ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ENG vs IND: ನಾಲ್ಕನೇ ಟೆಸ್ಟ್‌ಗೆ ಭಾರತದ ಪ್ಲೇಯಿಂಗ್‌ XI ಆರಿಸಿದ ಸಂಜಯ್‌ ಮಾಂಜ್ರೇಕರ್‌!

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್‌ ಸರಣಿಯ ನಾಲ್ಕನೇ ಪಂದ್ಯ ಬುಧವಾರದಂದು (ಜುಲೈ 23) ಶುರುವಾಗಲಿದೆ. ಭಾರತ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಎದುರು ನೋಡುತ್ತಿದೆ. ಈ ನಿರ್ಣಾಯಕ ಪಂದ್ಯಕ್ಕೆ ಭಾರತ ತಂಡದ ಮಾಜಿ ಆಟಗಾರ ಸಂಜಯ್‌ ಮಾಂಜ್ರೇಕರ್‌ ತಮ್ಮ ಪ್ಲೇಯಿಂಗ್‌ XI ಆರಿಸಿದ್ದಾರೆ.

ನಾಲ್ಕನೇ ಟೆಸ್ಟ್‌ಗೆ ಭಾರತದ ಪ್ಲೇಯಿಂಗ್‌ XI ಆರಿಸಿದ ಸಂಜಯ್‌ ಮಾಂಜ್ರೇಕರ್‌!

ಭಾರತ ತಂಡದ ಪ್ಲೇಯಿಂಗ್‌ XI ಆರಿಸಿದ ಸಂಜಯ್‌ ಮಾಂಜ್ರೇಕರ್‌.

Profile Ramesh Kote Jul 22, 2025 8:34 PM

ಮ್ಯಾಂಚೆಸ್ಟರ್‌: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್‌ ಸರಣಿಯ ನಾಲ್ಕನೇ ಪಂದ್ಯ (IND vs ENG) ಬುಧವಾರದಂದು (ಜುಲೈ 23) ಶುರುವಾಗಲಿದೆ. ಭಾರತ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಸಮಬಲಗೊಳಿಸುವ ನಿರೀಕ್ಷೆಯಲ್ಲಿದೆ. ಈ ನಿರ್ಣಾಯಕ ಪಂದ್ಯಕ್ಕೆ ಭಾರತ ತಂಡದ ಮಾಜಿ ಆಟಗಾರ ಸಂಜಯ್‌ ಮಾಂಜ್ರೇಕರ್‌ (Sanjay Manjrekar) ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಇಬ್ಬರು ಆಟಗಾರರನ್ನು ಕೈ ಬಿಟ್ಟು ತಮ್ಮ ನೆಚ್ಚಿನ ಪ್ಲೇಯಿಂಗ್‌ XI ಅನ್ನು ಆಯ್ಕೆ ಮಾಡಿದ್ದಾರೆ. ಇನ್ನು ಆಡುವ ಹನ್ನೊಂದರ ಬಳಗವನ್ನು ಹೆಸರಿಸಿರುವ ಮಾಂಜ್ರೇಕರ್‌, ಆರಂಭಿಕರಾಗಿ ಕನ್ನಡಿಗ ಕೆ ಎಲ್‌ ರಾಹುಲ್‌ ಮತ್ತು ಯಶಸ್ವಿ ಜೈಸ್ವಾಲ್‌ ಅವರನ್ನೇ ಮುಂದುವರಿಸಿದ್ದಾರೆ. ಮೂರನೇ ಕ್ರಮಾಂಕದಲ್ಲಿ ನಿರೀಕ್ಷೆಯಂತೆ ಕರುಣ್‌ ನಾಯರ್‌ (Karun Nair) ಕೈ ಬಿಟ್ಟು, ಯುವ ಆಟಗಾರ ಸಾಯಿ ಸುದರ್ಶನ್‌ ಅವರನ್ನು ಆಯ್ಕೆ ಮಾಡಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ತೋರದೆ ಸತತ ವೈಫಲ್ಯ ಅನುಭವಿಸುತ್ತಿರುವ ಕರುಣ್‌ ಅವರನ್ನು ಕೈಬಿಟ್ಟು ಸಾಯಿ ಸುದರ್ಶನ್‌ಗೆ ಅವಕಾಶ ನೀಡಬೇಕೆಂದು ಮ್ಯಾನೇಜ್‌ಮೆಂಟ್‌ಗೆ ಒತ್ತಾಯ ಮಾಡಿದ್ದಾರೆ.

