Cheteshwar Pujara: ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಚೇತೇಶ್ವರ ಪೂಜಾರ
ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡದ ಪ್ರಮುಖರಾಗಿ ಗುರುತಿಸಿಕೊಂಡಿದ್ದ ಚೆತೇಶ್ವರ ಪೂಜಾರ ಅವರು ಭಾನುವಾರ (ಆ. 24) ರಂದು ಎಲ್ಲಾ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪೂಜಾರ ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ.


ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡದ ಪ್ರಮುಖರಾಗಿ ಗುರುತಿಸಿಕೊಂಡಿದ್ದ ಚೆತೇಶ್ವರ ಪೂಜಾರ (Cheteshwar Pujara) ಅವರು ಭಾನುವಾರ (ಆ. 24) ರಂದು ಎಲ್ಲಾ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪೂಜಾರ ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದು, ತಮ್ಮ ಸುದೀರ್ಘ ಕ್ರಿಕೆಟ್ ಜೀವನದಲ್ಲಿ ತಮಗೆ ಸಹಕಾರ ನೀಡಿದ ಎಲ್ಲಾ ಸಹ ಆಟಗಾರರು ಹಾಗೂ ತರಬೇತುದಾರರಿಗೆ ಸದಾ ಋಣಿಯಾಗಿರುತ್ತೇನೆ ಎಂದು ಬರೆದುಕೊಂಡಿದ್ದಾರೆ. ಭಾರತದ ಎಂಟನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಪೂಜಾರ ನಿವೃತ್ತರಾಗಿದ್ದಾರೆ. 103 ಪಂದ್ಯಗಳಲ್ಲಿ 19 ಶತಕಗಳು ಸೇರಿದಂತೆ 43.60 ಸರಾಸರಿಯಲ್ಲಿ 7,195 ರನ್ ಗಳಿಸಿದ ಇವರು ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ.
ಭಾವನಾತ್ಮಕ ಪೋಸ್ಟ್
“ಭಾರತೀಯ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಮತ್ತು ನಾನು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ನನ್ನ ಕೈಲಾದಷ್ಟು ಪ್ರಯತ್ನಿಸುವುದು – ಇವೆಲ್ಲವುದರ ನಿಜವಾದ ಅರ್ಥವನ್ನು ಪದಗಳಲ್ಲಿ ಹೇಳುವುದು ಅಸಾಧ್ಯ. ಆದರೆ ಅಪಾರ ಕೃತಜ್ಞತೆಯಿಂದ ನಾನು ಎಲ್ಲಾ ರೀತಿಯ ಭಾರತೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು” ಎಂದು ಪೂಜಾರ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ನನ್ನ ಕ್ರಿಕೆಟ್ ವೃತ್ತಿಜೀವನದುದ್ದಕ್ಕೂ ಅವಕಾಶ ಮತ್ತು ಬೆಂಬಲ ನೀಡಿದ್ದಕ್ಕಾಗಿ ಬಿಸಿಸಿಐ ಮತ್ತು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್‌ಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ವರ್ಷಗಳಲ್ಲಿ ನಾನು ಪ್ರತಿನಿಧಿಸಲು ಸಾಧ್ಯವಾದ ಎಲ್ಲಾ ತಂಡಗಳು, ಫ್ರಾಂಚೈಸಿಗಳು ಮತ್ತು ಕೌಂಟಿಗಳಿಗೂ ಧನ್ಯವಾದಗಳು” ಎಂದು ತಿಳಿಸಿದ್ದಾರೆ. ನನ್ನ ಮಾರ್ಗದರ್ಶಕರು, ತರಬೇತುದಾರರು ಮತ್ತು ಆಧ್ಯಾತ್ಮಿಕ ಗುರುಗಳ ಅಮೂಲ್ಯ ಮಾರ್ಗದರ್ಶನವಿಲ್ಲದೆ ನಾನು ಇಷ್ಟು ದೂರ ತಲುಪಲು ಸಾಧ್ಯವಾಗುತ್ತಿರಲಿಲ್ಲ. ಅವರಿಗೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ” ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.
ನನ್ನ ಎಲ್ಲಾ ತಂಡದ ಸದಸ್ಯರು, ಸಹಾಯಕ ಸಿಬ್ಬಂದಿ, ನೆಟ್ ಬೌಲರ್‌ಗಳು, ವಿಶ್ಲೇಷಕರು, ಲಾಜಿಸ್ಟಿಕ್ಸ್ ತಂಡ, ಅಂಪೈರ್‌ಗಳು, ಮೈದಾನದ ಸಿಬ್ಬಂದಿ, ಸ್ಕೋರರ್‌ಗಳು, ಮಾಧ್ಯಮ ಸಿಬ್ಬಂದಿ ಮತ್ತು ನಾವು ಪ್ರೀತಿಸುವ ಈ ಆಟವನ್ನು ಸ್ಪರ್ಧಿಸಲು ಮತ್ತು ಆಡಲು ಅನುವು ಮಾಡಿಕೊಡಲು ತೆರೆಮರೆಯಲ್ಲಿ ಅವಿಶ್ರಾಂತವಾಗಿ ಶ್ರಮಿಸುವ ಎಲ್ಲರಿಗೂ ಧನ್ಯವಾದಗಳು ಎಂದು ಅವರು ತಿಳಿಸಿದರು.
ಈ ಸುದ್ದಿಯನ್ನೂ ಓದಿ: ಶುಭಮನ್ ಗಿಲ್ ಅಲ್ಲ! ಟಿ20 ಕ್ರಿಕೆಟ್‌ನಲ್ಲಿ ತನ್ನ ಮನಸು ಗೆದ್ದ ಆಟಗಾರನನ್ನು ಹೆಸರಿಸಿದ ರಾಹುಲ್ ದ್ರಾವಿಡ್!
2025 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪೂಜಾರರನ್ನು ತಂಡಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಆಯ್ಕೆ ಸಮಿತಿ ಭವಿಷ್ಯದ ದೃಷ್ಟಿಯಿಂದ ಕಿರಿಯ ಆಟಗಾರರತ್ತ ಒಲವು ತೋರುತ್ತಿರುವುದರಿಂದ ಅವರು ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಭಾರತದ ತಂಡದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಿಂದ ದೂರ ಸರಿದ ನಂತರ, ಪೂಜಾರ ರಾಷ್ಟ್ರೀಯ ತಂಡಕ್ಕೆ ಮರಳುವುದು ಕಷ್ಟಸಾಧ್ಯ ಎಂದೇ ಹೇಳಲಾಗಿತ್ತು. ಪೂಜಾರ 2023 ರ ಕೆನ್ನಿಂಗ್ಟನ್ ಓವಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯ ಆಡಿದ್ದರು, ಈ ನಡುವೆ ಟೀಮ್ ಇಂಡಿಯಾ ಆಟಗಾರರ ಕಳಪೆ ಪ್ರದರ್ಶನದ ಹೊರತಾಗಿಯೂ ಪೂಜಾರ ಆಯ್ಕೆಯ ಬಗ್ಗೆ ಆಡಳಿತ ಮಂಡಳಿ ಮನಸ್ಸು ಮಾಡಿರಲಿಲ್ಲ.