IPL 2026: ʻಸ್ಟಾರ್ ಬೌಲರ್‌ಗಳೇ ಇವರಿಗೆ ಟಾರ್ಗೆಟ್ʼ-ವೈಭವ್ ಸೂರ್ಯವಂಶಿ ಬಗ್ಗೆ ಇರ್ಫಾನ್ ಪಠಾಣ್ ಮಹತ್ವದ ಹೇಳಿಕೆ!
15ರ ವಯಸ್ಸಿನ ವೈಭವ್ ಸೂರ್ಯವಂಶಿ ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ಬೌಲರ್‌ಗಳ ಮನಸಿನಲ್ಲಿ ಭಯ ಹುಟ್ಟಿಸಿದ್ದಾರೆ. ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 78 ರನ್‌ಗಳ ಅಬ್ಬರದ ಇನಿಂಗ್ಸ್ ಆಡಿದರು. ಇರ್ಫಾನ್ ಪಠಾಣ್ ಮತ್ತು ಹರ್ಭಜನ್ ಸಿಂಗ್ ಸೂರ್ಯವಂಶಿ ಬಗ್ಗೆ ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ.
ವೈಭವ್ ಸೂರ್ಯವಂಶಿ ಬಗ್ಗೆ ಇರ್ಫಾನ್ ಪಠಾಣ್ ಮೆಚ್ಚುಗೆ. -
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ 2026ರ (IPL 2026) ಸಾಲಿನ 16ನೇ ಪಂದ್ಯ ಏಪ್ರಿಲ್ 10 ರಂದು ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs RR) ನಡುವೆ ನಡೆದಿತ್ತು. ಈ ಪಂದ್ಯವನ್ನು ರಾಯಲ್ಸ್ 6 ವಿಕೆಟ್‌ಗಳಿಂದ ಸುಲಭವಾಗಿ ಗೆದ್ದುಕೊಂಡಿತು. ರಾಜಸ್ಥಾನದ ಈ ಗೆಲುವಿನಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. 15ರ ವಯಸ್ಸಿನ ಆಟಗಾರ ಮತ್ತೊಮ್ಮೆ ಅದ್ಭುತ ಪ್ರದರ್ಶನವನ್ನು ತೋರಿದರು ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ವೈಭವ್ ಸೂರ್ಯವಂಶಿ ಬಗ್ಗೆ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಹಾಗೂ ಹರ್ಭಜನ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
300 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ನಡೆಸಿದ ವೈಭವ್ ಸೂರ್ಯವಂಶಿ ಕೇವಲ 26 ಎಸೆತಗಳಲ್ಲಿ 78 ರನ್ ಚಚ್ಚಿದರು. ಅವರ ತಮ್ಮ ಸ್ಪೋಟಕ ಇನಿಂಗ್ಸ್‌ನಲ್ಲಿ 8 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನು ಬಾರಿಸಿದ್ದರು. ವೈಭವ್ ಸೂರ್ಯವಂಶಿ ಅವರ ಈ ಪ್ರದರ್ಶನದ ನಂತರ, ಭಾರತ ತಂಡದ ಮಾಜಿ ಆಲ್‌ರೌಂಡರ್‌ಗಳಾದ ಇರ್ಫಾನ್ ಪಠಾಣ್ ಮತ್ತು ಹರ್ಭಜನ್ ಸಿಂಗ್ ಈಗ ಯುವ ಆಟಗಾರನ ಬಗ್ಗೆ ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ.
IPL 2026: ರಾಜಸ್ಥಾನ್ ವಿರುದ್ಧ ಸೋತರೂ ಚೆನ್ನೈ ಸೂಪರ್ ಕಿಂಗ್ಸ್ ದಾಖಲೆ ಸರಿಗಟ್ಟಿದ ಆರ್‌ಸಿಬಿ
ವೈಭವ್ ಅವರ ತಂತ್ರವನ್ನು ಇರ್ಫಾನ್ ಪಠಾಣ್ ಬಹಿರಂಗಪಡಿಸಿದ್ದಾರೆ. ಗಮನಿಸಬೇಕಾದ ಅಂಶವೆಂದರೆ ವೈಭವ್ ಸೂರ್ಯವಂಶಿ ನೇರವಾಗಿ ಅನುಭವಿ ಹಾಗೂ ಸ್ಟಾರ್ ಬೌಲರ್‌ಗಳನ್ನು ಗುರಿಯಾಗಿಸಿಕೊಳ್ಳುತ್ತಾರೆ. ಅವರು ಜಸ್‌ಪ್ರೀತ್ ಬುಮ್ರಾ ಅವರನ್ನು ಗುರಿಯಾಗಿಸಿಕೊಂಡಿದ್ದರು ಮತ್ತು ನಂತರ ಆರ್‌ಸಿಬಿಯ ಭುವನೇಶ್ವರ್ ಕುಮಾರ್ ಅವರ ಮೊದಲ ಎಸೆತದಲ್ಲೇ ಅವರು ಬೌಂಡರಿ ಹೊಡೆದರು. ಆ ಮೂಲಕ 15ರ ವಯಸ್ಸಿನ ಪೋರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಪಾರ ಅನುಭವ ಹೊಂದಿರುವ ಬೌಲರ್‌ಗಳ ಎದುರೇ ಅಬ್ಬರಿಸಿದ್ದಾರೆಂಬುದು ಗಮನಾರ್ಹ ಸಂಗತಿ.
