CSK vs RR: ಒಂದು ಸಿಕ್ಸರ್ ಸಿಡಿಸಿ ರೋಹಿತ್ ಶರ್ಮಾ ದಾಖಲೆ ಮುರಿದ ಎಂಎಸ್ ಧೋನಿ!
MS Dhoni breaks Rohit sharma's Record: ಮಂಗಳವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ವಿಕೆಟ್‌ಗಳಿಂದ ಸೋಲು ಅನುಭವಿಸಿತು. ಆ ಮೂಲಕ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 10ನೇ ಸೋಲು ಅನುಭವಿಸಿತು. ಆದರೆ, 17 ಎಸೆತಗಳಲ್ಲಿ 16 ರನ್ ಸಿಡಿಸಿದ ಎಂಎಸ್ ಧೋನಿ, ರೋಹಿತ್ ಶರ್ಮಾ ಅವರ ದೊಡ್ಡ ದಾಖಲೆಯನ್ನು ಮುರಿದಿದ್ದಾರೆ.

ರೋಹಿತ್ ಶರ್ಮಾ ದಾಖಲೆಯನ್ನು ಮುರಿದ ಎಂಎಸ್ ಧೋನಿ.

ನವದೆಹಲಿ: ಮಂಗಳವಾರ ಇಲ್ಲಿನ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ 6 ವಿಕೆಟ್‌ಗಳ ಸೋಲು ಅನುಭವಿಸಿತು. ಆ ಮೂಲಕ ಹದಿನೆಂಟನೇ ಆವೃತ್ತಿಯಲ್ಲಿ ಎಂಎಸ್ ಧೋನಿ (MS Dhoni) ನಾಯಕತ್ವದ ಸಿಎಸ್‌ಕೆಗೆ 10ನೇ ಸೋಲು ಅನುಭವಿಸಿತು. ಅಂದ ಹಾಗೆ ಈ ಪಂದ್ಯದಲ್ಲಿ 17 ಎಸೆತಗಳಲ್ಲಿ 16 ರನ್ ಗಳಿಸಿದರೂ ಎಂಎಸ್ ಧೋನಿ, ಮುಂಬೈ ಇಂಡಿಯನ್ಸ್ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಒಂದು ದೊಡ್ಡ ದಾಖಲೆಯನ್ನು ಮುರಿದಿದ್ದಾರೆ.
ತಮ್ಮ 16 ರನ್‌ಗಳ ಇನಿಂಗ್ಸ್‌ನಲ್ಲಿ ಎಂಎಸ್ ಧೋನಿ ಒಂದು ಸಿಕ್ಸರ್ ಬಾರಿಸಿದ್ದರು. ಆ ಮೂಲಕ ತಮ್ಮ 136 ಇನಿಂಗ್ಸ್‌ಗಳಲ್ಲಿ ಕನಿಷ್ಠ ಸಿಕ್ಸರ್ ಅನ್ನು ಎಂಎಸ್ ಧೋನಿ ಬಾರಿಸಿದಂತಾಗಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಇನಿಂಗ್ಸ್‌ಗಳಲ್ಲಿ ಕನಿಷ್ಠ ಒಂದು ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಎಂಎಸ್ ಧೋನಿ ಬರೆದಿದ್ದಾರೆ. ಆ ಮೂಲಕ 135 ಐಪಿಎಲ್ ಇನಿಂಗ್ಸ್‌ಗಳಲ್ಲಿ ಕನಿಷ್ಠ ಒಂದು ಸಿಕ್ಸರ್ ಬಾರಿಸಿದ ರೋಹಿತ್ ಶರ್ಮಾ ಅವರನ್ನು ಎಂಎಸ್ ಧೋನಿ ಹಿಂದಿಕ್ಕಿದ್ದಾರೆ.
RR vs CSK: ಚೆನ್ನೈ ವಿರುದ್ಧ ಗೆಲುವಿನೊಂದಿಗೆ ಐಪಿಎಲ್ ಅಭಿಯಾನ ಮುಗಿಸಿದ ರಾಜಸ್ಥಾನ್ ರಾಯಲ್ಸ್!
ಅತಿ ಹೆಚ್ಚು ಐಪಿಎಲ್ ಇನಿಂಗ್ಸ್‌ಗಳಲ್ಲಿ ಕನಿಷ್ಠ ಒಂದು ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳು
ಎಂಎಸ್ ಧೋನಿ- 136 ಇನಿಂಗ್ಸ್‌ಗಳು
ರೋಹಿತ್ ಶರ್ಮಾ-135 ಇನಿಂಗ್ಸ್‌ಗಳು
ವಿರಾಟ್ ಕೊಹ್ಲಿ- 134 ಇನಿಂಗ್ಸ್‌ಗಳು
ಐಪಿಎಲ್ ಟೂರ್ನಿಯಲ್ಲಿ 350ಕ್ಕೂ ಅಧಿಕ ಸಿಕ್ಸರ್‌ಗಳನ್ನು ಬಾರಿಸಿದ ಭಾರತದ ನಾಲ್ಕನೇ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಕೂಡ ಎಂಎಸ್ ಧೋನಿ ಬರೆದಿದ್ದಾರೆ.
