನೆ. ಇದು ಇವರ ಕೊನೆಯ ಸರಣಿ ಎಂಬಂತೆ ಏನೂ ಇಲ್ಲ. ನಾವು ಈ ವಿಷಯಗಳಿಗೆ ಎಂದಿಗೂ ಹೋಗಬಾರದು. ಯಾವಾಗ ನಿವೃತ್ತಿ ಘೋಷಿಸಬೇಕೆಂದು ಅವರುಗೆ ಬಿಟ್ಟ ಸಂಗತಿ. ಇದು ಅವರ ಕೊನೆಯ ಸರಣಿ ಎಂದು ಹೇಳುವುದು ಸಂಪೂರ್ಣವಾಗಿ ತಪ್ಪು," ಎಂದು ಸ್ಪಷ್ಟನೆ ನೀಡಿದ್ದಾರೆ.
IND vs AUS: ಭಾರತ ಎದುರಿನ ಏಕದಿನ ಸರಣಿಯ ಆರಂಭಿಕ ಪಂದ್ಯದಿಂದ ಇಂಗ್ಲಿಸ್, ಜಂಪಾ ಔಟ್
ಮೇ ತಿಂಗಳಲ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಂತರ, ಆಸ್ಟ್ರೇಲಿಯಾ ಪ್ರವಾಸದಲ್ಲಿ ರೋಹಿತ್ ಮತ್ತು ಕೊಹ್ಲಿ ಇಬ್ಬರೂ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲಿದ್ದಾರೆ. ಸರಣಿಗೂ ಮುನ್ನ ಆಯ್ಕೆ ಸಮಿತಿಯು ಶುಭಮನ್ ಗಿಲ್ ಅವರನ್ನು ಏಕದಿನ ತಂಡದ ಹೊಸ ನಾಯಕರನ್ನಾಗಿ ನೇಮಿಸಿದೆ. 2025ರ ಮಾರ್ಚ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.
ಆದಾಗ್ಯೂ, ಮುಂದಿನ ಏಕದಿನ ವಿಶ್ವಕಪ್‌ಗೆ ಇನ್ನೂ ಎರಡು ವರ್ಷಗಳ ಸಮಯವಿದೆ. ಈ ಮಹತ್ವದ ಟೂರ್ನಿಗೆ ತಯಾರಿ ನಡೆಸಲು ಗಿಲ್‌ಗೆ ಸಾಕಷ್ಟು ಸಮಯಾವಕಾಶ ನೀಡುವ ಸಲುವಾಗಿ ಆಯ್ಕೆ ಸಮಿತಿಯು ನಾಯಕತ್ವದ ಜವಾಬ್ದಾರಿಯನ್ನು ಅವರಿಗೆ ವರ್ಗಾಯಿಸಿದೆ.