ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅತ್ಯಾಚಾರ ಪ್ರಕರಣ: ಅಭಿಷೇಕ್ ಪೊರೆಲ್‌ಗೆ ಜಾಮೀನು ನಿರಾಕರಣೆ, 14 ದಿನ ನ್ಯಾಯಾಂಗ ಬಂಧನ!

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಅಭಿಷೇಕ್ ಪೊರೆಲ್ ಅವರಿಗೆ ಜಾಮೀನು ನಿರಾಕರಿಸಲಾಗಿದ್ದು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಆಗಸ್ಟ್‌ 11 ರಂದು ಪೊರೆಲ್‌ ಅವರನ್ನು ಬಂಧಿಸಲಾಗಿತ್ತು.

ಅಭಿಷೇಕ್ ಪೊರೆಲ್‌ಗೆ ಜಾಮೀನು ನಿರಾಕರಣೆ, 14 ದಿನ ನ್ಯಾಯಾಂಗ ಬಂಧನ!

ಅಭಿಷೇಕ್‌ ಪೊರೆಲ್‌ಗೆ ಜಾಮೀನು ನಿರಾಕರಣೆ. -

Profile
Ramesh Kote Aug 14, 2026 7:47 PM

ನವದೆಹಲಿ: ಬಂಗಾಳ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಕ್ರಿಕೆಟಿಗ ಅಭಿಷೇಕ್ ಪೊರೆಲ್ (Abishek Porel) ಅವರಿಗೆ ಶುಕ್ರವಾರ (ಆಗಸ್ಟ್ 14) ನ್ಯಾಯಾಲಾಯ ಜಾಮೀನು ನಿರಾಕರಿಸಲಾಗಿದೆ. ಚಿನ್ಸುರಾ ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ವಿವಾಹವಾಗುವುದಾಗಿ ಭರವಸೆ ನೀಡಿ ಲೈಂಗಿಕ ಸಂಬಂಧ ಹೊಂದಿದ್ದರು ಹಾಗೂ ದುರ್ವರ್ತನೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಯುವತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮೊಗ್ರಾ ಪೊಲೀಸರು ಪೊರೆಲ್ ಅವರನ್ನು ಬಂಧಿಸಿದ್ದರು. ಆಗಸ್ಟ್ 11ರಂದು ಅವರನ್ನು ಮೊದಲ ಬಾರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಂದು ಅವರನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿತ್ತು.

23ರ ವಯಸ್ಸಿನ ವಿಕೆಟ್‌ಕೀಪರ್-ಬ್ಯಾಟರ್ ಪೊರೆಲ್, ಬಂಗಾಳ ತಂಡ ಹಾಗೂ ಐಪಿಎಲ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಿಯಮಿತ ಆಟಗಾರರಾಗಿದ್ದಾರೆ. ಜೂನ್ 23ರಿಂದ ಅವರ ವಿರುದ್ಧ ತನಿಖೆ ನಡೆಯುತ್ತಿದೆ. ಅಂದು ಕರ್ನಾಟಕದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಯುವತಿಯೊಬ್ಬರು ಮೊಗ್ರಾ ಪೊಲೀಸ್ ಠಾಣೆಯಲ್ಲಿ ಕ್ರಿಕೆಟಿಗನ ವಿರುದ್ಧ ದೂರು ದಾಖಲಿಸಿದ್ದರು.

ಮೂಲಗಳ ಪ್ರಕಾರ, ಪೊರೆಲ್ ಮತ್ತು ದೂರುದಾರ ಯುವತಿ ಸುಮಾರು ಮೂರೂವರೆ ವರ್ಷಗಳಿಂದ ಸಂಬಂಧದಲ್ಲಿದ್ದರು. ಇಬ್ಬರೂ ವಿವಾಹವಾಗಲು ಯೋಜಿಸಿದ್ದರು ಮತ್ತು ವಿದೇಶಕ್ಕೂ ಒಟ್ಟಿಗೆ ಪ್ರವಾಸ ಕೈಗೊಂಡಿದ್ದರು ಎನ್ನಲಾಗಿದೆ. ಸುಮಾರು 18 ತಿಂಗಳ ಹಿಂದೆ ಇಬ್ಬರ ನಡುವೆ ವಿವಾದ ಉಂಟಾಗಿ ಪೊಲೀಸರು ಮಧ್ಯಪ್ರವೇಶಿಸಿದ್ದರು. ಆದರೆ ಆಗ ಎಫ್‌ಐಆರ್ ದಾಖಲಾಗಿರಲಿಲ್ಲ.

ಕರ್ನಾಟಕ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನ

ಪೊರೆಲ್ ಅವರನ್ನು ಪತ್ತೆಹಚ್ಚಲು ಪೊಲೀಸರು ಚಂದನ್‌ನಗರದಲ್ಲಿರುವ ಅವರ ನಿವಾಸಕ್ಕೆ ಹಲವು ಬಾರಿ ಭೇಟಿ ನೀಡಿದರೂ, ಅವರನ್ನು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ. ನಂತರ ದೂರುದಾರ ಯುವತಿ ಕೊಲ್ಕತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪೊರೆಲ್ ಅವರನ್ನು ತಕ್ಷಣ ಬಂಧಿಸುವಂತೆ ಹೈಕೋರ್ಟ್ ಮೊಗ್ರಾ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಹೈಕೋರ್ಟ್ ಆದೇಶದ ಬಳಿಕ ಪೊರೆಲ್ ಅವರನ್ನು ಕೊಲ್ಕತಾದಲ್ಲಿ ಬಂಧಿಸಲಾಯಿತು ಮತ್ತು ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆರಂಭಿಕ ಪೊಲೀಸ್ ಕಸ್ಟಡಿ ಅವಧಿ ಮುಗಿದ ಬಳಿಕ, ಪೊರೆಲ್ ಅವರನ್ನು ಶುಕ್ರವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಅವರಿಗೆ ಜಾಮೀನು ನಿರಾಕರಿಸಿ, ಮುಂದಿನ ವಿಚಾರಣೆವರೆಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.