ENG vs AUS: ಇಂಗ್ಲೆಂಡ್ ವಿರುದ್ಧ ಮೊದಲನೇ ಟೆಸ್ಟ್ ಗೆದ್ದು ವಿಶ್ವದಾಖಲೆ ನಿರ್ಮಿಸಿದ ಆಸ್ಟ್ರೇಲಿಯಾ!
ಆಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡ ವಿಶ್ವದಾಖಲೆಯನ್ನು ಬರೆದಿದೆ. 28.2 ಓವರ್‌ಗಳಲ್ಲಿ 205 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 200+ ಗುರಿಯನ್ನು ವೇಗವಾಗಿ ಬೆನ್ನಟ್ಟಿದ ತಂಡ ಎನ್ನುವ ಹೆಗ್ಗಳಿಕೆಗೆ ಪಾತ್ರವಾಯಿತು.
ಇಂಗ್ಲೆಂಡ್ ವಿರುದ್ಧ ಮೊದಲನೇ ಟೆಸ್ಟ್ ಗೆದ್ದ ಆಸ್ಟ್ರೇಲಿಯಾ. -
ಪರ್ತ್: ಶನಿವಾರ ಇಲ್ಲಿನ ಪರ್ತ್ ಕ್ರಿಕೆಟ್ ಮೈದಾನದಲ್ಲಿ ನಡೆದ ಐದು ಪಂದ್ಯಗಳ ಆಶಸ್(Ashes) ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ (AUS vs ENG) ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಐತಿಹಾಸಿಕ ದಾಖಲೆಯೊಂದನ್ನು ಬರೆದಿದೆ. ಪಂದ್ಯದ ಎರಡನೇ ದಿನ 205 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಆಸೀಸ್ ತಂಡ ಟ್ರಾವಿಸ್ ಹೆಡ್ (Travis Head) ಅವರ ಸ್ಪೋಟಕ ಶತಕದ ನೆರವಿನಿಂದಾಗಿ, ಕೇವಲ 28.2 ಓವರ್‌ಗಳಲ್ಲಿ ಗುರಿ ತಲುಪುವಲ್ಲಿ ಯಶಸ್ವಿಯಾಯಿತು. ಈ ಮೂಲಕ 148 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 200+ ಗುರಿಯನ್ನು ವೇಗವಾಗಿ ಬೆನ್ನಟ್ಟಿದ ತಂಡ ವಿಶ್ವ ದಾಖಲೆಯನ್ನು ಬರೆದಿದೆ.
ಈ ಹಿಂದೆ 35.3 ಓವರ್‌ಗಳಲ್ಲಿ 204 ರನ್‌ಗಳ ಗುರಿಯನ್ನು ತಲುಪಿದ್ದ ಇಂಗ್ಲೆಂಡ್ ದಾಖಲೆಯನ್ನು ಸ್ಟೀವ್ ಸ್ಮಿತ್ ನೇತೃತ್ವದ ಆಸೀಸ್ ತಂಡ ಇದೀಗ ಮುರಿದಿದೆ. ಇದಕ್ಕೂ ಮುನ್ನ ನ್ಯೂಜಿಲೆಂಡ್ ತಂಡ 39.4 ಓವರ್‌ಗಳಲ್ಲಿ 217 ರನ್‌ಗಳನ್ನು ಚೇಸ್ ಮಾಡಿತ್ತು.
IND vs SA 2nd Test: ಕುಲ್ದೀಪ್ ಸ್ಪಿನ್ ಮೋಡಿ, 247ಕ್ಕೆ 6 ವಿಕೆಟ್ ಕಳೆದುಕೊಂಡ ದಕ್ಷಿಣ ಆಫ್ರಿಕಾ!
ಪಂದ್ಯದ ಸಾರಾಂಶ
ನಾಯಕ ಪ್ಯಾಟ್ ಕಮಿನ್ಸ್ ಮತ್ತು ಜಾಶ್ ಹೇಝಲ್‌ವುಡ್ ಅಲಭ್ಯತೆಯ ನಡುವೆ ಮಾರಕ ಬೌಲಿಂಗ್ ದಾಳಿ ನಡೆಸಿದ ಮಿಚೆಲ್ ಸ್ಟಾರ್ಕ್ ತಮ್ಮ ಪಾತ್ರವನ್ನು ಸಮರ್ಥವಾಗಿ ನಿಭಾಯಿಸಿದರು. ಮೊದಲ ಇನಿಂಗ್ಸ್‌ನಲ್ಲಿ ಏಳು ವಿಕೆಟ್ ಪಡೆಯುವ ಮೂಲಕ ಇಂಗ್ಲೆಂಡ್ ತಂಡವನ್ನು 172 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದಕ್ಕೆ ಪ್ರತಿಯಾಗಿ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾವನ್ನು 132 ರನ್‌ಗಳಿಗೆ ಕಟ್ಟಿ ಹಾಕಿ ಇಂಗ್ಲೆಂಡ್ 40 ರನ್ ಮುನ್ನಡೆ ಸಾಧಿಸಿತು. ಈ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಐದು ವಿಕೆಟ್ ಪಡೆದರು. ಮತ್ತು ಬ್ರೈಡೆನ್ ಕಾರ್ಸ್ ಮೂರು ವಿಕೆಟ್ ಮತ್ತು ಜೋಪ್ರಾ ಅರ್ಚರ್ 2 ವಿಕೆಟ್ ಪಡೆದರು.
