ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮೊದಲನೇ ಟೆಸ್ಟ್‌ ಗೆದ್ದರೂ ಭಾರತದ ಚಿಂತೆಗೆ ಕಾರಣವಾಗಿರುವ ಅಂಶವನ್ನು ತಿಳಿಸಿದ ದಿನೇಶ್‌ ಕಾರ್ತಿಕ್‌!

ಶ್ರೀಲಂಕಾ ವಿರುದ್ಧ ಮೊದಲನೇ ಟೆಸ್ಟ್‌ ಪಂದ್ಯವನ್ನು 165 ರನ್‌ಗಳ ಭರ್ಜರಿ ಗೆಲುವು ಪಡೆದ ಹೊರತಾಗಿಯೂ ಭಾರತ ತಂಡದ ಚಿಂತೆಗೆ ಕಾರಣವಾಗಿರುವ ಅಂಶವೇನೆಂದು ಮಾಜಿ ವಿಕೆಟ್‌ ಕೀಪರ್‌ ದಿನೇಶ್‌ ಕಾರ್ತಿಕ್‌ ಬಹಿರಂಗಪಡಿಸಿದ್ದಾರೆ.ಕೊಲಂಬೊ ಪಂದ್ಯಕ್ಕೂ ಮುನ್ನ ಭಾರತಕ್ಕೆ ಅವರು ಎಚ್ಚರಿಕೆ ನೀಡಿದ್ದಾರೆ.

ಭಾರತ ತಂಡದ ಚಿಂತೆಗೆ ಕಾರಣವಾಗಿರುವ ಸಂಗತಿ ತಿಳಿಸಿದ ಕಾರ್ತಿಕ್‌!

ಭಾರತ ತಂಡಕ್ಕೆ ದಿನೇಶ್‌ ಕಾರ್ತಿಕ್‌ ಎಚ್ಚರಿಕೆ. -

Profile
Ramesh Kote Aug 20, 2026 5:42 PM

ನವದೆಹಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯಕ್ಕೆ (IND vs SL) ಕೊಲಂಬೊದ ಆರ್‌ ಪ್ರೇಮದಾಸ ಕ್ರೀಡಾಂಗಣದಲ್ಲಿ ವೇದಿಕೆ ಸಜ್ಜಾಗಿದೆ. ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿ 165 ರನ್‌ಗಳ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದೀಗ ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 23ರಂದು ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೂ, ತಂಡದ ಪ್ರದರ್ಶನದಲ್ಲಿ ಕೆಲವು ಅಂಶಗಳು ಚಿಂತೆಗೆ ಕಾರಣವಾಗಿವೆ. ಅದರಲ್ಲೂ ಎರಡನೇ ಇನಿಂಗ್ಸ್‌ನಲ್ಲಿ ಭಾರತದ ಬ್ಯಾಟಿಂಗ್ ಕುಸಿತದ ಬಗ್ಗೆ ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ (Dinesh Karthik) ಪ್ರವಾಸಿ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.

ಎರಡನೇ ಇನಿಂಗ್ಸ್‌ನಲ್ಲಿ ಭಾರತ ತಂಡದ ಬ್ಯಾಟಿಂಗ್ ಕುಸಿತವನ್ನು ಮುಂದಿನ ಪಂದ್ಯದಲ್ಲಿಯೂ ಮುಂದುವರಿಯದಂತೆ ನೋಡಿಕೊಳ್ಳಬೇಕು ಎಂದು ದಿನೇಶ್‌ ಕಾರ್ತಿಕ್ ಹೇಳಿದ್ದಾರೆ. ಮುಂದಿನ ಟೆಸ್ಟ್ ಪಂದ್ಯಗಳಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ಭಾರತ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.

IND vs SL: ಕೊಲಂಬೊದಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿರುವ ಸಾರಾಂಶ್‌ ಜೈನ್?

