ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

RCB vs DC: ಟಾಸ್‌ ಸೋತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮೊದಲ ಬ್ಯಾಟಿಂಗ್‌!

RCB vs DC: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 26ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಡಿಸಿ ನಾಯಕ ಅಕ್ಷರ್‌ ಪಟೇಲ್‌ ಮೊದಲು ಬೌಲಿಂಗ್‌ ಆರಿಸಿಕೊಂಡಿದೆ.

IPL 2026: ಡೆಲ್ಲಿ ಎದುರು ಟಾಸ್‌ ಸೋತ ಆರ್‌ಸಿಬಿ ಮೊದಲ ಬ್ಯಾಟಿಂಗ್‌!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು VS ಡೆಲ್ಲಿ ಕ್ಯಾಪಿಟಲ್ಸ್‌. -

Profile
Ramesh Kote Apr 18, 2026 3:08 PM

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ 26ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು (RCB vs DC) ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಡಿಸಿ ನಾಯಕ ಅಕ್ಷರ್‌ ಪಟೇಲ್‌ ಮೊದಲು ಬೌಲಿಂಗ್‌ ಆರಿಸಿಕೊಂಡಿದ್ದಾರೆ. ಹಾಗಾಗಿ ರಜತ್‌ ಪಾಟಿದಾರ್‌ (Rajat Patidar) ನಾಯಕತ್ವದ ಆರ್‌ಸಿಬಿ ತಂಡ ಮೊದಲು ಬ್ಯಾಟ್‌ ಮಾಡಲಿದೆ ಹಾಗೂ ದೊಡ್ಡ ಮೊತ್ತವನ್ನು ಕಲೆ ಹಾಕುವತ್ತಾ ಗಮನ ಹರಿಸಲಿದೆ.

ಆರ್‌ಸಿಬಿ ತಂಡದ ಪ್ಲೇಯಿಂಗ್‌ XIನಲ್ಲಿ ಯಾವುದೇ ಬದಲಾವಣೆ ಇಲ್ಲ. ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧ ಆಡಿದ್ದ ಅದೇ ಆಡುವ ಬಳಗವನ್ನು ಈ ಪಂದ್ಯಕ್ಕೆ ಉಳಿಸಿಕೊಳ್ಳಲಾಗಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪ್ಲೇಯಿಂಗ್‌ XIನಲ್ಲಿಯೂ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಟಾಸ್‌ ವೇಳೆ ನಾಯಕ ಅಕ್ಷರ್‌ ಪಟೇಲ್‌ ಮಾಹಿತಿ ನೀಡಿದ್ದಾರೆ.

IPL 2026: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ಗ್ರೀನ್‌ ಜರ್ಸಿ ಧರಿಸಲಿರುವ ಆರ್‌ಸಿಬಿ!

ಆತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಪ್ರಸ್ತುತ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನವನ್ನು ತೋರುತ್ತಿದೆ. ಇಲ್ಲಿಯವರೆಗೂ ಆಡಿದ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು ಪಡೆದಿದ್ದು, ಇನ್ನುಳಿದ ಒಂದು ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಎದುರು ಸೋಲು ಅನುಭವಿಸಿತ್ತು. ಒಟ್ಟು 8 ಅಂಕಗಳನ್ನು ಕಲೆ ಹಾಕಿರುವ ಆರ್‌ಸಿಬಿ ಟೂರ್ನಿಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಇನ್ನು ಕೊನೆಯ ಪಂದ್ಯದಲ್ಲಿ ರಿಷಭ್‌ ಪಂತ್‌ ನಾಯಕತ್ವದ ಲಖನೌ ಸೂಪರ್‌ ಜಯಂಟ್ಸ್‌ ಎದುರು ಗೆದ್ದು ಬೀಗಿತ್ತು.



ಇನ್ನು ಅಕ್ಷರ್‌ ಪಟೇಲ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಇಲ್ಲಿಯವರೆಗೂ ಆಡಿದ ನಾಲ್ಕು ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಸೋಲು ಅನುಭವಿಸಿತ್ತು. ಆ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಇನ್ನು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಗುಜರಾತ್‌ ಟೈಟನ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ಎದುರು ಡೆಲ್ಲಿ ಕ್ಯಾಪಿಟಲ್ಸ್‌ ಸೋಲು ಅನುಭವಿಸಿತ್ತು. ಇದೀಗ ಡೆಲ್ಲಿ ಗೆಲುವಿನ ಲಯಕ್ಕೆ ಮರಳಲಿದೆ.



ಉಭಯ ತಂಡಗಳ ಪ್ಲೇಯಿಂಗ್‌ XI

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: ಫಿಲ್‌ ಸಾಲ್ಟ್‌, ವಿರಾಟ್‌ ಕೊಹ್ಲಿ, ದೇವದತ್‌ ಪಡಿಕ್ಕಲ್‌, ರಜತ್‌ ಪಾಟಿದಾರ್‌ (ನಾಯಕ), ಟಿಮ್‌ ಡೇವಿಡ್‌, ಜಿತೇಶ್‌ ಶರ್ಮಾ (ವಿಕೆಟ್‌ ಕೀಪರ್‌), ಕೃಣಾಲ್‌ ಪಾಂಡ್ಯ, ರೊಮ್ಯಾರಿ ಶೆಫರ್ಡ್‌, ಭುವನೇಶ್ವರ್‌ ಕುಮಾರ್‌, ಟಿಮ್‌ ಡೇವಿಡ್‌, ಸುಯಾಶ್‌ ಶರ್ಮಾ



ಡೆಲ್ಲಿ ಕ್ಯಾಪಿಟಲ್ಸ್:‌ ಪಥುಮ್ ನಿಸಾಂಕ, ಕೆಎಲ್ ರಾಹುಲ್ (ವಿಕೆಟ್‌ ಕೀಪರ್), ಸಮೀರ್ ರಿಜ್ವಿ, ಟ್ರಿಸ್ಟನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಅಕ್ಷರ್ ಪಟೇಲ್, ಅಶುತೋಷ್ ಶರ್ಮಾ, ಆಕಿಬ್‌ ನಬಿ, ಕುಲ್‌ದೀಪ್ ಯಾದವ್, ಲುಂಗಿ ಎನ್‌ಗಿಡಿ, ಟಿ. ನಟರಾಜನ್, ಮುಖೇಶ್ ಕುಮಾರ್