ರೋಹಿತ್ ಶರ್ಮಾ-542 ಸಿಕ್ಸರ್
ವಿರಾಟ್ ಕೊಹ್ಲಿ-434 ಸಿಕ್ಸರ್
ಸೂರ್ಯಕುಮಾರ್ ಯಾದವ್-368 ಸಿಕ್ಸರ್
ಎಂಎಸ್ ಧೋನಿ-350 ಸಿಕ್ಸರ್
ಸಂಜು ಸ್ಯಾಮ್ಸನ್-348 ಸಿಕ್ಸರ್
ಕೆಎಲ್ ರಾಹುಲ್ ನಾಳೆ-331 ಸಿಕ್ಸರ್
IPL 2025: ಎಂಎಸ್ ಧೋನಿಯ ಪಾದ ಸ್ಪರ್ಶಿಸಿ ಆಶಿರ್ವಾದ ಪಡೆದ ವೈಭವ್ ಸೂರ್ಯವಂಶಿ!
187 ರನ್ ಕಲೆ ಹಾಕಿದ್ದ ಚೆನ್ನೈ ಸೂಪರ್ ಕಿಂಗ್ಸ್
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯುಷ್ ಮ್ಹಾತ್ರೆ (43 ರನ್)A ಅವರ ಸ್ಪೋಟಕ ಬ್ಯಾಟಿಂಗ್ ಹೊರತಾಗುಯೂ ನಿರೀಕ್ಷಿತ ಆರಂಭ ಸಿಗಲಿಲ್ಲ. ಆ ಮೂಲಕ ಸಿಎಸ್‌ಕೆ ಒಂದು ಹಂತದಲ್ಲಿ 78 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೆಮ ಡೆವಾಲ್ಡ್ ಬ್ರೆವಿಸ್ (42) ಹಾಗೂ ಶಿವಂ ದುಬೆ (39) ಅವರ ಸ್ಪೋಟಕ ಬ್ಯಾಟಿಂಗ್ ಬಲದಿಂದ ಚನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ 20 ಓವರ್‌ಗಳಿಗೆ 8 ವಿಕೆಟ್‌ಗಳ ನಷ್ಟಕ್ಕೆ 187 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ರಾಜಸ್ಥಾನ್ ರಾಯಲ್ಸ್‌ಗೆ 188 ರನ್‌ಗಳ ಗುರಿಯನ್ನು ನೀಡಿತ್ತು.
IPL 2025: ಮೊದಲನೇ ಎಸೆತದಲ್ಲಿ ಬೌಂಡರಿ ಬಾರಿಸಿ ಇತಿಹಾಸ ಬರೆದ ಯಶಸ್ವಿ ಜೈಸ್ವಾಲ್!
ವೈಭವ್ ಅರ್ಧಶತಕದಿಂದ ಗೆದ್ದ ರಾಜಸ್ಥಾನ್
ಬಳಿಕ ಗುರಿ ಹಿಂಬಾಲಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ಅಗ್ರ ಮೂವರು ಬ್ಯಟ್ಸ್‌ಮನ್‌ಗಳು ಸ್ಪೋಟಕ ಬ್ಯಾಟ್ ಮಾಡಿದರು. ಆ ಮೂಲಕ ಆರ್‌ಆರ್ ತಂಡಕ್ಕೆ ಭದ್ರ ಅಡಿಪಾಯವನ್ನು ಹಾಕಿದ್ದರು. ಯಶಸ್ವಿ ಜೈಸ್ವಾಲ್ 36 ರನ್ ಗಳಿಸಿದರೆ, ನಾಯಕ ಸಂಜು ಸ್ಯಾಮ್ಸನ್ 41 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ, 14ರ ವಯಸ್ಸಿನ ವೈಭವ್ ಸೂರ್ಯವಂಶಿ ಅವರು 33 ಎಸೆತಗಳಲ್ಲಿ 57 ರನ್‌ಗಳನ್ನು ಸಿಡಿಸಿದರು. ಆ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಗೆಲುವಿಗೆ ನೆರವು ನೀಡಿದರು. ಕೊನೆಯ ಹಂತದಲ್ಲಿ ಧ್ರುವ್ ಜುರೆಲ್ ಅಜೇಯ 31 ರನ್ ಸಿಡಿಸಿದ್ದರು. ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ 17.1 ಓವರ್‌ಗಳಿಗೆ 4 ವಿಕೆಟ್‌ಗಳ ನಷ್ಟಕ್ಕೆ 188 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಗೆಲುವಿನೊಂದಿಗೆ ಆರ್‌ಆರ್ ಟೂರ್ನಿಯ ಅಭಿಯಾನವನ್ನು ಮುಗಿಸಿತು.