ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌!

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಅವರ ಕುಟುಂಬಸ್ಥರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ 2026ರ ಟಿ20 ವಿಶ್ವಕಪ್ ಗೆಲುವಿನ ಚಿನ್ನದ ಪದಕವನ್ನು ವೀಕ್ಷಿಸಿದ ಮೋದಿ, ಸೂರ್ಯ ಕುಟುಂಬ ಮಕ್ಕಳೊಂದಿಗೆ ಸಮಯ ಕಳೆದಿದ್ದು ವಿಶೇಷ ಗಮನ ಸೆಳೆದಿದೆ.

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಸೂರ್ಯಕುಮಾರ್‌!

ಪಿಎಂ ಮೋದಿಯನ್ನು ಭೇಟಿಯಾದ ಸೂರ್ಯಕುಮಾರ್‌ ಯಾದವ್‌. -

Profile
Ramesh Kote Nov 6, 2026 4:56 PM

ನವದೆಹಲಿ: ಟೀಮ್ ಇಂಡಿಯಾದ ಮಾಜಿ ಟಿ20ಐ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ಅವರ ಕುಟುಂಬದವರು ಶುಕ್ರವಾರ (ನವೆಂಬರ್ 6) ನವದೆಹಲಿಯಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸೂರ್ಯಕುಮಾರ್ ಅವರ ಮಕ್ಕಳೊಂದಿಗೆ ಸಮಯ ಕಳೆದಿದ್ದು, ಭೇಟಿಯ ಕೆಲವು ಸುಂದರ ಕ್ಷಣಗಳು ಗಮನ ಸೆಳೆದಿವೆ.

ಈ ಭೇಟಿಯ ಕುರಿತು ಪ್ರಧಾನಿ ಮೋದಿ ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ವರ್ಷದ ದೀಪಾವಳಿ ಸಂಭ್ರಮಕ್ಕೆ ಭಗವಾನ್ ಶ್ರೀರಾಮ ಹಾಗೂ ಸರಯೂ ನದಿಯ ಆಗಮನ ಮತ್ತಷ್ಟು ಆಧ್ಯಾತ್ಮಿಕ ಮಹತ್ವವನ್ನು ನೀಡಿದೆ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

"ದೀಪಾವಳಿಯ ವಾತಾವರಣದಲ್ಲಿ ರಾಮ ಮತ್ತು ಸರಯೂ ಆಗಮನವಾಗಿದೆ. ಇದರಿಂದ ಈ ವರ್ಷದ ದೀಪಾವಳಿ ಸಂಭ್ರಮ ಮತ್ತಷ್ಟು ಪವಿತ್ರ ಹಾಗೂ ದೈವಿಕವಾಗಿದೆ," ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

IND vs NZ 2nd ODI: ತಂಡಗಳ ಸಂಭಾವ್ಯ ಪ್ಲೇಯಿಂಗ್‌ XI, ಪಿಚ್‌ ರಿಪೋರ್ಟ್‌, ಮುಖಾಮುಖಿ ದಾಖಲೆ ವಿವರ!

ಟಿ20 ವಿಶ್ವಕಪ್ ಚಿನ್ನದ ಪದಕ ಹಿಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಹಾಗೂ ಸೂರ್ಯಕುಮಾರ್ ಯಾದವ್ ಅವರ ಭೇಟಿಯ ಮತ್ತೊಂದು ವಿಶೇಷ ಕ್ಷಣವೆಂದರೆ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ಗೆದ್ದ ಚಿನ್ನದ ಪದಕ. ಸೂರ್ಯಕುಮಾರ್ ಯಾದವ್ ಅವರು ಭಾರತ ತಂಡದ ವಿಶ್ವಕಪ್ ಗೆಲುವಿನ ಚಿನ್ನದ ಪದಕವನ್ನು ಧರಿಸಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಮೋದಿ ಅವರು ಪದಕವನ್ನು ತಮ್ಮ ಕೈಯಲ್ಲಿ ಹಿಡಿದು ವೀಕ್ಷಿಸಿದರು. ಭಾರತದ ಐತಿಹಾಸಿಕ ವಿಶ್ವಕಪ್ ಸಾಧನೆಯನ್ನು ಸಂಭ್ರಮಿಸುವ ವಿಶೇಷ ಕ್ಷಣ ಇದಾಗಿತ್ತು.

ಸೂರ್ಯಕುಮಾರ್ ಯಾದವ್ ಅವರ ಕ್ರಿಕೆಟ್ ಸಾಧನೆ

ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್‌ನಲ್ಲಿ ಹಲವು ಮಹತ್ವದ ಸಾಧನೆಗಳನ್ನು ಮಾಡಿದ್ದಾರೆ. 2022 ಮತ್ತು 2023ರಲ್ಲಿ ಸತತವಾಗಿ ಐಸಿಸಿ ವರ್ಷದ ಟಿ20 ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. 2022ರ ಅಕ್ಟೋಬರ್‌ನಲ್ಲಿ ಐಸಿಸಿ ಟಿ20 ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಿದ್ದ ಅವರು, 2023ರ ಜನವರಿಯಲ್ಲಿ 910 ರೇಟಿಂಗ್ ಅಂಕಗಳನ್ನು ಗಳಿಸಿದ್ದರು.



2024ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸೂರ್ಯಕುಮಾರ್, 2026ರ ಟಿ20 ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಆ ಮೂಲಕ ಸತತ ಎರಡು ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿತ್ತು. ಅಲ್ಲದೆ, ಸೂರ್ಯಕುಮಾರ್ ನಾಯಕತ್ವದಲ್ಲಿ ಭಾರತ 2025ರ ಟಿ20 ಏಷ್ಯಾಕಪ್ ಪ್ರಶಸ್ತಿಯನ್ನೂ ಗೆದ್ದುಕೊಂಡಿತ್ತು.

ಆದರೆ 2026ರ ಟಿ20 ವಿಶ್ವಕಪ್ ಗೆಲುವಿನ ಬಳಿಕ ನಡೆದ ಇಂಗ್ಲೆಂಡ್ ಪ್ರವಾಸದ ಟಿ20 ಸರಣಿಗೆ ಸೂರ್ಯಕುಮಾರ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಅವರ ಇತ್ತೀಚಿನ ಬ್ಯಾಟಿಂಗ್ ವೈಫಲ್ಯ ತಂಡದಿಂದ ಹೊರಗುಳಿಯಲು ಪ್ರಮುಖ ಕಾರಣ ಎನ್ನಲಾಗಿದೆ. ಬಳಿಕ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿ ಉತ್ತಮ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ಅವರನ್ನು ಭಾರತದ ಹೊಸ ಟಿ20 ನಾಯಕನನ್ನಾಗಿ ನೇಮಕ ಮಾಡಲಾಗಿದೆ.