Travis Head and Mitchell Starc delivered the goods as Australia powered past England in the Ashes opener 💥
— ICC (@ICC) November 22, 2025
Read more from #AUSvENG ⬇️ | #WTC27https://t.co/6M4HnY6uOO
ಇನ್ನು ದ್ವಿತೀಯ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ 164 ರನ್‌ಗಳಿಗೆ ಆಲ್ ಔಟ್ ಆಯಿತು. ಈ ಇನಿಂಗ್ಸ್‌ನಲ್ಲಿ ಸ್ಕಾಟ್ ಬೋಲೆಂಡ್ ನಾಲ್ಕು ವಿಕೆಟ್, ಮಿಚೆಲ್ ಸ್ಟಾರ್ಕ್ ಮತ್ತು ಬ್ರೆಂಡನ್ ಡಗೆಟ್ ತಲಾ ಮೂರು ವಿಕೆಟ್ ಪಡೆದರು. ಬಳಿಕ ಎರಡನೇ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತನ್ನ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ತಂದು ಟ್ರಾವಿಸ್ ಹೆಡ್ ಅವರನ್ನು ಜೇಕ್ ವೆದರ್‌ಲ್ಯಾಂಡ್ ಜೊತೆ ಇನಿಂಗ್ಸ್ ಆರಂಭಿಸಲು ಕಳುಹಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಆರಂಭದಿಂದಲೂ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿದ ಹೆಡ್ 84 ಎಸೆತಗಳಲ್ಲಿ 123 ರನ್ ಗಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಟ್ರಾವಿಸ್ ಹೆಡ್‌ಗೆ ಸಾಥ್ ನೀಡಿದ ಮಾರ್ನಸ್ ಲಾಬುಶೇನ್ 49 ಎಸೆತಗಳಲ್ಲಿ 51 ರನ್ ಗಳಿಸಿ ಅಜೇಯರಾಗಿ ಉಳಿದು ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.
ಆ ಮೂಲಕ ಮೊದಲನೇ ಟೆಸ್ಟ್ ಪಂದ್ಯ ಇನ್ನೂ ಮೂರು ದಿನಗಳು ಬಾಕಿ ಇರರುವಾಗಲೇ ಅಂತ್ಯವಾಗಿದ್ದು, ಎಲ್ಲರಿಗೂ ಅಚ್ಚರಿ ಉಂಟು ಮಾಡಿತು.
IND vs SA: ಭಾರತ ವಿರುದ್ದದ ಒಡಿಐ, ಟಿ20 ಸರಣಿಗಳಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ!
ಮಿಚೆಲ್ ಸ್ಟಾರ್ಕ್‌ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ
ಈ ಪಂದ್ಯದಲ್ಲಿ ಮಾರಕ ಬೌಲಿಂಗ್ ನಡೆಸಿದ ಮಿಚೆಲ್ ಸ್ಟಾರ್ಕ್ ಆಸ್ಟ್ರೇಲಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಅವರು ಪ್ರಥಮ ಇನಿಂಗ್ಸ್‌ನಲ್ಲಿ 7 ವಿಕೆಟ್‌ಗಳು ಹಾಗೂ ದ್ವಿತೀಯ ಇನಿಂಗ್ಸ್‌ನಲ್ಲಿ ಮೂರು ವಿಕೆಟ್ ಕಬಳಿಸಿದರು. ಆ ಮೂಲಕ ಈ ಪಂದ್ಯದಲ್ಲಿ ಒಟ್ಟು 10 ವಿಕೆಟ್‌ಗಳನ್ನು ಕಬಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಉಭಯ ತಂಡಗಳ ನಡುವಣ ಎರಡನೇ ಟೆಸ್ಟ್ ಡಿಸೆಂಬರ್ 4 ರಿಂದ 8 ರವರೆಗೆ ಬ್ರಿಸ್ಬೇನ್‌ನಲ್ಲಿ ನಡೆಯಲಿದೆ.