“ಎರಡನೇ ಇನಿಂಗ್ಸ್‌ನಲ್ಲಿ ಪರಿಸ್ಥಿತಿ ಸ್ವಲ್ಪ ಕಠಿಣವಾಗಿತ್ತು. ಶ್ರೀಲಂಕಾ ಮತ್ತು ಗಾಲೆ ಬಗ್ಗೆ ಯೋಚಿಸಿದಾಗ ಸಾಮಾನ್ಯವಾಗಿ ಸ್ಪಿನ್ನರ್‌ಗಳು ಹೆಚ್ಚು ವಿಕೆಟ್ ಪಡೆಯುತ್ತಾರೆ ಎಂದು ನಿರೀಕ್ಷಿಸುತ್ತೇವೆ. ಆದರೆ ಎರಡನೇ ಇನಿಂಗ್ಸ್‌ನಲ್ಲಿ ಶ್ರೀಲಂಕಾದ ವೇಗದ ಬೌಲರ್‌ಗಳು ಆರು ವಿಕೆಟ್‌ಗಳನ್ನು ಪಡೆದರು. ಮುಂದಿನ ಯಾವುದೇ ಟೆಸ್ಟ್ ಪಂದ್ಯದಲ್ಲೂ ಭಾರತ ಈ ಅಂಶದ ಬಗ್ಗೆ ಎಚ್ಚರಿಕೆಯಿಂದ ಇರಬೇಕು,” ಎಂದು ದಿನೇಶ್‌ ಕಾರ್ತಿಕ್ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

"ಪ್ರಥಮ ಇನಿಂಗ್ಸ್‌ನಲ್ಲಿ ಭಾರತ 462 ರನ್ ಗಳಿಸಿತ್ತು. ಅಂದರೆ ಟೆಸ್ಟ್ ಪಂದ್ಯದ ಶೇ.50ರಷ್ಟು ನಿಯಂತ್ರಣ ಭಾರತದ ಕೈಯಲ್ಲಿತ್ತು. ನಂತರ ಶ್ರೀಲಂಕಾವನ್ನು ಮೊದಲ ಇನಿಂಗ್ಸ್‌ನಲ್ಲಿ 90 ರನ್‌ಗಳಿಗೆ 5 ವಿಕೆಟ್ ಕಳೆದುಕೊಳ್ಳುವಂತೆ ಮಾಡಿದಾಗ, ಈ ಪಂದ್ಯ ಮೂರೇ ದಿನಗಳಲ್ಲಿ ಮುಗಿಯಬಹುದು ಎಂದು ಅನಿಸಿತ್ತು,” ಎಂದು ಕಾರ್ತಿಕ್ ಹೇಳಿದ್ದಾರೆ.

ವಿರಾಟ್‌ ಕೊಹ್ಲಿ- ಸಚಿನ್‌ ತೆಂಡೂಲ್ಕರ್‌ ನಡುವೆ ಉತ್ತಮ ವಿದೇಶಿ ಟೆಸ್ಟ್‌ ಆಟಗಾರನನ್ನು ಆರಿಸಿದ ಎಬಿಡಿ!

ಕೊಲಂಬೊದಲ್ಲಿ ಉತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿ ಭಾರತ

ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಹೇಗೆ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಮೊದಲ ಟೆಸ್ಟ್‌ನಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಭಾರತ ಸಮಯೋಜಿತ ಪ್ರದರ್ಶನವನ್ನು ನೀಡಿತ್ತು. ಶ್ರೀಲಂಕಾವನ್ನು ಸುಲಭವಾಗಿ ಮಣಿಸುವ ಮೂಲಕ ಸರಣಿಯಲ್ಲಿ ಮುನ್ನಡೆ ಸಾಧಿಸಿತ್ತು. ಪ್ರಥಮ ಇನಿಂಗ್ಸ್‌ನಲ್ಲಿ ಭಾರತ 462 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಶ್ರೀಲಂಕಾ 284 ರನ್ ಗಳಿಸಿತು. ದ್ವಿತೀಯ ಇನಿಂಗ್ಸ್‌ನಲ್ಲಿ ಭಾರತ 193 ರನ್ ಗಳಿಸಿ, ಶ್ರೀಲಂಕಾಗೆ 372 ರನ್‌ಗಳ ಗುರಿ ನೀಡಿತು.

ಆದರೆ ಭಾರತದ ಬೌಲರ್‌ಗಳ ಎದುರು ಶ್ರೀಲಂಕಾ ಕೇವಲ 206 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಭಾರತ 165 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಇದೀಗ ಕೊಲಂಬೊ ಟೆಸ್ಟ್‌ನಲ್ಲೂ ಇದೇ ರೀತಿಯ ಪ್ರಭಾವಶಾಲಿ ಪ್ರದರ್ಶನ ನೀಡಲು ಟೀಮ್‌ ಇಂಡಿಯಾ ಎದುರು ನೋಡುತ್ತಿದೆ.