2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಆಡಬೇಕೆಂದ ಅಜಿಂಕ್ಯ ರಹಾನೆ!
2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ನಿಮಿತ್ತ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾಗೆ 50 ಓವರ್‌ಗಳ ಕ್ರಿಕೆಟ್ ಭವಿಷ್ಯದ ಬಗ್ಗೆ ಬಿಸಿಸಿಐ ಸ್ಪಷ್ಟತೆ ನೀಡಬೇಕೆಂದು ಮಾಜಿ ನಾಯಕ ಅಜಿಂಕ್ಯ ರಹಾನೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಏಕದಿನ ವಿಶ್ವಕಪ್ ನಿಮಿತ್ತ ವಿರಾಟ್ ಕೊಹ್ಲಿಗೂ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಅಜಿಂಕ್ಯ ರಹಾನೆ ಬೆಂಬಲ. -
ನವದೆಹಲಿ: ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರ ಏಕದಿನ ಕ್ರಿಕೆಟ್ ಭವಿಷ್ಯದ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸ್ಪಷ್ಟತೆ ನೀಡಬೇಕೆಂದು ಮಾಜಿ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ (Ajinkya Rahane) ಸಲಹೆ ನೀಡಿದ್ದಾರೆ. ಅಲ್ಲದೆ ಹಿಟ್‌ಮ್ಯಾನ್‌ಗೆ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅವಕಾಶ ನೀಡಬೇಕೆಂದು ಮುಂಬೈ ಮಾಜಿ ನಾಯಕ ಆಗ್ರಹಿಸಿದ್ದಾರೆ. ರೋಹಿತ್ ಶರ್ಮಾ ಜೊತೆಗೆ ವಿರಾಟ್ ಕೊಹ್ಲಿಗೂ ಕೂಡ ರಹಾನೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಟಿ20ಐ ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಅವರು ಸದ್ಯ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡುವ ಸಲುವಾಗಿ 50 ಓವರ್‌ಗಳ ಸ್ವರೂಪದಲ್ಲಿ ತಮ್ಮ ಸಹ ಆಟಗಾರ ವಿರಾಟ್ ಕೊಹ್ಲಿ ಅವರೊಂದಿಗೆ ಸಕ್ರಿಯರಾಗಿದ್ದಾರೆ. ಟಿ20 ವಿಶ್ವಕಪ್ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿರುವ ರೋಹಿತ್ ಶರ್ಮಾ, 50 ಓವರ್‌ಗಳ ವಿಶ್ವಕಪ್ ಗೆಲ್ಲುವ ಕನಸನ್ನು ನನಸು ಮಾಡಿಕೊಳ್ಳಲು ಎದುರು ನೋಡುತ್ತಿದ್ದಾರೆ. ಆದರೆ, ರೋಹಿತ್ ಶರ್ಮಾ ಅವರ ಏಕದಿನ ವಿಶ್ವಕಪ್ ಭವಿಷ್ಯದ ಬಗ್ಗೆ ಬಿಸಿಸಿಐ ಇನ್ನೂ ಸ್ಪಷ್ಟನೆ ನೀಡಿಲ್ಲ.
'ಸಂಪೂರ್ಣವಾಗಿ ಸಿದ್ಧ'; ಭಾರತ ತಂಡಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ ಭುವನೇಶ್ವರ್ ಕುಮಾರ್
ಐಡಿಯಾ ಎಕ್ಸ್‌ಚೇಂಜ್ ಸಂದರ್ಶನದಲ್ಲಿ ಮಾತನಾಡಿದ ಅಜಿಂಕ್ಯ ರಹಾನೆ, "ರೋಹಿತ್ ಶರ್ಮ ಅವರು 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಲಿದ್ದಾರೆಂದು ಮಾಜಿ ನಾಯಕನಿಗೆ ತಿಳಿಸುವುದು ತುಂಬಾ ಮುಖ್ಯ. ಕಳೆದ ಹಲವು ವರ್ಷಗಳ ಅವರ ಕೊಡುಗೆಯನ್ನು ನೀವು ನೋಡಬಹುದು. ಇದು ನಿಜಕ್ಕೂ ಅದ್ಭುತವಾಗಿದೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿಇಂಥಾ ಅನುಭವಿ ಆಟಗಾರರನ್ನು ಆಡಿಸುವುದು ನಿಮಗೆ ತುಂಬಾ ಅಗತ್ಯವಾಗಿದೆ," ಎಂದು ಹೇಳಿದ್ದಾರೆ.
"ರೋಹಿತ್ ಶರ್ಮಾ ಅವರ ಭವಷ್ಯದ ಬಗ್ಗೆ ಎಲ್ಲಿಯೂ ಚರ್ಚೆ ಮಾಡಬಾರದು. ಅವರು ದೊಡ್ಡ ಆಟಗಾರ ಹಾಗಾಗಿ, ನೀವು ಅವರನ್ನು ಸರಣಿಯಿಂದ ಸರಣಿಗೆ ನೋಡಬಾರದು," ಎಂದು ಅಜಿಂಕ್ಯ ರಹಾನೆ ತಿಳಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧ ಏಕದಿನ ವಿಶ್ವಕಪ್ ಸರಣಿಗೆ ರೋಹಿತ್ ಶರ್ಮ ಅವರ ಪಾಲಿಗೆ ಕೊನೆಯ ಸರಣಿ ಎಂದು ಹೇಳಲಾಗುತ್ತಿತ್ತು. ಅಂದರೆ, ಲಾರ್ಡ್ಸ್‌ನಲ್ಲಿ ನಡೆದಿದ್ದ ಪಂದ್ಯ ರೋಹಿತ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಕೊನೆಯ ಪಂದ್ಯ ಎಂದು ಚರ್ಚೆಗಳು ನಡೆದಿದ್ದವು. ಆದರೆ, ಆ ಪಂದ್ಯದಲ್ಲಿ ಹಿಟ್‌ಮ್ಯಾನ್ 110 ಎಸೆತಗಳಲ್ಲಿ 138 ರನ್‌ಗಳ ದೊಡ್ಡ ಇನಿಂಗ್ಸ್ ಅನ್ನು ಆಡಿದ್ದರು ಹಾಗೂ ಟೀಕಾಕಾರರ ಬಾಯಿ ಮುಚ್ಚಿಸಿದ್ದರು.
ಶ್ರೀಲಂಕಾ ಟೆಸ್ಟ್ ಸರಣಿ; ಸಾಯಿ ಸುದರ್ಶನ್ ಔಟ್, ಸರ್ಫರಾಜ್ ಖಾನ್ ಇನ್
ಅಕ್ಟೋಬರ್ 19 ರಂದು ಭಾರತ ತಂಡ, ಆಸ್ಟ್ರೇಲಿಯಾ ಎದುರು ಮೂರು ಪಂದ್ಯಗಳ ಏಕದಿನ ಸರಣಿಯನ್ನುಆಡಲಿದೆ. ಈ ಸರಣಿಯಲ್ಲಿಯೂ ರೋಹಿತ್ ಶರ್ಮಾ ಆಡಲಿದ್ದಾರೆ. ಈ ಸರಣಿಯಲ್ಲಿಯೂ ಹಿಟ್‌ಮ್ಯಾನ್ ಕಡೆಯಿಂದ ದೊಡ್ಡ ಇನಿಂಗ್ಸ್ ಮೂಡಿ ಬಂದರೆ, ಖಂಡಿತವಾಗಿಯೂ ಅವರನ್ನು ಏಕದಿನ ವಿಶ್ವಕಪ್ ಟೂರ್ನಿಯ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ.
ವಿರಾಟ್ ಕೊಹ್ಲಿಗೂ ಬೆಂಬಲ ವ್ಯಕ್ತಪಡಿಸಿದ ರಹಾನೆ
ರೋಹಿತ್ ಶರ್ಮಾ ಅವರ ಜತೆಗೆ ವಿರಾಟ್ ಕೊಹ್ಲಿಗೂ ಕೂಡ 2027ರ ಐಸಿಸಿ ಏಕದಿನ ವಿಶ್ವಕಪ್ ಭಾರತ ತಂಡದಲ್ಲಿ ಉಳಿಸಬೇಕೆಂದು ಅಜಿಂಕ್ಯ ರಹಾನೆ ಆಗ್ರಹಿಸಿದ್ದಾರೆ.
"ಅವರನ್ನು ಮುಕ್ತವಾಗಿ ಆಡಲು ಬಿಡಬೇಕು. ಪ್ರತಿಯೊಬ್ಬರು ಕ್ರಿಕೆಟ್ ವೃತ್ತಿ ಜೀವನದಲ್ಲಿ ಈ ಹಂತವನ್ನು ತಲುಪುತ್ತಾರೆ ಆದರೆ, ಹಿರಿಯ ಆಟಗಾರರನ್ನು ನಾಯಕ ಹಾಗೂ ಟೀಮ್ ಮ್ಯಾನೇಜ್‌ಮೆಂಟ್ ಬೆಂಬಲಿಸಬೇಕಾದ ಅಗತ್ಯವಿದೆ. ಅವರನ್ನು 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಿಸಬೇಕು," ಎಂದು ರಹಾನೆ ತಿಳಿಸಿದ್ದಾರೆ.