ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: ಬ್ರಾಡ್ಮನ್, ಲಾರಾ ಒಳಗೊಂಡ ಎಲೈಟ್ ಪಟ್ಟಿಗೆ ಸೇರುವ ಸನಿಹದಲ್ಲಿ ರಿಷಭ್ ಪಂತ್!

ಲೀಡ್ಸ್‌ನ ಹೆಡಿಂಗ್ಲೆಯಲ್ಲಿ ಮುಕ್ತಾಯಗೊಂಡಿದ್ದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ ವಿಕೆಟ್‌ಗಳಿಂದ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿತ್ತು. ಆದರೆ ಎರಡು ಇನಿಂಗ್ಸ್‌ಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದ ರಿಷಭ್ ಪಂತ್, ಜುಲೈ 2 ರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪ್ರಥಮ ಇನಿಂಗ್ಸ್‌ನಲ್ಲಿ ಶತಕ ಸಿಡಿಸಿದರೆ ದಿಗ್ಗಜರನ್ನು ಒಳಗೊಂಡ ಎಲೈಟ್ ಪಟ್ಟಿಗೆ ಸೇರುವ ಸನಿಹದಲ್ಲಿದ್ದಾರೆ.

IND vs ENG: ವಿಶೇಷ ದಾಖಲೆ ಸೇರುವ ಸನಿಹದಲ್ಲಿ ರಿಷಭ್‌ ಪಂತ್‌!

ವಿಶೇಷ ದಾಖಲೆಯ ಸನಿಹದಲ್ಲಿ ರಿಷಭ್‌ ಪಂತ್‌.

Profile Ramesh Kote Jun 28, 2025 8:45 PM

ನವದೆಹಲಿ: ಕ್ರಿಕೆಟ್ ದಿಗ್ಗಜರಾದ ಸರ್ ಡಾನ್ ಬ್ರಾಡ್ಮನ್, ಬ್ರಿಯಾನ್ ಲಾರಾ, ರಾಹುಲ್ ದ್ರಾವಿಡ್, ಚಾರ್ಲ್ಸ್ ಜಾರ್ಜ್ ಮ್ಯಾಕ್ರ್ಟ್ನಿ, ವಾರೆನ್ ಬಾರ್ಡ್ಸ್ಲೆ ಇರುವ ಎಲೈಟ್ ಪಟ್ಟಿಗೆ ಸೇರುವ ಸನಿಹದಲ್ಲಿ ಭಾರತ ತಂಡದ ಯುವ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant) ನಿಂತಿದ್ದಾರೆ. ಲೀಡ್ಸ್‌ನ ಹೆಡಿಂಗ್ಲೆಯಲ್ಲಿ ನಡೆದಿದ್ದ ಮೊದಲನೇ ಟೆಸ್ಟ್ ಪಂದ್ಯದಲ್ಲಿ(IND vs ENG) ಭಾರತದ 5 ವಿಕೆಟ್‌ಗಳಿಂದ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿತ್ತಾದರೂ ಎರಡು ಇನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ್ದ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ಎರಡನೇ ವಿಕೆಟ್ ಕೀಪರ್ ಎಂಬ ಹೊಸ ಮೈಲುಗಲ್ಲು ಸ್ಥಾಪಿಸಿದ್ದರು.

ಇಂಗ್ಲೆಂಡ್‌ನಲ್ಲಿ ಅದ್ಭುತ ಬ್ಯಾಟಿಂಗ್ ದಾಖಲೆ ಹೊಂದಿರುವ ರಿಷಭ್ ಪಂತ್, 2022ರಲ್ಲಿ ಶತಕ (146 ರನ್) ಸಿಡಿಸಿದ್ದರು. ಪ್ರಸಕ್ತ ಟೆಸ್ಟ್‌ ಸರಣಿಯಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಪಂತ್, ಬರ್ಮಿಂಗ್‌ಹ್ಯಾಮ್‌ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಶತಕ ಸಿಡಿಸಿದರೆ, ಇಂಗ್ಲೆಂಡ್ ವಿರುದ್ಧ ಅವರದೇ ನೆಲದಲ್ಲಿ ಈ ಸಾಧನೆ ಮಾಡಿದ ವಿಶ್ವದ 7ನೇ ಆಟಗಾರ ಎಂಬ ದಾಖಲೆ ಬರೆದು ದಿಗ್ಗಜರಿರುವ ಎಲೈಟ್ ಲಿಸ್ಟ್‌ಗೆ ಸೇರ್ಪಡೆಯಾಗಲಿದ್ದಾರೆ.

ENG vs IND: ಬರ್ಮಿಂಗ್‌ಹ್ಯಾಮ್‌ ಟೆಸ್ಟ್‌ ಹಿನ್ನೋಟ; ಐತಿಹಾಸಿಕ ಗೆಲುವಿಗೆ ಭಾರತ ಕಾತರ

ರಾಹುಲ್ ದ್ರಾವಿಡ್ ದಾಖಲೆ ಸರಿಗಟ್ಟುವ ಹಾದಿಯಲ್ಲಿ ಪಂತ್

ಭಾರತದ ಮಹಾಗೋಡೆ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಅವರು 2002ರಲ್ಲಿ ಇಂಗ್ಲೆಂಡ್ ವಿರುದ್ಧ ಸತತ ಮೂರು ಶತಕ ಸಿಡಿಸಿದ ಏಕೈಕ ಭಾರತದ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆ ಸರಿಗಟ್ಟುವ ಸನಿಹದಲ್ಲಿ ರಿಷಭ್ ಪಂತ್ ಇದ್ದಾರೆ. ನ್ಯೂಜಿಲೆಂಡ್‌ನ ಡ್ಯಾರಿಲ್ ಮಿಚೆಲ್ ಇಂಗ್ಲೆಂಡ್ ವಿರುದ್ಧ ಕೊನೆಯ ಬಾರಿ (2022) ಈ ಸಾಧನೆ ಮಾಡಿದ ಆಟಗಾರರಾಗಿದ್ದಾರೆ.

1000 ರನ್‌ಗಳ ಹೊಸ್ತಿಲಲ್ಲಿ ಪಂತ್

ಆಂಗ್ಲರ ನಾಡಿನಲ್ಲಿ 27ರ ಹರೆಯದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆಡಿರುವ 19 ಇನಿಂಗ್ಸ್‌ಗಳಿಂದ 45.52ರ ಸರಾಸರಿಯಲ್ಲಿ 808 ರನ್ ಗಳಿಸಿದ್ದು, ಇದರಲ್ಲಿ 4 ಶತಕ ಹಾಗೂ 2 ಅರ್ಧಶತಕಗಳಿದ್ದು, 1000 ರನ್‌ಗಳಿಸುವ ಹೊಸ್ತಿಲಲ್ಲಿ ಪಂತ್ ನಿಂತಿದ್ದಾರೆ.

IND vs ENG: ಭಾರತ ತಂಡದ ಬೌಲಿಂಗ್‌ ವಿಭಾಗವನ್ನು ಟೀಕಿಸಿದ ಮೊಹಮ್ಮದ್‌ ಶಮಿ!

ಶತಕಗಳ ಜೊತೆಯಾಟ ನೀಡಿದ ಪಂತ್‌

ಲೀಡ್ಸ್‌ನ ಹೆಡಿಂಗ್ಲೆ ಟೆಸ್ಟ್ ಪಂದ್ಯದಲ್ಲಿ ಎರಡು ಶತಕಗಳ ಜೊತೆಯಾಟದಲ್ಲಿ ರಿಷಭ್ ಪಂತ್ ಪಾಲ್ಗೊಂಡಿದ್ದರು. ಪ್ರಥಮ ಇನಿಂಗ್ಸ್‌ನಲ್ಲಿ ನಾಯಕ ಶುಭಮನ್ ಗಿಲ್ ಜೊತೆಗೂಡಿ 4ನೇ ವಿಕೆಟ್‌ಗೆ 209 ರನ್ ಜೊತೆಯಾಟವಾಡಿದ್ದ ಪಂತ್ (134 ರನ್), ದ್ವಿತೀಯ ಇನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಜೊತೆಗೂಡಿ 195 ರನ್‌ಗಳ ಜೊತೆಯಾಟದಲ್ಲಿ ರಿಷಭ್ ಪಂತ್ (118 ರನ್) ಪಾಲ್ಗೊಂಡಿದ್ದರು.

IND vs ENG: ಜಸ್‌ಪ್ರೀತ್‌ ಬುಮ್ರಾ ಔಟ್‌, ಎರಡನೇ ಟೆಸ್ಟ್‌ಗೆ ಭಾರತ ತಂಡದಲ್ಲಿ 4 ಬದಲಾವಣೆ ಸಾಧ್ಯತೆ!

ಭಾರತಕ್ಕೆ 5 ವಿಕೆಟ್ ಸೋಲು

ರಿಷಭ್ ಪಂತ್ ಅವರ ಅದ್ಭುತ ಪ್ರದರ್ಶನದ ಹೊರತಾಗಿಯೂ 371 ರನ್‌ಗಳ ಗುರಿಯನ್ನು ಇಂಗ್ಲೆಂಡ್ 5 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತ್ತು. ಜುಲೈ 2 ರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲೂ ಪಂತ್ ಅದ್ಭುತ ಪ್ರದರ್ಶನ ತೋರುವ ಮೂಲಕ ಹಲವು ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿ ನಿಂತಿದ್ದಾರೆ.