ಇನ್ನು ಸಹಜವಾಗಿ 4 ಮತ್ತು 5ನೇ ಕ್ರಮಾಂಕಕ್ಕೆ ತಂಡದ ನಾಯಕ ಶುಭ್‌ಮನ್‌ ಗಿಲ್‌ ಹಾಗೂ ವಿಕೆಟ್‌ ಕೀಪರ್‌ ರಿಷಬ್‌ ಪಂತ್‌ ಅವರನ್ನು ಗುರುತಿಸಿದ್ದಾರೆ. ಅಚ್ಚರಿ ಏನೆಂದರೆ 6ನೇ ಕ್ರಮಾಂಕದಲ್ಲಿ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಧೃವ ಜುರೆಲ್‌ಗೆ ಅವಕಾಶ ನೀಡಿದ್ದಾರೆ. ಇನ್ನು ಏಳು ಮತ್ತು ಎಂಟನೇ ಸ್ಥಾನದಲ್ಲಿ ಕ್ರಮವಾಗಿ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್‌ ಸುಂದರ್‌ ಅವರನ್ನು ಆಯ್ಕೆ ಮಾಡಿದ್ದಾರೆ. ಮುಂದುವರಿದು, ಪ್ರಮುಖ ವೇಗಿಗಳಾದ ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌ ಹಾಗೂ ಪ್ರಸಿಧ್‌ ಕೃಷ್ಣ ಅವರನ್ನು ಆರಿಸಿದ್ದಾರೆ. ಒಂದು ವೇಳೆ ಪ್ರಸಿಧ್‌ ಕೃಷ್ಣ ಅವರನ್ನು ಕಣಕ್ಕಿಳಿಸದಿದ್ದಲ್ಲಿ ಹರಿಯಾಣದ ವೇಗಿ ಅನ್ಶುಲ್ ಕಾಂಬೋಜ್​ಗೆ ತಂಡದಲ್ಲಿ ಸ್ಥಾನ ನೀಡುವುದು ಉತ್ತಮ ಎಂದಿದ್ದಾರೆ.

IND vs ENG: ಮ್ಯಾಂಚೆಸ್ಟರ್‌ ಟೆಸ್ಟ್‌ಗೆ ಭಾರತ ತಂಡದ ಪ್ಲೇಯಿಂಗ XI ಆರಿಸಿದ ಆರ್‌ ಅಶ್ವಿನ್‌!

ಸಂಜಯ್‌ ಮಾಂಜ್ರೇಕರ್‌ ಆಯ್ಕೆಯ ಭಾರತದ ಪ್ಲೇಯಿಂಗ್‌ xi

ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಶುಭ್​ಮನ್ ಗಿಲ್, ರಿಷಭ್ ಪಂತ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

ಕರುಣ್‌ ನಾಯರ್‌ ಪ್ರದರ್ಶನದ ಬಗ್ಗೆ ಮಾಂಜ್ರೇಕರ್‌ ಬೇಸರ

ಸತತ 8 ವರ್ಷಗಳ ಬಳಿಕ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಕನ್ನಡಿಗ ಕರುಣ್‌ ನಾಯರ್‌ ಅವರ ವೈಫಲ್ಯದ ಬಗ್ಗೆ ಸಂಜಯ್‌ ಮಾಂಜ್ರೇಕರ್‌ ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ 3 ಪಂದ್ಯಗಳಲ್ಲಿ ಕರುಣ್‌ ಪ್ರದರ್ಶನ ಸುಧಾರಣೆಯಾಗಿಲ್ಲ. 3 ಪಂದ್ಯಗಳ 6 ಇನಿಂಗ್ಸ್‌ಗಳಲ್ಲಿ ಒಟ್ಟು 131 ರನ್‌ ಕಲೆ ಹಾಕಿದ್ದಾರೆ. ಕೆಲವು ಇನಿಂಗ್ಸ್‌ಗಳಲ್ಲಿ ಉತ್ತಮ ಆರಂಭ ಕಂಡರೂ ಅದನ್ನು ದೊಡ್ಡ ಮೊತ್ತವನ್ನಾಗಿಸುವಲ್ಲಿ ವಿಫಲರಾಗಿದ್ದರು. ಕ್ರಿಸ್‌ನಲ್ಲಿ ಔಟ್‌ ಆಗುತ್ತಿರುವುದು ತಂಡಕ್ಕೆ ಆತಂಕದ ವಿಚಾರವಾಗಿದೆ. ಹಾಗಾಗಿ ಕರುಣ್‌ ನಾಯರ್‌ ಬದಲು ಯುವ ಎಡಗೈ ಬ್ಯಾಟ್ಸ್‌ಮನ್‌ ಸಾಯಿ ಸುದರ್ಶನ್‌ ಅವರಿಗೆ ಅವಕಾಶ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

IND vs ENG: 8 ವರ್ಷಗಳ ಬಳಿಕ ಇಂಗ್ಲೆಂಡ್‌ ತಂಡಕ್ಕೆ ಮರಳಿದ ಲಿಯಾಮ್‌ ಡಾಸನ್‌ ಯಾರು?

ಭಾರತ ಟೆಸ್ಟ್ ತಂಡ

ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್

ಬರಹ: ಕೆ ಎನ್ ರಂಗು ಚಿತ್ರದುರ್ಗ