ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

IPL 2026: ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ ಕೆಎಸ್‌ಸಿಎ ವಕ್ತಾರ ವಿನಯ್‌ ಮೃತ್ಯುಂಜಯ!

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಹಾಗೂ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ಗೆ ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಹಾಗಾಗಿ 2026ರ ಐಪಿಎಲ್‌ ಪಂದ್ಯಗಳು ಈ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಭಿಮಾನಿಗಳು ಕಣ್ತುಂಬಿಸಿಕೊಳ್ಳಬಹುದಾಗಿದೆ.

ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ ಕೆಎಸ್‌ಸಿಎ ವಕ್ತಾರ!

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳಿಗೆ ಅನುಮತಿ ಸಿಕ್ಕಿದೆ. -

Profile
Ramesh Kote Jan 17, 2026 9:13 PM

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ, 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026) ಟೂರ್ನಿಯ ತನ್ನ ಆರಂಭಿಕ ಪಂದ್ಯವನ್ನು ತವರು ಅಂಗಣ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಕರ್ನಾಟಕ ರಾಜ್ಯ ಸರ್ಕಾರ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಹಾಗೂ ಐಪಿಎಲ್‌ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ಗೆ ಅನುಮತಿ ನೀಡಿದೆ ಎಂದು ಕೆಎಸ್‌ಸಿಎ ವಕ್ತಾರ ವಿನಯ್‌ ಮೃತ್ಯುಂಜಯ ತಿಳಿಸಿದ್ದಾರೆ. ಆ ಮೂಲಕ ಆರ್‌ಸಿಬಿ ಅಭಿಮಾನಿಗಳು ತನ್ನ ತವರು ಅಂಗಣದಲ್ಲಿ ಪಂದ್ಯಗಳನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ.

"ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಹಾಗೂ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ಸರ್ಕಾರದ ಗೃಹ ಇಲಾಖೆಯು ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ಗೆ ಅನುಮತಿ ನೀಡಿದೆ ಎಂದು ಘೋಷಿಸಲು ನಮಗೆ ಸಂತೋಷವಾಗುತ್ತಿದೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಿದ ನಿರ್ದಿಷ್ಟ ನಿಯಮಗಳು ಮತ್ತು ಷರತ್ತುಗಳ ಅನುಸರಣೆಗೆ ಅನುಮತಿ ಒಳಪಟ್ಟಿರುತ್ತದೆ," ಎಂದು ಕೆಎಸ್‌ಸಿಎ ಅಧಿಕಾರಿ ಹಾಗೂ ವಕ್ತಾರ ವಿನಯ್‌ ಮೃತ್ಯುಂಜಯ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

WPL 2026: ಮಹಿಳಾ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ 50 ವಿಕೆಟ್‌ ಪೂರ್ಣಗೊಳಿಸಿದ ಅಮೇಲಿಯಾ ಕೆರ್‌!

"ಕೆಎಸ್‌ಸಿಎಗೆ ಎಲ್ಲಾ ನಿಗದಿತ ಷರತ್ತುಗಳನ್ನು ಪೂರೈಸುವ ವಿಶ್ವಾಸ ಹೊಂದಿದೆ. ಅಸೋಸಿಯೇಷನ್‌ ಈಗಾಗಲೇ ತಜ್ಞರ ಪರಿಶೀಲನಾ ಸಮಿತಿಯ ಮುಂದೆ ವಿವರವಾದ ಅನುಸರಣೆ ಮಾರ್ಗಸೂಚಿಯನ್ನು ಮಂಡಿಸಿದೆ ಮತ್ತು ಎಲ್ಲಾ ಸುರಕ್ಷತೆ, ಭದ್ರತೆ ಮತ್ತು ಜನಸಂದಣಿ ನಿರ್ವಹಣಾ ಕ್ರಮಗಳನ್ನು ಅಕ್ಷರಶಃ ಜಾರಿಗೆ ತರಲು ಸಂಪೂರ್ಣವಾಗಿ ಬದ್ಧವಾಗಿದೆ," ಎಂದು ಅವರು ಹೇಳಿದ್ದಾರೆ.

2025ರ ಐಪಿಎಲ್ ನಂತರ ಸಂಭವಿಸಿದ ಕಾಲ್ತುಳಿತದಿಂದಾಗಿ ಬೆಂಗಳೂರಿನಲ್ಲಿ 2025ರಲ್ಲಿ ಮಹಿಳಾ ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ಸಾಧ್ಯವಾಗಲಿಲ್ಲ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಪ್ರಶಸ್ತಿ ಸಂಭ್ರಾಚರಣಿಯ ವೇಳೆ 10ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು ಮತ್ತು ಸುಮಾರು 50 ಜನರು ಗಾಯಗೊಂಡಿದ್ದರು. ವಿಶ್ವದ ಶ್ರೀಮಂತ ಫ್ರಾಂಚೈಸಿ ಲೀಗ್‌ನ 18ನೇ ಆವೃತ್ತಿಯಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ಅನ್ನು ಸೋಲಿಸಿ ತಮ್ಮ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿತ್ತು.

IND vs NZ: ರವೀಂದ್ರ ಜಡೇಜಾರ ವೈಫಲ್ಯದ ಬಗ್ಗೆ ಮೊಹಮ್ಮದ್ ಸಿರಾಜ್ ಹೇಳಿದ್ದಿದು!

ರಾಯ್ಪುರದಲ್ಲಿ ಆರ್‌ಸಿಬಿಯ 2 ಪಂದ್ಯಗಳು ನಡೆಯುತ್ತಾ?

ಆರ್‌ಸಿಬಿ ತಂಡ, ತನ್ನ ಎರಡು ತವರು ಪಂದ್ಯಗಳನ್ನು ರಾಯ್‌ಪುರದಲ್ಲಿ ಆಡುವ ಸಾಧ್ಯತೆಯಿದೆ. ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಇತ್ತೀಚೆಗೆ ಇದನ್ನು ದೃಢಪಡಿಸಿದ್ದರು. "ನಾವು ಇಂದು ಆರ್‌ಸಿಬಿ ಸಿಇಒ (ರಾಜೇಶ್ ಮೆನನ್) ಅವರೊಂದಿಗೆ ಮಾತನಾಡಿದ್ದೇವೆ. ಅವರು ನಮ್ಮನ್ನು ಭೇಟಿ ಮಾಡಲು ಬಂದಿದ್ದರು. ಎರಡು ಐಪಿಎಲ್ ಪಂದ್ಯಗಳು ಇಲ್ಲಿ ನಡೆಯುತ್ತವೆ ಎಂದು ನಾವು ನಿರ್ಧರಿಸಿದ್ದೇವೆ," ಎಂದು ತಿಳಿಸಿದ್ದರು.

2008ರಲ್ಲಿ ಉದ್ಘಾಟನೆಗೊಂಡಿದ್ದ ಆರ್‌ಸಿಬಿ ತಮ್ಮ ತವರು ಪಂದ್ಯಗಳನ್ನು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಇಲ್ಲಿಯವರೆಗೆ ನಡೆದ ಪ್ರತಿಯೊಂದು ಐಪಿಎಲ್ ಋತುವಿನಲ್ಲಿಯೂ ಬೆಂಗಳೂರಿನಲ್ಲಿ ಆರ್‌ಸಿಬಿ ಪಂದ್ಯಗಳು ನಡೆದಿವೆ.