ಸ್ಟಾರ್ ಬೌಲರ್‌ಗಳನ್ನೇ ವೈಭವ್ ಟಾರ್ಗೆಟ್ ಮಾಡುತ್ತಾರೆ: ಇರ್ಫಾನ್ ಪಠಾಣ್
ಇದಕ್ಕೆ ಪ್ರತಿಕ್ರಿಯಿಸಿದ ಭಾರತದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್, "ವೈಭವ್ ಸೂರ್ಯವಂಶಿ ಒಂದು ನಿರ್ದಿಷ್ಟ ಸಿದ್ಧಾಂತದ ಮೇಲೆ ಕಾರ್ಯನಿರ್ವಹಿಸುತ್ತಾರೆ. ಅವರು ಉದ್ದೇಶಪೂರ್ವಕವಾಗಿ ಉನ್ನತ ಬೌಲರ್‌ಗಳನ್ನು ಗುರಿಯಾಗಿಸಿಕೊಳ್ಳುತ್ತಾರೆ. ಈ ತಂತ್ರವು ಇಡೀ ಬೌಲಿಂಗ್ ಘಟಕವನ್ನು ಅಸ್ಥಿರಗೊಳಿಸುತ್ತದೆ," ಎಂದು ಶ್ಲಾಘಿಸಿದ್ದಾರೆ. ಅವರ ಪಕ್ಕದಲ್ಲಿ ಕುಳಿತಿದ್ದ ಹರ್ಭಜನ್ ಸಿಂಗ್ ಕೂಡ ವೈಭವ್ ಅವರನ್ನು ಹೊಗಳಿದರು.
RCB vs MI: ಫಿಲ್ ಸಾಲ್ಟ್ ಔಟ್? ಮುಂಬೈ ಇಂಡಿಯನ್ಸ್ ಕದನಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ XI
ವೈಭವ್ ಸೂರ್ಯವಂಶಿಗೆ ಆರೆಂಜ್ ಕ್ಯಾಪ್
15 ವರ್ಷದ ವೈಭವ್ ಸೂರ್ಯವಂಶಿ ಈ ಐಪಿಎಲ್ ಸೀಸನ್‌ನಲ್ಲಿ ಅದ್ಭುತ ಆರಂಭ ಪಡೆದಿದ್ದಾರೆ. 4 ಪಂದ್ಯಗಳಲ್ಲಿ ಬ್ಯಾಟಿಂಗ್ ನಡೆಸಿದ ಅವರು 50ರ ಸರಾಸರಿ ಮತ್ತು 266.67 ಸ್ಟ್ರೈಕ್ ರೇಟ್‌ನಲ್ಲಿ 200 ರನ್ ಗಳಿಸಿದ್ದಾರೆ. ಈ ಸೀಸನ್‌ನಲ್ಲಿ ಅವರ ಬ್ಯಾಟ್ 18 ಬೌಂಡರಿ ಮತ್ತು 18 ಸಿಕ್ಸರ್‌ಗಳನ್ನು ಬಾರಿಸಿದೆ. ಗಮನಾರ್ಹವಾಗಿ, ವೈಭವ್ ಪ್ರಸ್ತುತ ಆರೆಂಜ್ ಕ್ಯಾಪ್ ಹೊಂದಿದ್ದಾರೆ. ಆ ಮೂಲಕ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ.
ಸತತ ನಾಲ್ಕು ಗೆಲುವು ದಾಖಲಿಸಿದ ಆರ್‌ಆರ್
2026ರ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ, ಒಂದೇ ಒಂದು ಪಂದ್ಯವನ್ನು ಸೋಲದೆ ಅಜೇಯವಾಗಿ ಮುನ್ನಡೆಯುತ್ತಿದೆ. ಆರ್‌ಆರ್ ಆಡಿದ ನಾಲ್ಕೂ ಪಂದ್ಯಗಳನ್ನು ಗೆದ್ದಿದೆ. ರಾಜಸ್ಥಾನ ಪ್ರಸ್ತುತ 8 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದೆ.