IND A vs UAE A: 52 ಎಸೆತಗಳಲ್ಲಿ ಡಬಲ್ ಸೆಂಚುರಿ, ಲಿಸ್ಟ್ ಎ ಕ್ರಿಕೆಟ್ನಲ್ಲಿ ಮತ್ತೊಂದು ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ!
ಲಿಸ್ಟ್ ಎ ಕ್ರಿಕೆಟ್ನಲ್ಲಿ ಭಾರತ ಕ್ರಿಕೆಟ್ ತಂಡದ ಯುವ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅವರು ಯುಎಇ ವಿರುದ್ದದ ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ ಟೂರ್ನಿಯ ಪಂದ್ಯದಲ್ಲಿ ಕೇವಲ 52 ಎಸೆತಗಳಲ್ಲಿ ದ್ವಿಶತಕ ಬಾರಿಸಿದ್ದಾರೆ. ಆ ಮೂಲಕ ಲಿಸ್ಟ್ ಎ ಕ್ರಿಕೆಟ್ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆಯನ್ನು 15ರ ವಯಸ್ಸಿನ ವೈಭವ್ ಬರೆದಿದ್ದಾರೆ.
-
ದೋಹಾ: ಭಾರತೀಯ ಕ್ರಿಕೆಟ್ನ ಯುವ ಪ್ರತಿಭೆ ವೈಭವ್ ಸೂರ್ಯವಂಶಿ (Vaibhav Sooryavanshi) ಮತ್ತೊಮ್ಮೆ ವಿಶ್ವ ಕ್ರಿಕೆಟ್ನ ಗಮನ ಸೆಳೆದಿದ್ದಾರೆ. ಕೇವಲ 15ನೇ ವಯಸ್ಸಿನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಅವರು, ಇದೀಗ ಲಿಸ್ಟ್ ಎ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ದ್ವಿಶತಕ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಯುಎಇ ವಿರುದ್ದದದ ಪಂದ್ಯದಲ್ಲಿ ಅವರು ಈ ದಾಖಲೆಯನ್ನು ಬರೆದಿದ್ದಾರೆ.
ಎಸಿಸಿ ಪುರುಷರ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026ರ ಟೂರ್ನಿಯಲ್ಲಿ ಯುಎಇ ವಿರುದ್ಧದ ಪಂದ್ಯದಲ್ಲಿ ಭಾರತ ಎ ತಂಡದ ಪರ ಕಣಕ್ಕಿಳಿದ ಸೂರ್ಯವಂಶಿ ಕೇವಲ 52 ಎಸೆತಗಳಲ್ಲಿ ದ್ವಿಶತಕ ಪೂರೈಸಿ ಕ್ರಿಕೆಟ್ ಜಗತ್ತನ್ನೇ ಬೆರಗುಗೊಳಿಸಿದ್ದಾರೆ. ಅವರ ಈ ಇನಿಂಗ್ಸ್ನಲ್ಲಿ ಬರೋಬ್ಬರಿ 28 ಸಿಕ್ಸರ್ಗಳು ಸೇರಿವೆ. ಈ ದ್ವಿಶತಕದ ಮೂಲಕ ಅವರು ಯಶಸ್ವಿ ಜೈಸ್ವಾಲ್ ಅವರನ್ನು ವೈಭವ್ ಹಿಂದಿಕ್ಕಿದ್ದಾರೆ.
ಕೇವಲ 28 ಎಸೆತಗಳಲ್ಲಿ ಲಿಸ್ಟ್ ಎ ಶತಕ; ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ!
28 ಎಸೆತಗಳಲ್ಲಿ ಶತಕ, 52 ಎಸೆತಗಳಲ್ಲಿ ದ್ವಿಶತಕ!
ದೋಹಾದಲ್ಲಿ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಇ ತಂಡ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 249 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತ ಎ ತಂಡಕ್ಕೆ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಸ್ಫೋಟಕ ಆರಂಭ ನೀಡಿದರು.
ಯುಎಇ ಬೌಲರ್ಗಳನ್ನು ನಿರ್ದಯವಾಗಿ ದಂಡಿಸಿದ ಅವರು ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ನಂತರ ತಮ್ಮ ಆಕ್ರಮಣಕಾರಿ ಆಟವನ್ನು ಮುಂದುವರಿಸಿ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸಿದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್ನ ಅತ್ಯಂತ ವೇಗದ ಶತಕದ ದಾಖಲೆಯನ್ನೂ ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮೆಗರ್ಕ್ 29 ಎಸೆತಗಳಲ್ಲಿ ಶತಕ ಸಿಡಿಸಿದ್ದು ದಾಖಲೆಯಾಗಿತ್ತು. ಇದೀಗ ಸೂರ್ಯವಂಶಿ ಆ ದಾಖಲೆಯನ್ನು ಮುರಿದಿದ್ದಾರೆ.
FASTEST DOUBLE CENTURY IN LIST A CRICKET 🤯💯💯 Take a bow, Vaibhav Sooryavanshi 🫡 Updates ▶️ https://t.co/6Vwvc5BnWQ #TeamIndia | #RisingStarsAsiaCup | #INDAvUAE https://t.co/ZKJcJR9SDv
— BCCI (@BCCI) November 24, 2026
27 ಸಿಕ್ಸರ್ಗಳನ್ನು ಸಿಡಿಸಿದ ವೈಭವ್
ಶತಕದ ಬಳಿಕವೂ ವೈಭವ್ ಸೂರ್ಯವಂಶಿ ತಮ್ಮ ಬ್ಯಾಟಿಂಗ್ ವೇಗವನ್ನು ಕಡಿಮೆ ಮಾಡಲಿಲ್ಲ. ಸಿಕ್ಸರ್ಗಳ ಸುರಿಮಳೆಗೈದ ಅವರು ಕೇವಲ 52 ಎಸೆತಗಳಲ್ಲಿ ದ್ವಿಶತಕದ ಗಡಿ ತಲುಪಿದರು. ಅವರ ಇನಿಂಗ್ಸ್ನಲ್ಲಿ 27 ಸಿಕ್ಸರ್ಗಳು ದಾಖಲಾಗಿದ್ದು, ಲಿಸ್ಟ್ ಎ ಕ್ರಿಕೆಟ್ನಲ್ಲಿ ಮತ್ತೊಂದು ಗಮನಾರ್ಹ ದಾಖಲೆ ನಿರ್ಮಿಸಿದ್ದಾರೆ.
ಈ ಪಂದ್ಯದಲ್ಲಿ ಸೂರ್ಯವಂಶಿ ಕೇವಲ ವೈಯಕ್ತಿಕ ದಾಖಲೆಗಳನ್ನು ಮಾತ್ರವಲ್ಲದೆ, ಭಾರತ ಎ ತಂಡದ ಚೇಸ್ಗೂ ಭರ್ಜರಿ ವೇಗ ನೀಡಿದರು. 15ನೇ ವಯಸ್ಸಿನಲ್ಲೇ ಇಂತಹ ಸಾಧನೆ ಮಾಡಿರುವುದು ಅವರ ಅಸಾಧಾರಣ ಪ್ರತಿಭೆಗೆ ಸಾಕ್ಷಿಯಾಗಿದೆ.
ಲಿಸ್ಟ್ ಎ ಕ್ರಿಕೆಟ್ನಲ್ಲಿ ಸೂರ್ಯವಂಶಿಯ ದಾಖಲೆಗಳು
- ಕೇವಲ 28 ಎಸೆತಗಳಲ್ಲಿ ಶತಕ
- ಕೇವಲ 52 ಎಸೆತಗಳಲ್ಲಿ ದ್ವಿಶತಕ
- ಒಂದೇ ಇನಿಂಗ್ಸ್ನಲ್ಲಿ 27 ಸಿಕ್ಸರ್ಗಳು
- ಲಿಸ್ಟ್ ಎ ಕ್ರಿಕೆಟ್ನ ಅತ್ಯಂತ ವೇಗದ ಶತಕದ ದಾಖಲೆ
- ಲಿಸ್ಟ್ ಎ ಕ್ರಿಕೆಟ್ನ ಅತ್ಯಂತ ವೇಗದ ದ್ವಿಶತಕದ ದಾಖಲೆ