ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ICC T20I Rankings: ಟಿ20ಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂದಲ್ಲಿ 32 ಸ್ಥಾನ ಏರಿಕೆ ಕಂಡ ಇಶಾನ್‌ ಕಿಶನ್!

ನ್ಯೂಜಿಲೆಂಡ್‌ ವಿರುದ್ಧ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶವನ್ನು ತೋರಿದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಇಶಾನ್‌ ಕಿಶನ್‌, ಬುಧವಾರ ಐಸಿಸಿ ಪರಿಷ್ಕೃತಗೊಳಿಸಿದ ಟಿ20ಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಗಮನಾರ್ಹ ಏರಿಕೆ ಕಂಡಿದ್ದಾರೆ. ಅವರು ಬರೋಬ್ಬರಿ 32 ಸ್ಥಾನಗಳಲ್ಲಿ ಏರಿಕೆ ಕಂಡಿದ್ದಾರೆ. ಸೈಯಮ್‌ ಆಯುಬ್‌ ಅವರು ಟಿ20ಐ ಆಲ್‌ರೌಂಡರ್‌ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

‌ಟಿ20ಐ ಬ್ಯಾಟಿಂಗ್‌ ಶ್ರೇಯಾಂದಲ್ಲಿ 32 ಸ್ಥಾನ ಏರಿಕೆ ಕಂಡ ಇಶಾನ್‌ ಕಿಶನ್!

ಟಿ20ಐ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಏರಿಕೆ ಕಂಡ ಇಶಾಕ್‌ ಕಿಶನ್‌. -

Profile
Ramesh Kote Feb 4, 2026 4:30 PM

ನವದೆಹಲಿ: ನ್ಯೂಜಿಲೆಂಡ್‌ ವಿರುದ್ಧ ಇತ್ತೀಚೆಗೆ ಅಂತ್ಯವಾಗಿದ್ದ ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ (IND vs NZ) ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಇಶಾನ್‌ ಕಿಶನ್‌ (Ishan Kishan) ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದರು. ಇದರ ಫಲವಾಗಿ ಅವರು ಐಸಿಸಿ ಪುರುಷರ ಟಿ20ಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ (ICC T20 Rankings) ಗಮನಾರ್ಹ ಏರಿಕೆಯನ್ನು ಕಂಡಿದ್ದಾರೆ. ಅವರು 32 ಸ್ಥಾನಗಳಲ್ಲಿ ಏರಿಕೆ ಕಂಡಿದ್ದು, 32ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಅವರು ಸದ್ಯ ಪಾಯಿಂಟ್ಸ್‌ ಟೇಬಲ್‌ನಲ್ಲಿ 584 ಅಂಕಗಳನ್ನು ಹೊಂದಿದ್ದಾರೆ. ಇನ್ನು ಪಾಕಿಸ್ತಾನ ತಂಡದ ಆಲ್‌ರೌಂಡರ್‌ ಸೈಯಮ್‌ ಆಯುಬ್‌ ಅವರು ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ರನ್‌ ಹೊಳೆ ಹರಿಸುವ ಮೂಲಕ ನ್ಯೂಜಿಲೆಂಡ್‌ ವಿರುದ್ಧದ ಟಿ20ಐ ಸರಣಿಯ ಮೂಲಕ ಭಾರತ ತಂಡಕ್ಕೆ ಮರಳಿದ್ದ ಇಶಾನ್‌ ಕಿಶನ್‌, ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದರು. ಅವರು ಆಡಿದ ಮೂರು ಪಂದ್ಯಗಳಲ್ಲಿ ಕ್ರಮವಾಗಿ 76 ರನ್‌, 28 ರನ್‌ ಹಾಗೂ 103 ರನ್‌ಗಳನ್ನು ಕಲೆ ಹಾಕಿದ್ದರು. ತಿಲಕ್‌ ವರ್ಮ ಅನುಸ್ಥಿತಿಯಲ್ಲಿ ಅವರು ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಿದ್ದರು. ಇದರ ಫಲವಾಗಿ ಅವರು ಟಿ20ಐ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಏರಿಕೆಯನ್ನು ಕಂಡಿದ್ದಾರೆ.

ಟಿ20 ವಿಶ್ವಕಪ್: ಪ್ರತಿ ಆವೃತ್ತಿಯ ವಿಜೇತರು, ನಾಯಕ ಪಟ್ಟಿ ಇಲ್ಲಿದೆ

ಅಗ್ರ ಸ್ಥಾನದಲ್ಲಿ ಮುಂದುವರಿದ ಅಭಿಷೇಕ್‌ ಶರ್ಮಾ

ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಅಭಿಷೇಕ್‌ ಶರ್ಮಾ ಅವರು ಟಿ20ಐ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಇಂಗ್ಲೆಂಡ್‌ ನಾಯಕ ಜೋಸ್‌ ಬಟ್ಲರ್‌ ಅವರು ಮೂರನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಶ್ರೀಲಂಕಾ ಆರಂಭಿಕ ಬ್ಯಾಟ್ಸ್‌ಮನ್‌ ಪಥುಮ್‌ ನಿಸಾಂಕ ಅವರು ಐದನೇ ಸ್ಥಾನಕ್ಕೆ ಬಂದಿದ್ದಾರೆ. ಭಾರತ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌ ಅವರು ಆರನೇ ಸ್ಥಾನಕ್ಕೆ ಬಂದಿದ್ದರೆ, ನ್ಯೂಜಿಲೆಂಡ್‌ ಆರಂಭಿಕ ಟಿಮ್‌ ಸೀಫರ್ಟ್‌ ಅವರು 9ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

ದಕ್ಷಿಣ ಆಫ್ರಿಕಾ ಬ್ಯಾಟ್ಸ್‌ಮನ್‌ ರಯಾನ್‌ ರಿಕೆಲ್ಟನ್‌ ಅವರು ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ 42 ಸ್ಥಾನಗಳಲ್ಲಿ ಏರಿಕೆ ಕಂಡಿದ್ದಾರೆ ಹಾಗೂ 40ನೇ ಸ್ಥಾನಕ್ಕೆ ಬಂದಿದ್ದಾರೆ. ಆಸ್ಟ್ರೇಲಿಯಾ ಆಲ್‌ರೌಂಡರ್‌ ಕ್ಯಾಮೆರಾನ್‌ ಗ್ರೀನ್‌ ಅವರು 16 ಸ್ಥಾನಗಳನ್ನು ಏರಿಕೆ ಕಂಡಿದ್ದು, 14ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಹರಿಣ ಪಡೆಯ ವಿಕೆಟ್‌ ಕೀಪರ್‌ ಕ್ವಿಂಟನ್‌ ಡಿ ಕಾಕ್‌ ಅವರು 15ನೇ ಸ್ಥಾನಗಳಲ್ಲಿ ಏರಿಕೆ ಕಂಡಿದ್ದು, 22ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

ಭಾರತ ಪಂದ್ಯ ಬಹಿಷ್ಕರಿಸಿದ ಪಾಕ್‌ಗೆ ಕೊಲಂಬೊದಲ್ಲಿ ಮಳೆ ಭೀತಿ!

