ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

2026ರ ಟಿ20 ವಿಶ್ವಕಪ್ ಫೈನಲ್‌ಗೆ ತಲುಪಬಲ್ಲ 2 ತಂಡಗಳನ್ನು ಆರಿಸಿದ ಮೈಕಲ್ ಕ್ಲಾರ್ಕ್!

2026ರ ಟಿ20 ವಿಶ್ವಕಪ್ ಟೂರ್ನಿಯು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿದ್ದು, ಎಲ್ಲಾ ತಂಡಗಳು ಈಗಾಗಲೇ ಸಿದ್ಧತೆ ಆರಂಭಿಸಿವೆ. ಇದರ ನಡುವೆ ಆಸ್ಟ್ರೇಲಿಯಾ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಈ ಬಾರಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ಗೆ ಅರ್ಹತೆ ಪಡೆಯಬಲ್ಲ ಎರಡು ಪ್ರಮುಖ ತಂಡಗಳನ್ನುಆರಿಸಿದ್ದಾರೆ.

ಟಿ20 ವಿಶ್ವಕಪ್‌ ಫೈನಲ್‌ಗೇರಬಲ್ಲ 2 ತಂಡಗಳನ್ನು ಆರಿಸಿದ ಕ್ಲಾರ್ಕ್‌!

ಟಿ20 ವಿಶ್ವಕಪ್‌ ಫೈನಲ್‌ಗೇರಬಲ್ಲ 2 ತಂಡಗಳನ್ನು ಆರಿಸಿದ ಕ್ಲಾರ್ಕ್‌. -

Profile
Ramesh Kote Jan 22, 2026 8:05 PM

ನವದೆಹಲಿ: ಮುಂಬರುವ ಟಿ20 ವಿಶ್ವಕಪ್ (ICC T20 World Cup 2026) ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿದ್ದು, ಭಾರತ ತಂಡ (India's T20 World Cup) ಫೆಬ್ರವರಿ 7 ರಂದು ಯುಎಸ್‌ಎ (ಅಮೆರಿಕಾ) ವಿರುದ್ಧ ಪಂದ್ಯದ ಮೂಲಕ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ಈ ಕುರಿತು ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕಲ್ ಕ್ಲಾರ್ಕ್ (Michael Clerke) ಭವಿಷ್ಯ ನುಡಿದಿದ್ದು, ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಂಬರುವ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ಗೆ ಪ್ರವೇಶ ಮಾಡಲಿವೆ ಎಂದು ಭವಿಷ್ಯ ನುಡಿದಿದ್ದಾರೆ.

ಇತ್ತ ಭಾರತ, ಪಾಕಿಸ್ತಾನ, ಅಮೆರಿಕ, ನೆರ್ದಲೆಂಡ್ಸ್ ಮತ್ತು ನಮೀಬಿಯಾ ತಂಡಗಳು 'ಎ' ಗುಂಪಿನಲ್ಲಿ ಸ್ಥಾನ ಪಡೆದಿವೆ. ಆಸ್ಟ್ರೇಲಿಯಾ, ಶ್ರೀಲಂಕಾ, ಜಿಂಬಾಬ್ವೆ, ಐರ್ಲೆಂಡ್ ಮತ್ತು ಓಮನ್ 'ಬಿ' ಗುಂಪಿನಲ್ಲಿ ಸ್ಥಾನ ಪಡೆದಿವೆ. ಇನ್ನೂ, ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಫೆಬ್ರವರಿ 15ರಂದು ಕೊಲಂಬೋದಲ್ಲಿ ಮುಖಾಮುಖಿಯಾಗಲಿದ್ದು, ಉಭಯ ತಂಡಗಳ ನಡುವೆ ಹೈ-ವೋಲ್ಟೇಜ್ ಕದನ ನಡೆಯುವ ನಿರೀಕ್ಷೆ ಇದೆ.

ಈ ಕುರಿತು ಮಾತನಾಡಿರುವ ಮೈಕಲ್‌ ಕ್ಲಾರ್ಕ್, ಭಾರತ ತಂಡ ಪಾಕಿಸ್ತಾನದ ವಿರುದ್ಧ ನಿರಂತರವಾಗಿ ಮೇಲುಗೈ ಸಾಧಿಸುತ್ತಾ ಬಂದಿದೆ. ಹೀಗಾಗಿ ಪಾಕಿಸ್ತಾನ ಭಾರತದ ವಿರುದ್ದದ ಒತ್ತಡವನ್ನು ಸಮರ್ಥವಾಗಿ ನಿಭಾಯಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

20 ಎಸೆತಗಳಲ್ಲಿ 44 ರನ್‌ ಚಚ್ಚಿದ ರಿಂಕು ಸಿಂಗ್‌ ಬಗ್ಗೆ ಸೈಮನ್‌ ದೌಲ್‌ ಅಚ್ಚರಿ ಹೇಳಿಕೆ!

ಈ ಕುರಿತು ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿರುವ ಆಸ್ಟ್ರೇಲಿಯಾ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್, "ಎಲ್ಲರೂ ಅದನ್ನು( ಭಾರತ vs ಪಾಕಿಸ್ತಾನ ಪಂದ್ಯ) ನೋಡಲು ಬಯಸುತ್ತಾರೆ. ಆದರೆ ಭಾರತವು ದೀರ್ಘಕಾಲದವರೆಗೆ ಅವರನ್ನು (ಪಾಕ್) ಮೀರಿಸಿದೆ. ಪಾಕಿಸ್ತಾನ ಇನ್ನೂ ಮೆಟ್ಟಿ ನಿಂತಿಲ್ಲ. ಭಾರತದೊಂದಿಗೆ ಆಡುವ ಒತ್ತಡ ಮತ್ತು ಆ ಪೈಪೋಟಿಯನ್ನು ಪಾಕಿಸ್ತಾನ ನಿಭಾಯಿಸಲು ಸಾಧ್ಯವಾಗುತ್ತದೆ," ಎಂದು ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇನ್ನೂ, ಈ ಬಾರಿಯ ಟಿ20 ವಿಶ್ವಕಪ್ ಫೈನಲ್ ತಲುಪುವ ತಂಡಗಳನ್ನು ಹೆಸರಿಸಿರುವ ಮೈಕಲ್ ಕ್ಲಾರ್ಕ್, "ನಿರಂತರವಾಗಿ ಟಿ 20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಉತ್ತಮ ಪ್ರದರ್ಶನ ತೋರುತ್ತಿವೆ. ಈ ಬಾರಿಯೂ ಈ ಎರಡೂ ತಂಡಗಳು ಫೈನಲ್ ಪ್ರವೇಶಿಸುವ ಸಾಧ್ಯತೆ ಇದೆ," ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಎರಡು ಬಾರಿ ಚಾಂಪಿಯನ್ಸ್ ಪಟ್ಟ ಅಲಂಕರಿಸಿರುವ ಭಾರತ ಇಲ್ಲಿಯವರೆಗೆ ಭಾರತ ಎರಡು ಬಾರಿ ಟಿ20 ವಿಶ್ವಕಪ್ ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ. 2007ರ ಉದ್ಘಾಟನಾ ಆವೃತ್ತಿಯಲ್ಲಿ ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಎಂ ಎಸ್ ಧೋನಿ ಅವರ ನಾಯಕತ್ವದಲ್ಲಿ ಮೊದಲ ಬಾರಿಗೆ ಟ್ರೋಫಿಯನ್ನು ಎತ್ತಿ ಹಿಡಿಯಿತು. ಬಳಿಕ 2024ರಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.

IND vs NZ: ಎರಡನೇ ಟಿ20ಐ ಪಂದ್ಯಕ್ಕೆ ಭಾರತ ತಂಡದಲ್ಲಿ ಎರಡು ಬದಲಾವಣೆ ಸಾಧ್ಯತೆ!

ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಎಂಟು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಆರು ಬಾರಿ ಜಯಗಳಿಸಿದ್ದು, ಪಾಕಿಸ್ತಾನ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಇನ್ನೊಂದು ಪಂದ್ಯ ಡ್ರಾ ನಲ್ಲಿ ಕೊನೆಗೊಂಡಿದೆ. 2024 ರ ಆವೃತ್ತಿಯಲ್ಲಿ ಎರಡೂ ತಂಡಗಳು ಕೊನೆಯ ಆವೃತ್ತಿಯಲ್ಲಿ ಮುಖಾಮುಖಿಯಾದಾಗ ಪಾಕ್ 6 ರನ್ ಗಳ ಅಂತರದಲ್ಲಿ ಸೋಲು ಕಂಡಿತ್ತು.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.