ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs PAK: 'ಹಣ ಗಳಿಸಲು ರಾಷ್ಟ್ರೀಯತೆಯನ್ನು ಬಳಸಿಕೊಳ್ಳಲಾಗುತ್ತಿದೆ'; ಬಿಸಿಸಿಐ ವಿರುದ್ಧ ಅಭಿಮಾನಿಗಳ ಆಕ್ರೋಶ

ಈ ವರ್ಷದ ಆರಂಭದಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿಯಿಂದ ಈ ವಿವಾದ ಹುಟ್ಟಿಕೊಂಡಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತವು ಗಡಿಯುದ್ದಕ್ಕೂ ಇರುವ ಉಗ್ರಗಾಮಿ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ನಡೆಸಿತ್ತು. ಹೀಗಾಗಿ ಈ ವರ್ಷದ ಭಾರತ-ಪಾಕಿಸ್ತಾನ ಮುಖಾಮುಖಿಯು ಕ್ರಿಕೆಟ್ ಕಾರಣಗಳಿಗಾಗಿ ಮಾತ್ರವಲ್ಲದೆ, ದೇಶಗಳ ನಡುವಿನ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿಯೂ ಗಮನ ಸೆಳೆದಿದೆ.

ಪಾಕ್‌ ವಿರುದ್ಧ ಗೆದ್ದರೂ ಬಿಸಿಸಿಐ ವಿರುದ್ಧ ಅಭಿಮಾನಿಗಳ ಆಕ್ರೋಶ

-

Abhilash BC Abhilash BC Sep 15, 2025 9:50 AM

ನವದೆಹಲಿ: ದುಬೈ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ ಏಷ್ಯಾಕಪ್‌ ಟಿ20(Asia Cup 2025) ಟೂರ್ನಿಯ 'ಎ' ಗುಂಪಿನ ಹೈವೋಲ್ಟೇಜ್‌ ಪಂದ್ಯದಲ್ಲಿ ಭಾರತ(IND vs PAK) ತಂಡ ಪಾಕಿಸ್ತಾನವನ್ನು 7 ವಿಕೆಟ್‌ ಅಂತರದಿಂದ ಮಣಿಸಿತು. ಇತ್ತಂಡಗಳ ನಡುವಣ ಪಂದ್ಯಕ್ಕೂ ಮುನ್ನವೇ ಬಿಸಿಸಿಐ(BCCI) ವಿರುದ್ಧ ಕಿಡಿಕಾರಿದ್ದ ಅಭಿಮಾನಿಗಳು, ಪಂದ್ಯದ ಬಳಿಕವೂ ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ವಿರುದ್ಧದ ಗೆಲುವಿನ ಬಳಿಕ ಬಿಸಿಸಿಐ ತನ್ನ ಸಾಮಾಜಿಕ ಮಾಧ್ಯಮ X ನಲ್ಲಿ ಪೋಸ್ಟ್ ಭಾರತೀಯ ಆಟಗಾರರ ಫೋಟೊವನ್ನು ಹಂಚಿಕೊಂಡಿತು. ಜತೆಗೆ ನಾಯಕ ಸೂರ್ಯಕುಮಾರ್‌ ಯಾದವ್‌ ಅವರು ‘ಗೆಲುವನ್ನು ಪಹಲ್ಗಾಂ ಸಂತ್ರಸ್ತರು ಹಾಗೂ ಭಾರತೀಯ ಸಶಸ್ತ್ರ ಪಡೆಗಳಿಗೆ ಅರ್ಪಿಸುತ್ತೇವೆ’ ಎಂದಿದ್ದ ಕೋಟ್‌ಗಳನ್ನು ಹಾಕಿತ್ತು. ಇದಕ್ಕೆ ಅಭಿಮಾನಿಗಳಿಂದ ಭಾರೀ ಟೀಕೆ ವ್ಯಕ್ತವಾಗಿದೆ. ಹಣ ಗಳಿಸುವ ಉದ್ದೇಶದಿಂದ ಬಿಸಿಸಿಐ, ರಾಷ್ಟ್ರೀಯತೆಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.

ಈ ವರ್ಷದ ಆರಂಭದಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ದಾಳಿಯಿಂದ ಈ ವಿವಾದ ಹುಟ್ಟಿಕೊಂಡಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತವು ಗಡಿಯುದ್ದಕ್ಕೂ ಇರುವ ಉಗ್ರಗಾಮಿ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ನಡೆಸಿತು. ಈ ಬೆಳವಣಿಗೆಗಳನ್ನು ಗಮನಿಸಿದರೆ, ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಪಂದ್ಯದಲ್ಲಿ ಭಾರತೀಯ ಕ್ರಿಕೆಟ್ ಅಧಿಕಾರಿಗಳು ಭಾಗವಹಿಸಲು ನಿರಾಕರಿಸುತ್ತಾರೆ ಎಂದು ಅನೇಕ ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಭಾರತ ಪಾಕ್‌ ವಿರುದ್ಧ ಕ್ರಿಕೆಟ್‌ ಆಡಲು ನಿರ್ಧರಿಸಿದ್ದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ.

ಇದನ್ನೂ ಓದಿ Asia Cup 2025: ಆರ್‌. ಅಶ್ವಿನ್‌ ದಾಖಲೆ ಮುರಿದ ಕುಲ್‌ದೀಪ್‌ ಯಾದವ್‌

ಒಟ್ಟಾರೆ ಈ ವರ್ಷದ ಭಾರತ-ಪಾಕಿಸ್ತಾನ ಮುಖಾಮುಖಿಯು ಕ್ರಿಕೆಟ್ ಕಾರಣಗಳಿಗಾಗಿ ಮಾತ್ರವಲ್ಲದೆ, ದೇಶಗಳ ನಡುವಿನ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿಯೂ ಗಮನ ಸೆಳೆದಿದೆ.