ನಾಲ್ಕನೇ ಸ್ಥಾನಕ್ಕೆ ಆದಿಲ್‌ ರಶೀದ್‌

ಟಿ20ಐ ಬೌಲಿಂಗ್‌ ಶ್ರೇಯಾಂಕದಲ್ಲಿ ಇಂಗ್ಲೆಂಡ್ ಲೆಗ್ ಸ್ಪಿನ್ನರ್ ಆದಿಲ್ ರಶೀದ್ ಎರಡು ಸ್ಥಾನಗಳನ್ನು ಏರಿಕೆ ಕಂಡು ನಾಲ್ಕನೇ ಸ್ಥಾನಕ್ಕೆ ಬಂದಿದ್ದಾರೆ. ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್ ಎಂಟು ಸ್ಥಾನಗಳ ಜಿಗಿತದೊಂದಿಗೆ 23ನೇ ಸ್ಥಾನವನ್ನು ಪಡೆದಿದ್ದಾರೆ. ಮುಂಬರುವ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಇಬ್ಬರೂ ತಮ್ಮ ತಮ್ಮ ತಂಡಗಳಿಗೆ ಪ್ರಮುಖ ಪಾತ್ರವಹಿಸುವ ನಿರೀಕ್ಷೆಯಿದೆ.

ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದ ಅಗ್ರ 11ರ ಪಟ್ಟಿಯಲ್ಲಿ ಏಳು ವಿಭಿನ್ನ ತಂಡಗಳ ಆಟಗಾರರು ಸ್ಥಾನ ಪಡೆದಿದ್ದಾರೆ. ಇದು ಮುಂಬರುವ ಜಾಗತಿಕ ಟೂರ್ನಿಯತ್ತ ಸಾಗುತ್ತಿರುವ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಸ್ಪರ್ಧಾತ್ಮಕ ಆಳತೆಯನ್ನು ಸ್ಪಷ್ಟಪಡಿಸುತ್ತದೆ.

ಟಿ20 ವಿಶ್ವಕಪ್‌ ಹಿನ್ನೋಟ; ಇದುವರೆಗಿನ ದಾಖಲೆ ಪಟ್ಟಿ ಇಲ್ಲಿದೆ

ಆಲ್‌ರೌಂಡರ್‌ ಶ್ರೇಯಾಂಕದಲ್ಲಿ ಸೈಮ್‌ ಆಯುಬ್‌ಗೆ ಅಗ್ರ ಸ್ಥಾನ

ಆಸ್ಟ್ರೇಲಿಯಾ ವಿರುದ್ಧದ ಬಲಿಷ್ಠ ತವರು ಸರಣಿಯ ಬಳಿಕ ಪಾಕಿಸ್ತಾನ ಆರಂಭಿಕ ಬ್ಯಾಟರ್ ಸೈಮ್ ಆಯುಬ್ ಐಸಿಸಿ ಪುರುಷರ ಟಿ20ಐ ಆಲ್‌ರೌಂಡರ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೆ ಮರಳಿದ್ದಾರೆ. ಪಾಕಿಸ್ತಾನ ತಂಡ 3-0 ಅಂತರದ ಕ್ಲೀನ್ ಸ್ವೀಪ್ ಸಾಧಿಸಿದ ನಂತರ ಆಯುಬ್‌ ಮತ್ತೆ ಶೃಂಗಸ್ಥಾನಕ್ಕೇರಿದ್ದು, ಜಿಂಬಾಬ್ವೆ ಅನುಭವಿ ಸಿಕಂದರ್ ರಾಝಾ ಅವರನ್ನು ಹಿಂದಿಕ್ಕಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20ಐ ಸರಣಿಯಲ್ಲಿ 23ರ ವಯಸ್ಸಿನ ಆಲ್‌ರೌಂಡರ್‌ ಸೈಯಮ್‌ ಆಯುಬ್‌, 119 ರನ್‌ಗಳು ಹಾಗೂ ಮೂರು ವಿಕೆಟ್‌ಗಳನ್ನು ಕಬಳಿಸಿದ್ದರು. ಇವರ ಆಲ್‌ರೌಂಡರ್‌ ಆಟದ ನೆರವಿನಿಂದ ಪಾಕಿಸ್ತಾನ ತಂಡ, ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 3-0 ಅಂತರದಲ್ಲಿ ಕ್ಲೀನ್‌ ಸ್ವೀಪ್‌ ಮಾಡಿಕೊಂಡಿತ್ತು. ಆ ಮೂಲಕ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ.